Homeಮುಖಪುಟಆಂಧ್ರಪ್ರದೇಶದಲ್ಲಿ ಮರ್ಯಾದೆಗೇಡು ಹತ್ಯೆ ಶಂಕೆ; ಅಂತಧರ್ಮೀಯ ವಿವಾಹವಾಗಿದ್ದ ಯುವತಿ ಶವವಾಗಿ ಪತ್ತೆ

ಆಂಧ್ರಪ್ರದೇಶದಲ್ಲಿ ಮರ್ಯಾದೆಗೇಡು ಹತ್ಯೆ ಶಂಕೆ; ಅಂತಧರ್ಮೀಯ ವಿವಾಹವಾಗಿದ್ದ ಯುವತಿ ಶವವಾಗಿ ಪತ್ತೆ

- Advertisement -
- Advertisement -

ಅನ್ಯಧರ್ಮೀಯ ಯುವಕನ ಪ್ರೀತಿಗೆ ಪೋಷಕರು ವಿರೋಧಿಸಿದ್ದು, ಊರು ತೊರೆದು ವಿವಾಹವಾಗಿದ್ದ ಯುವತಿಯೊಬ್ಬಳ ಮೃತದೇಹ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ವಿರೋಧದ ನಡುವೆಯೂ ವಿವಾಹವಾಗಿದ್ದ ಕಾರಣಕ್ಕಾಗಿ ಆಕೆಯನ್ನು ಪೋಷಕರೇ ಹತ್ಯೆ (ಮರ್ಯಾದೆಗೇಡು ಹತ್ಯೆ) ಮಾಡಿರಬಹುದು ಎಂದು ಶಂಕಿಸಲಾಗಿದೆ.

ಚಿತ್ತೂರು ಜಿಲ್ಲೆಯ ಯಾಸ್ಮಿನ್ ಬಾನು ಎಂಬಾಕೆ ಕಳೆದ ಕಳೆದ ನಾಲ್ಕು ವರ್ಷಗಳಿಂದ ಹಿಂದು ಯುವಕ ಸಾಯಿ ತೇಜ ಎಂಬಾತನನ್ನು ಪ್ರೀತಿಸುತ್ತಿದ್ದರು. ಆದರೆ ಇದಕ್ಕೆ ಬಾನು ಅವರ ಕುಟುಂಬದಿಂದ ವಿರೋಧವಿತ್ತು. ಹೀಗಾಗಿ, ಅವರು ಇದೇ ವರ್ಷದ ಫೆಬ್ರವರಿಯಲ್ಲಿ ಮನೆ ತೊರೆದು, ಯುವಕನೊಂದಿಗೆ ವಿವಾಹವಾಗಿದ್ದರು.

ಮದುವೆಯ ಬಳಿಕ ತಮ್ಮ ಸುರಕ್ಷತೆಗೆ ಪೋಷಕರಿಂದ ಬೆದರಿಕೆ ಇದೆಯೆಂದು ಪೊಲೀಸ್‌ ರಕ್ಷಣೆಯನ್ನೂ ಪಡೆದಿದ್ದರು. ಆದರೂ, ಇದೀಗ ಆಕೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಪೋಷಕರೇ ಹತ್ಯೆಗೈದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಬಾನು ಅವರ ಪತಿ ತೇಜ ಪ್ರತಿಕ್ರಿಯಿಸಿ, “ತಮ್ಮ ಮದುವೆಯಾದಾಗಿನಿಂದ ಬಾನು ಅವರ ಅಣ್ಣ ಮತ್ತು ತಂಗಿ ಪದೇಪದೆ ಕರೆ ಮಾಡುತ್ತಿದ್ದರು. ಬಾನು ಸಾವಿಗೂ ಮೂರು ದಿನಗಳ ಮುನ್ನ ತಮಗೆ ಬಾನು ಅವರ ಕುಟುಂಬಸ್ಥರು ಕರೆಮಾಡಿದ್ದರು. ಬಾನು ಅವರ ತಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಮನೆಗೆ ಬಂದು ಭೇಟಿಯಾಗುವಂತೆ ಒತ್ತಾಯಿಸಿದ್ದರು” ಎಂದು ವಿವರಿಸಿದ್ದಾರೆ.

“ತಂದೆಯನ್ನು ಭೇಟಿ ಮಾಡಲು ಬಾನು ತನ್ನ ಪೋಷಕರ ಮನೆಗೆ ಹೋಗಿದ್ದರು. ತೆರಳಿದ ಕೆಲವೇ ಗಂಟೆಗಳಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಕರೆ ಬಂದಿತು. ಆ ನಂತರ, ಬಾನು ಸಾವನ್ನಪ್ಪಿದ್ದಾರೆಂದು ಅವರ ಕುಟುಂಬದವರು ತಿಳಿಸಿದರು” ಎಂದು ತೇಜ ಹೇಳಿದ್ದಾರೆ.

ಬಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಪೋಷಕರು ಹೇಳುತ್ತಿದ್ದಾರೆ. ಆದರೆ, ಇದು ಕೊಲೆ ಎಂದು ತೇಜ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿರುವ ತೇಜ, “ಬಾನು ಅವರನ್ನು ಆಕೆಯ ಕುಟುಂಬದವರು ಕೊಲೆ ಮಾಡಿದ್ದಾರೆ. ಆತ್ಮಹತ್ಯೆಯೆಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆಕೆಯನ್ನು ಪೋಷಕರ ಮನೆಗೆ ಕರೆದುಕೊಂಡ ಹೋಗಿದ್ದ ಸಂಬಂಧಿಕರು ಪರಾರಿಯಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಾನು ಅವರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣ ಭೂ ವ್ಯವಹಾರ ಪ್ರಕರಣ: ‘ನನ್ನನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ..’; ಎಂದ ರಾಬರ್ಟ್ ವಾದ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...