Homeಮುಖಪುಟಆಂಧ್ರಪ್ರದೇಶ| ಪೂರ್ವ ಗೋದಾವರಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ; 6 ಮಂದಿ ಸಾವು

ಆಂಧ್ರಪ್ರದೇಶ| ಪೂರ್ವ ಗೋದಾವರಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ; 6 ಮಂದಿ ಸಾವು

- Advertisement -
- Advertisement -

ಆಂಧ್ರಪ್ರದೇಶದ ಪೂರ್ವ ಗೋದಾವರಿಯ ಪಟಾಕಿ ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದು, ಎಂಟು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪಟಾಕಿ ತಯಾರಿಸುತ್ತಿದ್ದ ಕಾರ್ಮಿಕರು ಬೆಂಕಿಯಲ್ಲಿ ಸಿಲುಕಿಕೊಂಡಿದ್ದು, ಪಟಾಕಿ ಉತ್ಪಾದನೆಯಲ್ಲಿ ಬಳಸುವ ಹೆಚ್ಚು ದಹಿಸುವ ರಾಸಾಯನಿಕಗಳಿಂದಾಗಿ ಬೆಂಕಿ ವೇಗವಾಗಿ ಹರಡಿತು. ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದು, ಹೆಚ್ಚಿನ ಸಾವುನೋವುಗಳಿಗೆ ಕಾರಣವಾಗಿದೆ.

ರಾಯವರಂ ಮಂಡಲದ ಕೊಮಾರಿಪಲೇಂ ಗ್ರಾಮದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ಘಟಕದಿಂದ ದಟ್ಟ ಹೊಗೆಯನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಬೆಂಕಿಯ ತೀವ್ರತೆಯು ರಕ್ಷಣಾ ಕಾರ್ಯಾಚರಣೆಗೆ ಸವಾಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್, ಕಂದಾಯ ಅಧಿಕಾರಿಗಳು, ತುರ್ತು ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸುರಕ್ಷತಾ ಕ್ರಮಗಳ ಕೊರತೆ ಅಥವಾ ರಾಸಾಯನಿಕಗಳ ಅಸಮರ್ಪಕ ನಿರ್ವಹಣೆ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ, ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದರು. ಪರಿಹಾರ ಮತ್ತು ವೈದ್ಯಕೀಯ ಸಹಾಯದ ಪ್ರಯತ್ನಗಳನ್ನು ಪರಿಶೀಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಭಾಗವಹಿಸುವಂತೆ ಸೂಚಿಸಿದರು.

“ಈ ದುರಂತ ಅಪಘಾತದಲ್ಲಿ ಹಲವಾರು ಜೀವಗಳು ನಷ್ಟವಾಗಿರುವುದು ಅಪಾರ ದುಃಖವನ್ನುಂಟು ಮಾಡಿದೆ. ಅಪಘಾತದ ಕಾರಣಗಳು, ಪ್ರಸ್ತುತ ಪರಿಸ್ಥಿತಿ, ಪರಿಹಾರ ಕ್ರಮಗಳು ಮತ್ತು ವೈದ್ಯಕೀಯ ನೆರವಿನ ಬಗ್ಗೆ ನಾನು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಹಿರಿಯ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ವೈಯಕ್ತಿಕವಾಗಿ ಭೇಟಿ ನೀಡಿ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸುವಂತೆ ಸೂಚಿಸಿದ್ದೇನೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ನೀಡಬೇಕೆಂದು ನಾನು ಸಲಹೆ ನೀಡಿದ್ದೇನೆ. ಸಂತ್ರಸ್ತ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ” ಎಂದು ಚಂದ್ರಬಾಬು ನಾಯ್ಡು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೋಲ್ಡ್ರಿಫ್ ಸಾವುಗಳು: ಕೆಮ್ಮಿನ ಸಿರಪ್‌ಗಳ ಕುರಿತು ಕೇಂದ್ರದ ಎಚ್ಚರಿಕೆ ನಿರ್ಲಕ್ಷಿಸಿದ್ದ ಫಾರ್ಮಾ ಕಂಪನಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -