Homeಮುಖಪುಟಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ 'ವಿದ್ಯುತ್ ಒಪ್ಪಂದ' ರದ್ದತಿಗೆ ಮುಂದಾದ ಆಂಧ್ರ ಸರ್ಕಾರ...

ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

- Advertisement -
- Advertisement -

ಅದಾನಿ ಗ್ರೀನ್ ಎನರ್ಜಿ, ಅದರ ಮುಖ್ಯಸ್ಥ ಗೌತಮ್ ಅದಾನಿ ಹಾಗೂ ಮತ್ತಿರರ ವಿರುದ್ದ ಲಂಚ, ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಅದಾನಿ ಸಂಸ್ಥೆ ಜೊತೆಗಿನ ವಿದ್ಯುತ್ ಒಪ್ಪಂದ ರದ್ದುಗೊಳಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತಿಸುತ್ತಿದೆ ಎಂದು ವರದಿಯಾಗಿದೆ.

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಯುಎಸ್‌ ಫೆಡರಲ್ ನ್ಯಾಯಾಲಯ ಗುರುವಾರ (ನ.21) ಬಂಧನ ವಾರೆಂಟ್ ಜಾರಿಗೊಳಿಸಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಂದ ಮಾಡಿಕೊಂಡಿರುವ ಗಂಭೀರ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ಇಸಿ) ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಫೆಡರಲ್ ಪ್ಯಾಸಿಕ್ಯೂಟರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಯುಎಸ್ಇಸಿ ನೀಡಿದ್ದ ದೂರಿನಲ್ಲಿ, ಗೌತಮ್ ಅದಾನಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರಿಗೆ 2021ರ ಆಗಸ್ಟ್‌ನಲ್ಲಿ ಅಂದಾಜು ರೂ.1,750 ಕೋಟಿ (ಸುಮಾರು $228 ಮಿಲಿಯನ್) ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಯುಎಸ್‌ ಅಟಾರ್ನಿ ಕಚೇರಿಯ ಪ್ರಕಾರ, 2021 ಮತ್ತು 2022ರಲ್ಲಿ ಗೌತಮ್ ಅದಾನಿಯವರು ಆಂಧ್ರ ಪ್ರದೇಶದ ಸಿಎಂ ಮತ್ತು ಸರ್ಕಾರಿ ಅಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಈ ವೇಳೆ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಯೊಂದಿಗೆ ವಿದ್ಯುತ್ ಮಾರಾಟ ಒಪ್ಪಂದಗಳಿಗೆ ಸಹಿ ಹಾಕಲು ಲಂಚ ನೀಡಿದ್ದರು.

“ಅಗತ್ಯ ಸೌಲಭ್ಯದ ಕೊರತೆ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಂಡಿರಲಿಲ್ಲ. ಹಾಗಾಗಿ, ಆಗಸ್ಟ್ 2021ರಲ್ಲಿ, ಗೌತಮ್ ಅದಾನಿ ಜಗನ್ ಮೋಹನ್ ರೆಡ್ಡಿಯವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು” ಎಂದು ಯುಎಸ್ಇಸಿ ತನ್ನ ದೂರಿನಲ್ಲಿ (Case 1:24-cv-08080) ಆರೋಪಿಸಿದೆ ಮತ್ತು ಆರೋಪಿಗಳಾದ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ವಿಚಾರಣೆಗೆ ಒತ್ತಾಯಿಸಿದೆ.

“ಜಗನ್ ಮೋಹನ್ ರೆಡ್ಡಿಯವರನ್ನು ಗೌತಮ್ ಅದಾನಿ ಭೇಟಿಯಾದಾಗ 7,000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಖರೀದಿಗೆ ಸಂಬಂಧಿಸಿ ಎಸ್‌ಇಸಿಐನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಲಂಚ ಪಾವತಿಸಿದ್ದಾರೆ ಅಥವಾ ಭರವಸೆ ನೀಡಿದ್ದಾರೆ” ಎಂದು ಯುಎಸ್ಇಸಿ ದೂರಿನಲ್ಲಿ ತಿಳಿಸಿದೆ.

ಅದಾನಿ ವಿರುದ್ದದ ದೋಷಾರೋಪ ಪಟ್ಟಿಯ ಪ್ರಕಾರ, ಆಂಧ್ರ ಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಛತ್ತೀಸ್‌ಗಢ ರಾಜ್ಯ ಸರ್ಕಾರಗಳಿಗೆ ನೀಡಲಾದ ಒಟ್ಟು ಲಂಚ ಸರಿಸುಮಾರು ರೂ.2029 ಕೋಟಿಗಳು (ಸುಮಾರು $265 ಮಿಲಿಯನ್), ಅದರಲ್ಲಿ ಸುಮಾರು 85 ಪ್ರತಿಶತ, ಅಂದರೆ ರೂ.1,750 ಕೋಟಿಗಳು ($228 ಮಿಲಿಯನ್) ಆಂಧ್ರ ಪ್ರದೇಶಕ್ಕೆ ಪಾವತಿಸಲಾಗಿದೆ ಅಥವಾ ಪಾವತಿಸುವ ಭರವಸೆ ನೀಡಲಾಗಿದೆ.

ಅದಾನಿ ಅವರು ಜಗನ್ ಮೋಹನ್ ರೆಡ್ಡಿಯನ್ನು ಭೇಟಿಯಾದ ಒಂದು ವಾರದ ನಂತರ, “ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಖರೀದಿಸುವ ಎಸ್ಇಸಿಐ ಪ್ರಸ್ತಾಪವನ್ನು ಒಪ್ಪಿಕೊಂಡು ಮೊದಲ ಹಂತದಲ್ಲಿ 7,000 ಮೆ.ವ್ಯಾ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ” ಎಂದು ಸರ್ಕಾರ ಸಾರ್ವಜನಿಕವಾಗಿ ಹೇಳಿತ್ತು. “ಇದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾವತಿಸಿದ ಅಥವಾ ಭರವಸೆ ನೀಡಿದ ಲಂಚವು ಕೆಲಸ ಮಾಡಿದೆ ಎಂದರ್ಥ” ಎಂದು ಯುಎಸ್‌ಎಸ್‌ಇಸಿ ದೂರಿನಲ್ಲಿ ಹೇಳಿದೆ.

ಆಂಧ್ರ ಪ್ರದೇಶದ ಈಗಿನ ರಾಜ್ಯ ಸರ್ಕಾರ ಹಿಂದಿನ ಆಡಳಿತದ ‘ಎಲ್ಲಾ ಆಂತರಿಕ ಫೈಲ್‌ಗಳನ್ನು ಪರಿಶೀಲನೆ ನಡೆಸುತ್ತಿದೆ. ಅದರ ಪ್ರಕಾರ, ಆಪಾದಿತ ಅವ್ಯವಹಾರ ನಡೆದಿದೆ ಎಂದು ರಾಜ್ಯ ಹಣಕಾಸು ಸಚಿವ ಪಯ್ಯಾವುಲಾ ಕೇಶವ್ ಸೋಮವಾರ ತಿಳಿಸಿದ್ದಾಗಿ ರಾಯಿಟರ್ಸ್‌ ವರದಿ ಮಾಡಿದೆ.

“ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ನಾವು ಮುಂದೆ ಏನು ಮಾಡಬಹುದು ಎಂಬುವುದನ್ನು ನಾವು ಪರಿಶೀಲಿಸುತ್ತೇವೆ. ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ” ಎಂದು ಕೇಶವ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ ಗೌತಮ್ ಅದಾನಿ : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...