Homeಮುಖಪುಟಆಂಧ್ರ ಪ್ರದೇಶ | ಶ್ರೀಕಾಕುಳಂ ವೆಂಕಟೇಶ್ವರ ದೇವಾಲಯದಲ್ಲಿ ಕಾಲ್ತುಳಿತ : ಕನಿಷ್ಠ 9 ಮಂದಿ ಸಾವು

ಆಂಧ್ರ ಪ್ರದೇಶ | ಶ್ರೀಕಾಕುಳಂ ವೆಂಕಟೇಶ್ವರ ದೇವಾಲಯದಲ್ಲಿ ಕಾಲ್ತುಳಿತ : ಕನಿಷ್ಠ 9 ಮಂದಿ ಸಾವು

- Advertisement -
- Advertisement -

ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಕಾರ್ತಿಕಮಾಸದ ಏಕಾದಶಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಗಳು ಹೇಳಿವೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಚಂದ್ರಬಾಬು ನಾಯ್ಡು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ನಿರ್ದೇಶಿಸಿದ್ದೇನೆ ಎಂದು ಹೇಳಿದ್ದಾರೆ.

ನ್ಯಾಯಾಲದ ಆದೇಶ ಧಿಕ್ಕರಿಸಿ ವ್ಯಕ್ತಿಗೆ ಕಿರುಕುಳ : ಪೊಲೀಸ್ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌, ಕಠಿಣ ಕ್ರಮಕ್ಕೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...