Homeಮುಖಪುಟಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ

ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ

- Advertisement -
- Advertisement -

ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆ, ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದ ಎಲ್ಲಾ 100 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ಅನಿಲ್ ಚಂದ್ರ ಪುನೇಠಾ ಅವರು ಆದೇಶಿಸಿದ್ದಾರೆ.

ಪುನೇಠಾ ಅವರು ಬುಧವಾರ (ಅ.21) ತಡರಾತ್ರಿ ಹೊರಡಿಸಿದ ಆದೇಶದಲ್ಲಿ, ಅಕ್ಟೋಬರ್ 22ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರು ಅಥವಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವರದಿಗಳನ್ನು ಪಡೆದ ನಂತರ ಚುನಾವಣೆಗಳ ಕುರಿತು ಆದೇಶವನ್ನು ಹೊರಡಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದ 13 ಮಹಾನಗರ ಪಾಲಿಕೆಗಳು, 87 ಪುರಸಭೆಗಳು ಮತ್ತು ನಗರ ಪಂಚಾಯತ್‌ಗಳ ಚುನಾವಣೆಗಾಗಿ ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೋಬರ್ 16ರಿಂದ 18ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ ಮತ್ತು ಅಕ್ಟೋಬರ್ 19ರಂದು ನಾಮಪತ್ರಗಳ ಪರಿಶೀಲನೆ ನಡೆಯಿತು ಎಂದು ಅವರು ಹೇಳಿದ್ದಾರೆ.

ಆದರೆ, ಚುನಾವಣೆಯ ಅಭ್ಯರ್ಥಿಗಳ ಅಂತಿಮ ಪಟ್ಟಿಯ ಪ್ರಕಟಣೆಯನ್ನು ಅಕ್ಟೋಬರ್ 25ರವರೆಗೆ ಮುಂದೂಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಿಂದಾಗಿ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಭಾವಿಸುವ ಸಂದರ್ಭಗಳಲ್ಲಿ, ಅರ್ಜಿದಾರ ಪಕ್ಷ (ವೈಎಸ್‌ಆರ್‌ಸಿಪಿ) ಮತ್ತು ಇತರ ಅಭ್ಯರ್ಥಿಗಳು ಸಲ್ಲಿಸಿದ ಮನವಿಗಳು, ಸಾಕ್ಷ್ಯದ ವಸ್ತುಗಳು ಹಾಗೂ ವಿದ್ಯುನ್ಮಾನ ಸಾಕ್ಷ್ಯಗಳನ್ನು ಪರಿಗಣಿಸಿ, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ ಕುರಿತು ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಸೂಚಿಸಿದೆ ಎಂದು ತಿಳಿಸಿದ್ದಾರೆ.

ಆಂಧ್ರ ಪ್ರದೇಶ ಹೈಕೋರ್ಟ್ ನಾಮಪತ್ರ ಸಲ್ಲಿಕೆ ಅವಧಿಯನ್ನು ವಿಸ್ತರಿಸಲು ನಿರಾಕರಿಸಿದ ನಂತರ ವೈಎಸ್‌ಆರ್‌ಸಿಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅಕ್ಟೋಬರ್ 16 ರಿಂದ 18 ರವರೆಗೆ ನಿಗದಿಯಾಗಿದ್ದ ನಾಮಪತ್ರ ಸಲ್ಲಿಕೆ ಅವಧಿಯಲ್ಲಿ ತಮ್ಮ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ, ಬೆದರಿಕೆ ಹಾಕಲಾಗಿದೆ ಅಥವಾ ನಾಮಪತ್ರ ಕೇಂದ್ರಗಳಿಗೆ ತಲುಪದಂತೆ ತಡೆಯಲಾಗಿದೆ ಎಂದು ಪಕ್ಷವು ಆರೋಪಿಸಿದೆ. ಅಲ್ಲದೆ, ತಮ್ಮ ಅಭ್ಯರ್ಥಿಗಳ ನಾಮಪತ್ರಗಳನ್ನು ಕಸಿದುಕೊಳ್ಳಲಾಗಿದೆ ಅಥವಾ ಹರಿದು ಹಾಕಲಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಬಳಸುವ ಫಾರ್ಮ್‌-6 ಅನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬಹುದು. ಆದರೆ, ಇಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯ ಅನುಸಾರವೇ ಕೈಗೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ...

ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್

ಮೀಸಲಾತಿ ಸೀಟುಗಳ ಹಂಚಿಕೆ ವ್ಯತ್ಯಾಸಕ್ಕೆ ವಿವರಣೆ ನೀಡುವಂತೆ ಬಾಪ್ಸಾ ಆಗ್ರಹ 2026-27ನೇ ಶೈಕ್ಷಣಿಕ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪಿಎಚ್‌ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣದಲ್ಲಿ ಕೊರತೆಯಾಗಿದೆ ಎಂದು...

ಜೀವನ ನಿರ್ವಹಣಾ ವೆಚ್ಚದ ಏರಿಕೆ ವಿರುದ್ಧ ಫ್ರಾನ್ಸ್‌ನಲ್ಲಿ ಪ್ರತಿಭಟನೆ: ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ಜೀವನ ನಿರ್ವಹಣಾ ವೆಚ್ಚದ ಏರಿಕೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಿಗೆ ತಿರುಗಿದ ಹಿನ್ನೆಲೆಯಲ್ಲಿ, ಪಶ್ಚಿಮ ಯುರೋಪಿಯನ್ ದೇಶದಲ್ಲಿರುವ ಮತ್ತು ಅಲ್ಲಿಗೆ ಪ್ರಯಾಣಿಸುತ್ತಿರುವ ತಮ್ಮ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು...

ನ್ಯಾಯಾಂಗ ಬಂಧನದಿಂದ ಬಿಡುಗಡೆ ಬೆನ್ನಲ್ಲೇ ಸಿಜೆಪಿ ನಾಯಕರಿಗೆ ದೆಹಲಿ ಕ್ರೈಮ್ ಬ್ರಾಂಚ್ ಸಮನ್ಸ್

ದೆಹಲಿ ಪೊಲೀಸ್ ಅಪರಾಧ ವಿಭಾಗವು (ಕ್ರೈಮ್ ಬ್ರಾಂಚ್) ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ಅ.22) ಮಧ್ಯಾಹ್ನ 12...

ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ

ಹುಗ್ಲಿ ನದಿಯಲ್ಲಿ ದುರ್ಗಾ ವಿಸರ್ಜನೆಯ ಸಮಯದಲ್ಲಿ ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿಯ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಬುಧವಾರ ಹೇಳಿದ್ದಾರೆ. ಸುರಕ್ಷತಾ ಕಾಳಜಿಗಳು ಮತ್ತು...

ಮಹಾರಾಷ್ಟ್ರ ಸಿಇಒ ಮನವಿಗೆ ಸ್ಪಂದಿಸಿದ ಚುನಾವಣಾ ಆಯೋಗ: ‘ಇಸಿಐನೆಟ್’ ಸಾಫ್ಟ್‌ವೇರ್‌ನಲ್ಲಾಯಿತು 4 ಪ್ರಮುಖ ಬದಲಾವಣೆ!

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಂತ್ರಿಕ ಸಾಫ್ಟ್‌ವೇರ್‌ನ ಅತಿಯಾದ ನಿಯಂತ್ರಣವು ಸ್ಥಳೀಯ ನೋಂದಣಿ ಅಧಿಕಾರಿಗಳ ಶಾಸನಬದ್ಧ ಅಧಿಕಾರವನ್ನೇ ಕಸಿದುಕೊಳ್ಳುತ್ತಿದೆ ಎಂಬ ತೀವ್ರ ಕಳವಳದ ಬೆನ್ನಲ್ಲೇ, ಭಾರತೀಯ ಚುನಾವಣಾ ಆಯೋಗವು ತನ್ನ 'ಇಸಿಐನೆಟ್' (ECINet)...

ಮಸೀದಿಯಲ್ಲಿ ಚುಂಬಿಸಿದ್ದಕ್ಕೆ ಮರಣದಂಡನೆ? ಸೌದಿ ಅಮಾನವೀಯ ತೀರ್ಪಿಗೆ ತೀವ್ರ ಆಕ್ರೋಶ

ಮುಸ್ಲಿಂ ಸಮುದಾಯದ ಪವಿತ್ರ ನಗರವಾದ ಮೆಕ್ಕಾದ ಮಸೀದಿಯೊಂದರಲ್ಲಿ ಅನೈತಿಕ ಕೃತ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಸೌದಿ ಅರೇಬಿಯಾ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಮರಣದಂಡನೆ ವಿಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಮರಣದಂಡನೆಗಳು...

ಯೂಸುಫ್ ಪಠಾಣ್‌ಗೆ ವಡೋದರಾದ ವಿವಾದಿತ ನಿವೇಶನ ಹಂಚಿಕೆ ಮಾಡಿದ ಗುಜರಾತ್ ಬಿಜೆಪಿ ಸರ್ಕಾರ : ಟಿಎಂಸಿ ತೊರೆದು ಎನ್‌ಡಿಎ ಬೆಂಬಲಿಸಿದ್ದಕ್ಕೆ ಗಿಫ್ಟ್?

ಲೋಕಸಭಾ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರಿಗೆ ವಡೋದರಾದಲ್ಲಿರುವ 978 ಚದರ ಮೀಟರ್ ವಿಸ್ತೀರ್ಣದ ವಿವಾದಿತ ನಿವೇಶನವನ್ನು ಹಂಚಿಕೆ ಮಾಡಲು ಗುಜರಾತ್‌ನ ಬಿಜೆಪಿ ಸರ್ಕಾರವು ಅನುಮೋದನೆ ನೀಡಿದೆ. ಈ ಸಂಬಂಧ...

‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ...

ಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್: ಹೈಕೋರ್ಟ್‌ನಲ್ಲಿ ಮೇಲ್ಮನವಿಗೆ ಅವಕಾಶ

ಖಾಸಗಿ ಕಂಪನಿಯಿಂದ ಅಕ್ರಮ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 'ಸಿಎಂಆರ್‌ಎಲ್-ಎಕ್ಸಾಲಾಜಿಕ್' ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪುತ್ರಿ ವೀಣಾ ಟಿ. ಹಾಗೂ ಅಳಿಯ, ಮಾಜಿ ಸಚಿವ...