Homeಮುಖಪುಟಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

- Advertisement -
- Advertisement -

ಆಂಧ್ರಪ್ರದೇಶದ ಎಸ್‌.ವಿ.ವೆಟರ್ನರಿ ವಿಶ್ವವಿದ್ಯಾಲಯದ ಡೈರಿ ಟೆಕ್ನಾಲಜಿ ಕಾಲೇಜಿನಲ್ಲಿ ದಲಿತ ಸಹಾಯಕ ಪ್ರಾಧ್ಯಾಪಕ ಡಾ. ರವಿ ಅವರ ಕಚೇರಿಯಿಂದ ಪ್ರಾಚಾರ್ಯರು ಕುರ್ಚಿಯನ್ನು ತೆಗೆದುಹಾಕಿದ ಘಟನೆ ವರದಿಯಾಗಿದೆ. ಇದರ ಪರಿಣಾಮವಾಗಿ ಪ್ರಾಧ್ಯಾಪಕರು ನೆಲದ ಮೇಲೆ ಕುಳಿತು ಕೆಲಸ ಮಾಡುವಂತಾಗಿದ್ದು,   ಇದು ಜಾತಿ ತಾರತಮ್ಯದ ಪ್ರಕರಣ ಎಂದು ಹಲವರು ಆರೋಪಿಸಿದ್ದಾರೆ.

ಕಳೆದ ಗುರುವಾರ (ಜೂ.19) ಕಾಲೇಜಿನಿಂದ ರಜೆ ತೆಗೆದುಕೊಂಡಿದ್ದ ಡಾ.ರವಿಯವರು ಶುಕ್ರವಾರ ಕಾಲೇಜಿಗೆ ಮರಳಿ ಬಂದಾಗ ತಮ್ಮ ಕೊಠಡಿಯಲ್ಲಿ ಕುರ್ಚಿ ಇಲ್ಲದಿರುವುದು ಕಂಡುಬಂದಿತ್ತು. ಅಸೋಸಿಯೇಟ್ ಡೀನ್ ರವೀಂದ್ರ ರೆಡ್ಡಿ ಅವರು ಕೊಠಡಿಯನ್ನು ಪರೀಕ್ಷಿಸಲು ಬಂದಿದ್ದಾಗ ಡಾ.ರವಿಯವರು ಕುಳಿತುಕೊಳ್ಳುತ್ತಿದ್ದ ಕುರ್ಚಿಯನ್ನು ತೆಗೆಸಿಹಾಕಿಸಿದ್ದರು.

ವೈರಲ್ ಆಗಿರುವ ಚಿತ್ರಗಳಲ್ಲಿ ಡಾ.ರವಿ ತಮ್ಮ ಕಚೇರಿ ಅಥವಾ ಕೊಠಡಿಯೊಳಗಿನ ನೆಲದ ಮೇಲೆ ಬಿಳಿ ಬಟ್ಟೆಯೊಂದರ ಮೇಲೆ ಕುಳಿತಿರುವುದು ಕಾಣಿಸುತ್ತದೆ. ಇದು ಅವರ ಪ್ರತಿಭಟನೆಯ ಸಂಕೇತವಾಗಿದೆ. ಅವರ ಮುಂದೆ ಕಂಪ್ಯೂಟರ್ ಮಾನಿಟರ್, ಕೀಬೋರ್ಡ್ ಮತ್ತು ಸಿಪಿಯು ಇವೆ. ಕಂಪ್ಯೂಟರ್ ಗೆ ಸಂಬಂಧಿಸಿದ ವೈರ್‌ಗಳು ಸಹ ನೆಲದ ಮೇಲೆ ಹರಡಿಕೊಂಡಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಈ ಚಿತ್ರಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಅನೇಕರು ಈ ಘಟನೆಯನ್ನು “ಹಾಸ್ಯಾಸ್ಪದ” ಮತ್ತು “ಅಸಹ್ಯಕರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ಡೀನ್ ನಾಗೇಶ್ವರ ರಾವ್ ಅವರು ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ. ಡಿಬಿಎಂ ವಿಭಾಗಕ್ಕೆ ಅಗತ್ಯಕ್ಕೆ ತಕ್ಕಂತೆ ಎರಡು ಕುರ್ಚಿಗಳನ್ನು ಖರೀದಿಸಲಾಗಿತ್ತು ಮತ್ತು ಅವುಗಳಲ್ಲಿ ಒಂದು ಡೈರಿ ಟೆಕ್ನಾಲಜಿ ವಿಭಾಗದಲ್ಲಿ ಕಂಡುಬಂದಿದ್ದರಿಂದ ಅದನ್ನು ಬದಲಾಯಿಸಲಾಯಿತು ಎಂದು ತಿಳಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಈ ಘಟನೆ ಕುರಿತು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ ತಗೆದುಕೊಂಡಿದೆ. ದಲಿತ ಸಹಾಯಕ ಪ್ರಾಧ್ಯಾಪಕರ ಮೇಲೆ ಇಂತಹ ಅವಮಾನ ನಡೆಯುತ್ತಿದ್ದರೂ, ಮುಖ್ಯಮಂತ್ರಿ ನಾಯ್ಡು ಅವರು ಯಾವುದೇ ಕ್ರಮ ಕೈಗೊಳ್ಳದೆ ಏಕೆ ಮೌನ ವಹಿಸಿದ್ದಾರೆ ಎಂದು ಅದು ಪ್ರಶ್ನಿಸಿದೆ.

ಸಾಮಾಜಿಕ ಜಾಲತಾಣದ ಅನೇಕ ಬಳಕೆದಾರರು ಈ ಘಟನೆಯನ್ನು ಖಂಡಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ  ಜಾತಿ ತಾರತಮ್ಯವು ಇನ್ನೂ ಆಳವಾಗಿ ಬೇರೂರಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಅದು ಹೇಳಿದೆ. ಕೆಲವು ಪಕ್ಷದವರು ಮೀಸಲಾತಿಯನ್ನು ತೆಗೆದುಹಾಕಲು ಬಯಸುತ್ತಿದ್ದರೂ, ಜಾತಿ ತಾರತಮ್ಯವನ್ನು ತೊಡೆದುಹಾಕಲು ಏನೂ ಕ್ರಮಕೈಗೊಳ್ಳುತ್ತಿಲ್ಲ ಎಂದು ವೈಎಸ್ಆರ್ ಪಕ್ಷವು ಆರೋಪಿಸಿದೆ.

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...