Homeಮುಖಪುಟಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

- Advertisement -
- Advertisement -

ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏಳು ಮತಗಟ್ಟೆಗಳಲ್ಲಿ ಮಾಚರ್ಲಾ ಕ್ಷೇತ್ರದ ಹಾಲಿ ಶಾಸಕ, ವೈಎಸ್‌ಆರ್‌ಸಿಪಿ ಮುಖಂಡ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡಿದ್ದು, ಶಾಸಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇವಿಎಂ ಧ್ವಂಸ ಪ್ರಕರಣದಲ್ಲಿ ಶಾಸಕರನ್ನು ಆರೋಪಿ ಎಂದು ಹೆಸರಿಸಲಾಗಿದ್ದು, ಸೋಲಿನ ಭೀತಿಯಿಂದ ಶಾಸಕರು ಮತ್ತು ವೈಎಸ್‌ಆರ್‌ಸಿಪಿ ಇಂತಹ ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ ಹೇಳಿಕೊಂಡಿದೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳು ಮತ್ತು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಾಗ ಈ ಘಟನೆ ನಡೆದಿದೆ. ಹಲವೆಡೆ ಚುನಾವಣೆಯ ದಿನ ಹಿಂಸಾಚಾರ ನಡೆದಿದ್ದು, ಆ ನಂತರವೂ ಅಲ್ಲಲ್ಲಿ ಹಲವೆಡೆ ಅಹಿತಕರ ಘಟನೆ ನಡೆದಿದೆ.

ವೈರಲ್‌ ವಿಡಿಯೋದಲ್ಲಿ ಏನದೆ?

ಶಾಸಕ ರಾಮಕೃಷ್ಣ ರೆಡ್ಡಿ ಪಾಲ್ವಾಯಿ ಗೇಟ್ ಮತಗಟ್ಟೆ ಕೇಂದ್ರಕ್ಕೆ ಹೋಗಿದ್ದು, ಅಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಅವರನ್ನು ಸ್ವಾಗತಿಸಲು ಎದ್ದು ನಿಂತಿದ್ದಾರೆ. ಎಂಎಲ್ಎ ಒಂದು ಮಾತನ್ನೂ ಹೇಳದೆ, ಇವಿಎಂ ಇರಿಸಿರುವ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿದ್ದ ವಿವಿಪ್ಯಾಟ್‌ ಯಂತ್ರವನ್ನು ಎತ್ತಿಕೊಂಡು ನೆಲಕ್ಕೆ ಎಸೆದಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ್ದ ಓರ್ವರು ಶಾಸಕರ ಸಹಾಯಕರಿಗೆ ಹಲ್ಲೆ ನಡೆಸಿದ್ದಾರೆ, ಶಾಸಕರ ಮೇಲೂ ಹಲ್ಲೆಗೆ ಮುಂದಾಗುತ್ತಾರೆ, ಈ ವೇಳೆ ಶಾಸಕರು ಆತನಿಗೆ ಕೈಯ್ಯಲ್ಲೇ ಬೆದರಿಕೆ ಹಾಕಿ ಮತಗಟ್ಟೆಯಿಂದ ನಿರ್ಗಮಿಸುತ್ತಾರೆ. ನಂತರ ಚುನಾವಣಾ ಅಧಿಕಾರಿಯೊಬ್ಬರು ನೆಲದ ಮೇಲೆ ಬಿದ್ದಿರುವ ವಿವಿಪ್ಯಾಟ್‌ನ್ನು ರೆಕಾರ್ಡ್ ಮಾಡಿದ್ದಾರೆ.

ಮಾಚರ್ಲ ಪಲ್ನಾಡು ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ, ಈ ಕ್ಷೇತ್ರದಲ್ಲಿ ಮತದಾನದ ದಿನ ಮತ್ತು ನಂತರ ಹೆಚ್ಚಾಗಿ ಹಿಂಸಾಚಾರ ನಡೆದಿತ್ತು.

ಘಟನೆ ಬಗ್ಗೆ ಟಿಡಿಪಿ  ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ವೈಎಸ್‌ಆರ್‌ಸಿಪಿ ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮಾಚರ್ಲಾ ಕ್ಷೇತ್ರದ ಪಾಲ್ವಾಯಿ ಗೇಟ್ ಮತದಾನ ಕೇಂದ್ರದಲ್ಲಿ ಇವಿಎಂನ್ನು ಧ್ವಂಸಗೊಳಿಸಿದ್ದಾರೆ. ಚುನಾವಣಾ ಆಯೋಗವು ರಾಮಕೃಷ್ಣ ರೆಡ್ಡಿ  ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಸೋಲಿನ ಭಯದಿಂದ ಇವಿಎಂಗಳನ್ನು ರೆಡ್ಡಿ ಧ್ವಂಸಗೊಳಿಸಿದ್ದಾರೆ. ಜೂನ್ 4ರಂದು ಜನರು ವೈಎಸ್‌ಆರ್‌ಸಿಪಿಯ ಬಣ ರಾಜಕೀಯದ ಬಗ್ಗೆ ನಿಜವಾದ ತೀರ್ಪು ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಚರ್ಲಾ ಅಸೆಂಬ್ಲಿ ಕ್ಷೇತ್ರದಲ್ಲಿ ಪಿಎಸ್ ಸಂಖ್ಯೆ 202ರ ಜೊತೆಗೆ 7 ಮತಗಟ್ಟೆ ಕೇಂದ್ರಗಳಲ್ಲಿ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ಚುನಾವಣಾ ಆಯೋಗ(ಇಸಿ) ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಗೆ ಸಂಬಂಧಿಸಿ ತನಿಖೆಗೆ ಪಲ್ನಾಡು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ಮತಗಟ್ಟೆಗಳ ವಿಡಿಯೋ ದೃಶ್ಯಾವಳಿಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್ ಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ. ಪೊಲೀಸರು ಶಾಸಕರನ್ನು ಆರೋಪಿ ಎಂದು ಹೆಸರಿಸಿದ್ದು, ಭವಿಷ್ಯದಲ್ಲಿ ಯಾರೂ ಇಂತಹ ದುಷ್ಕೃತ್ಯಗಳನ್ನು ಎಸಗಲು ಧೈರ್ಯ ಮಾಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನು ಓದಿ: ಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...