Homeಮುಖಪುಟಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

- Advertisement -
- Advertisement -

ಇಂದು ಸಾಮಾಜಿಕ ಜಾಲತಾಣಗಳಲ್ಲಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್‌ ಆಗುತ್ತಿದೆ. ಅದರೊಟ್ಟಿಗೆ ಮೋದಿಯವರ ಹಳೆಯ ಹೋರಾಟದ ಫೋಟೊಗಳನ್ನು ಹಂಚಿಕೊಂಡು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಹಾಗಾದ್ರೆ ಈ ಆಂದೋಲನ್ ಜೀವಿ ಅಂದ್ರೆ ಏನಂತ ನೋಡೋಣ ಬನ್ನಿ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದಾರೆ.

ಮುಂದುವರಿದು ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್‌ ಜೀವಿ ಎಂಬ ಹೊಸ ಅಸ್ತಿತ್ವವು ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ, ವಕೀಲರ ಅಥವಾ ಕಾರ್ಮಿಕರ ಹೋರಾಟದಲ್ಲಿಯೂ ಇರುತ್ತಾರೆ. ಕೆಲವೊಮ್ಮೆ ವೇದಿಕೆಯ ಮುಂದಿದ್ದರೆ ಕೆಲವೊಮ್ಮೆ ಹಿಂದಿದ್ದು ಕೆಲಸ ಮಾಡುತ್ತಾರೆ. ಹೋರಾಟಗಳಿಲ್ಲದೆ ಅವರು ಬದುಕುವುದಿಲ್ಲ. ನಾವು ಅಂತಹ ಜನರನ್ನು ಗುರುತಿಸಬೇಕು ಮತ್ತು ಅವರಿಂದ ರಾಷ್ಟ್ರವನ್ನು ರಕ್ಷಿಸಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿಯವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಡಿಪಾರ್ ಜೀವಿಯಾಗುವುದಕ್ಕಿಂತ ಆಂದೋಲನ್ ಜೀವಿಯಾಗುವುದು ಉತ್ತಮ ಎಂದು ಹಲವರು ಹೇಳಿದರೆ, ಮತ್ತೆ ಕೆಲವರು ಮೋದಿಯವರೆ ನೀವು ಸಹ ಹೋರಾಟದ ಮೂಲಕವೇ ಅಧಿಕಾರಕ್ಕೆ ಬಂದಿದ್ದು ಎಂಬುದನ್ನು ಮರೆಯಬೇಡಿ ಎಂದು ಛೇಡಿಸಿದ್ದಾರೆ. ಮೋದಿಯವರು ಭಾಗವಹಿಸಿದ ಹೋರಾಟದ ಹಳೆಯ ಫೋಟೊಗಳನ್ನು ಹಾಕಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ರೋಲ್ ಮಾಡುತ್ತಿದ್ದಾರೆ.

ನಾನು ಕಾಳಜಿವಹಿಸುತ್ತೇನೆ ಹಾಗಾಗಿ ನಾನು ಆಂದೋಲನ್ ಜೀವಿ ಎಂದು ಖ್ಯಾತ ಸಂಗೀತಗಾರ ಟಿ.ಎಂ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಶಾಂತಿಯುತವಾಗಿ ಹೋರಾಟ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಸಂವಿಧಾನದ 19(1)(ಎ) ವಾಕ್ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 19(1)(ಬಿ) ನಿರಾಯುಧವಾಗಿ ಪ್ರತಿಭಟಿಸುವ, ಹರತಾಳ ಆಚರಿಸುವ ಹಕ್ಕು ನೀಡಿದೆ ಎಂದು ಮಂಡೋ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ಮಹಾಡ್ ಸತ್ಯಾಗ್ರಹದ ಮೂಲ ಆಂದೋಲನ್ ಜೀವಿ ಇವರು. ಅಂಬೇಡ್ಕರ್‌ರವರಂತೆ ಆಂದೋಲನ್‌ ಜೀವಿಯಾಗಿ, ಶಿಕ್ಷಣ ಪಡೆಯಿರಿ, ಸಂಘಟಿತರಾಗಿ ಮತ್ತು ಹೋರಾಡಿ” ಎಂದು ಕರೆ ನೀಡಿದ್ದಾರೆ.

ಇವಿಷ್ಟು ನಾವು ಆಂದೋಲನ್ ಜೀವಿಗಳು ಎಂದು ಹೆಮ್ಮೆಯಿಂದ ಹೇಳಿಕೊಂಡರೆ ಇನ್ನು ಕೆಲವರು ಮೋದಿಯವರು ಸಹ ಹೋರಾಟ ಮಾಡಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ತಮ್ಮ ದಾರಿಯನ್ನು ಮರೆತು ಬೇರೆಯವರನ್ನು ಟೀಕಿಸುತ್ತಿದ್ದಾರೆ. ಈ ಇಬ್ಬಂದಿತನವನ್ನು ಖಂಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮೋದಿಯವರ ಹಳೆಯ ಫೋಟೊಗಳನ್ನು ಹಾಕಿ ಟ್ರೋಲ್ ಮಾಡಿದ್ದಾರೆ. ಅಂತಹ ಕೆಲವು ಇಲ್ಲಿವೆ.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...