Homeಮುಖಪುಟಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಸೋಮವಾರ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿದೆ. ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಗ್ರಾಮದ ನಾಟಿ ವೈದ್ಯ ಬೋನಿಗಿ ಆನಂದಯ್ಯ ಕೊರೊನಾಗೆ ಸಿದ್ಧಪಡಿಸಿದ ಗಿಡಮೂಲಿಕೆ ಔಷಧಿಗೆ ಸರ್ಕಾರದ ಒಪ್ಪಿಗೆ ಸೂಚಿಸಿದೆ,

ಆನಂದಯ್ಯ ನೀಡಿದ ಪಿ, ಎಲ್ ಮತ್ತು ಎಫ್ ವರ್ಗೀಕೃತ ಔಷಧಿಗಳನ್ನು ವಿತರಿಸುವುದಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆಯುರ್ವೇದ ವಿಜ್ಞಾನ ಕೇಂದ್ರ ಸಂಶೋಧನಾ ಮಂಡಳಿ (CCRAS) ಸಲ್ಲಿಸಿದ ಪ್ರಾಥಮಿಕ ಅಧ್ಯಯನ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಕೊರೊನಾ ವೈರಸ್‌ಗೆ ನಾಟಿ ಔಷಧ ನೀಡುವ ಮೂಲಕ ನೆಲ್ಲೂರಿನ ಆನಂದಯ್ಯ ದೇಶದಲ್ಲಿ ಸಂಚಲನ ಸೃಷ್ಟಿಸಿ,  ಭಾರೀ ಚರ್ಚೆಗೆ ಕಾರಣವಾಗಿದ್ದರು. ಈಗ ಹಲವು ಪರೀಕ್ಷೆಗಳ ಬಳಿಕ ಕೆಲ ಷರತ್ತುಗಳೊಂದಿಗೆ ಆನಂದಯ್ಯ ಅವರ ನಾಟಿ ಔಷಧಿಗೆ ಒಪ್ಪಿಗೆ ದೊರೆತಿದೆ.

ಇದನ್ನೂ ಓದಿ: ದೇಶದ್ರೋಹ ಪ್ರಕರಣ: 2 ತೆಲುಗು ಸುದ್ದಿ ವಾಹಿನಿಗಳ ವಿರುದ್ಧದ ಕ್ರಮಕ್ಕೆ ಸುಪ್ರೀಂ ತಡೆ

ಇದರ ಜೊತೆಗೆ ಆನಂದಯ್ಯ ಅವರ ಕೆ ವರ್ಗದ ಅಡಿಯಲ್ಲಿ ಬರುವ ನಾಟಿ ಔಷಧಿಯಾದ ಕಣ್ಣಿಗೆ ಹಾಕುವ ಡ್ರಾಪ್‌ಗೆ ಅನುಮತಿ ದೊರೆತಿಲ್ಲ. ಏಕೆಂದರೆ ಕಣ್ಣಿಗೆ ಡ್ರಾಪ್ ಹಾಕುವ ವೈದ್ಯ ಪದ್ಧತಿಯ ಬಗ್ಗೆ ಸಂಶೋಧನಾ ವರದಿ ಬರಬೇಕಾಗಿದ್ದು, ಅದಕ್ಕೆ ಇನ್ನೂ 2 ರಿಂದ 3 ವಾರ ಸಮಯ ಬೇಕಾಗುತ್ತದೆ ಎಂದು ಹೇಳಿದೆ.

ಆನಂದಯ್ಯ ಅವರ ನಾಟಿ ಔಷಧಿಯನ್ನು ಬಳಸುವುದರಿಂದ ಯಾವುದೇ ಹಾನಿ ಇಲ್ಲ ಮತ್ತು ಈ ಔಷಧದಿಂದ ಕೋವಿಡ್‌ ಸೋಂಕು ಕಡಿಮೆ ಯಾಗುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು CCRAS ಹೇಳಿದೆ.

ಇನ್ನು ನೆಲ್ಲೂರಿನಲ್ಲಿ ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ಆದೇಶಿಸಲಾಗಿದೆ. ಕೊರೊನಾ ಸೋಂಕಿತರು ಸ್ವತಃ ಆನಂದಯ್ಯ ಅವರನ್ನು ಭೇಟಿಯಾಗಿ ಔಷಧ ಪಡೆಯಬೇಕಿಲ್ಲ. ಸೋಂಕಿತರ ಸಂಬಂಧಿಕರು  ಔಷಧ ತೆಗೆದುಕೊಂಡು ಹೋಗಬೇಕು ಎಂದು ಹೇಳಲಾಗಿದೆ.

ಈ ತಿಂಗಳ ಆರಂಭದಲ್ಲಿ ಸಾವಿರಾರು ಜನರು ಕೊರೊನಾಗೆ ಔಷಧಿ ತೆಗೆದುಕೊಳ್ಳಲು ಹಳ್ಳಿಗೆ ಸೇರಲು ಪ್ರಾರಂಭಿಸಿದ ನಂತರ ಆನಂದಯ್ಯ ಅವರ ನಾಟಿ ಔಷಧವು ಬಿಸಿ ಬಿಸಿ ಚರ್ಚೆಯ ವಿಷಯವಾಯಿತು. ಅವರ ಔಷಧಿಗಳ ಬಗ್ಗೆ ಮರುಪರಿಶೀಲನಾ ಅಧ್ಯಯನ ಮಾಡಲು ಸರ್ಕಾರವು ನಿರ್ಧರಿಸಿತ್ತು. ಔಷಧಿ ವಿತರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿತ್ತು.


ಇದನ್ನೂ ಓದಿ:  ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...