Homeಅಂತರಾಷ್ಟ್ರೀಯDawood Ibrahim - ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್...

Dawood Ibrahim – ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್ ಇಬ್ರಾಹಿಂ

- Advertisement -
- Advertisement -

ಹತ್ತಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಸಿಲುಕಿ ತಲೆಮರೆಸಿಕೊಂಡಿರುವ ಭೂಗತ ಲೋಕದ ದಾವೂದ್ ಇಬ್ರಾಹಿಂ ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ಧಾರೆ, ಅವರ ಹೆಂಡತಿಗೂ ಕೊರೊನಾ ಸೋಂಕು ತಗುಲಿದೆ ಎಂಬಂತಹ ಸುದ್ದಿಗಳು ಮಾಧ್ಯಮಗಳು ಮತ್ತು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಅವರ ಸಹೋದರ ಅನೀಸ್‌ ಇಬ್ರಾಹಿಂ ಈ ಕುರಿತು ಸ್ಪಷ್ಟನೆ ನೀಡಿದ್ದು ಇವೆಲ್ಲವೂ ಸುಳ್ಳು ಎಂದಿದ್ದಾರೆ.

ದಾವೂದ್‌ ಇಬ್ರಾಹಿಂ ಮತ್ತವರ ಹೆಂಡತಿಗೆ ಕೋವಿಡ್-19 ರೋಗದ ಸೋಂಕು ತಗುಲಿದ್ದು, ಅವರನ್ನು ಕರಾಚಿಯ ಆರ್ಮಿ ಹಾಸ್ಪಿಟಲ್‌ಗೆ ದಾಖಲಿಸಲಾಗಿದೆ ಎಂದು ಗುಪ್ತಚರ ಸಂಸ್ಥೆಗಳು ಹೇಳಿವೆ ಎಂದು ಕೆಲ ಮಾಧ್ಯಮಗಳಲ್ಲೂ ಸುದ್ದಿಗಳಾಗಿವೆ. ಆದರೆ, ದಾವೂದ್ ಸಹೋದರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಸುದ್ದಿಗಳನ್ನು ಅಲ್ಲಗಳೆದಿದ್ದಾರೆ.

ದಾವೂದ್‌ ಇಬ್ರಾಹಿಂನ ಎಲ್ಲಾ ಚಟುವಟಿಕೆ ಹಾಗೂ ಹಣಕಾಸು ವ್ಯವಹಾರಗಳನ್ನ ನೋಡಿಕೊಳ್ಳುವ ಅನೀಸ್ ಇಬ್ರಾಹಿಂ ಅವರು ತಮ್ಮ ಅಣ್ಣನ ಬಗ್ಗೆ ಹರಡಿರುವ ಸುದ್ದಿಗಳು ಬರೇ ವದಂತಿ ಎಂದಿದ್ದಾರೆಂದು ಐಎಎನ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ತಮ್ಮ ಸಹೋದರ ದಾವೂದ್‌ ಇಬ್ರಾಹಿಂ ಸೇರಿದಂತೆ ಇಡೀ ಕುಟುಂಬದ ಯಾರೊಬ್ಬರಿಗೂ ಕೊರೋನಾ ಸೋಂಕು ತಗುಲಿಲ್ಲ ಎಂದು ಅನೀಸ್ ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಪ್ರಪಂಚದೆಲ್ಲಡೆ ಹರಡಿರುವ ಕೊರೊನಾ ಪಾಕಿಸ್ತಾನಕ್ಕೂ ಹಬ್ಬಿದೆ. ದಾವೂದ್‌ ಇಬ್ರಾಹಿಂ ಸದ್ಯ ಪಾಕಿಸ್ತಾನದಲ್ಲಿದ್ದಾರೆ ಎಂಬ ವದಂತಿಗಳಿರುವ ಹಿನ್ನೆಲೆಯಲ್ಲಿ ಬಹುತೇಕ ಮಾಧ್ಯಮಗಳು ಅವರಿಗೆ ಕೊರೊನ ತಗುಲಿದೆ ಎಂಬ ವರದಿಗಳನ್ನು ಮಾಡಿದ್ದರು. ಅದನ್ನು ಅವರ ಸಹೋದರ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.


ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…


ದಾವೂದ್‌‌ ಇಬ್ರಾಹಿಂ ಮತ್ತು ಭಾರತದ ಸಂಬಂಧದ ವಿಚಾರದಲ್ಲಿ ಹಲವಾರು ಗೊಂದಲಗಳಿದ್ದು, ಅವರು ಅನೇಕ ಕಂಪನಿಗಳಲ್ಲಿ ಹಣ ಹೂಡಿದ್ದಾರೆ ಎಂಬ ಆರೊಪವಿದೆ. ಅಲ್ಲದೇ ಭಾರತದ ಹಲವಾರು ಮಾಧ್ಯಮಗಳು ದಾವೂದ್‌ ಪಾಕಿಸ್ತಾನ ಸರ್ಕಾರದ ಬೆಂಬಲದೊಂದಿಗೆ ಅಲ್ಲಿ ನೆಲೆಸಿದ್ದಾರೆ ಎಂದು ವರದಿ ಮಾಡಿವೆ. ಈಗ ಕೊರೊನಾ ಸೋಂಕು ಹಿನ್ನೆಲೆಯಲ್ಲಿಯೂ ಸಹ ಅವರು ಪಾಕಿಸ್ತಾನದ ಸೇನಾ ಆಸ್ಪತ್ರೆಯಲ್ಲಿದ್ದಾರೆ ಎಂಬ ವರದಿಗಳು ಬಂದಿವೆ.

ದಾವೂದ್‌ ಇಬ್ರಾಹಿಂ ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾರೆಂದು ಭಾರತದ ಆರೋಪಕ್ಕೆ ಈ ಕೊರೊನಾ ಸುದ್ದಿ ಪುಷ್ಟಿ ನೀಡಿತ್ತು. ದಾವೂದ್‌ ಕರಾಚಿಯಲ್ಲಿದ್ದಾನೆಂದು ಭಾರತ ಪದೇಪದೇ ಹೇಳುತ್ತಲೇ ಬಂದಿದೆ. ಆದರೆ, ಪಾಕಿಸ್ತಾನ ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಇದೀಗ ಕೊರೋನಾ ಸೋಂಕಿನ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅನೀಸ್ ಇಬ್ರಾಹಿಂ ಅವರು ತಮ್ಮ ಕುಟುಂಬದವರು ಪಾಕಿಸ್ತಾನದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಆದರೆ, ಯುಎಇ ಮತ್ತು ಪಾಕಿಸ್ತಾನದಲ್ಲಿ ವ್ಯವಹಾರಗಳಿರುವುದನ್ನು ಅನೀಸ್ ಒಪ್ಪಿಕೊಂಡಿದ್ದಾಗಿ ಐಎಎನ್ಎಸ್ ಸುದ್ದಿ ಸಂಸ್ಥೆಯ ವರದಿಯಿಂದ ತಿಳಿದುಬರುತ್ತದೆ.


ಇದನ್ನೂ ಓದಿ : ಜನರ ತೆರಿಗೆ ದುಡ್ಡಲ್ಲಿ ದಾವೂದ್ ಇಬ್ರಾಹಿಂ ನಷ್ಟ ತುಂಬಲು ಮುಂದಾಯ್ತಾ ‘ನಮೋ’ ಸರ್ಕಾರ?


ಇದನ್ನೂ ಓದಿ: ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...