Homeಮುಖಪುಟಆಶಾರೋಧನ; ಈಡೇರದ ಬೇಡಿಕೆ, ಮತ್ತೆ ಆಹೋರಾತ್ರಿ ಧರಣಿಗೆ ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

ಆಶಾರೋಧನ; ಈಡೇರದ ಬೇಡಿಕೆ, ಮತ್ತೆ ಆಹೋರಾತ್ರಿ ಧರಣಿಗೆ ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

ರಾಜ್ಯದಲ್ಲಿ ಒಟ್ಟು 1.3 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿದ್ದಾರೆ. ಇವರು ಕಳೆದ ಹಲವು ವರ್ಷಗಳಿಂದ ತಮ್ಮ ವೇತನವನ್ನು ಹೆಚ್ಚಿಸುವಂತೆ ಕೋರಿ ರಾಜ್ಯ-ಕೇಂದ್ರ ಸರ್ಕಾರಗಳಿಗೆ ಮನವಿ ಮಾಡುತ್ತಲೇ ಇದ್ದಾರೆ. ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಆದರೆ, ಯಾವ ಸರ್ಕಾರವೂ ಇವರ ಮನವಿಯನ್ನು ಮಾತ್ರ ಪರಿಗಣಿಸುವ ಯಾವುದೇ ಲಕ್ಷಣ ಕಂಡುಬರುತ್ತಿಲ್ಲ.

- Advertisement -
- Advertisement -

ಬೆಂಗಳೂರು (ಜನವರಿ 23); ನಿರಂತರವಾಗಿ ತಮ್ಮ ಬೇಡಿಕೆಗಳನ್ನು ಕಡೆಗಣಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಮತ್ತೆ ಪ್ರತಿಭಟನೆಗೆ ಮುಂದಾಗಿರುವ ಅಂಗನವಾಡಿ ಕಾರ್ಯಕರ್ತೆಯರು ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ಸಂಘಟನೆಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಈ ಬಾರಿಯ ಕೇಂದ್ರ ಹಾಗೂ ರಾಜ್ಯ ಬಜೆಟ್​ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಹಣ ಮೀಸಲಿಡಬೇಕು, ಈ ಮೂಲಕ ವೇತನವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ‍್ಯಾಲಿ ನಡೆಸಲಿದ್ದಾರೆ.

ರ‍್ಯಾಲಿ ನಂತರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲಿರುವ ಅಂಗನವಾಡಿ ಕಾರ್ಯಕರ್ತೆಯರು ಎರಡು ದಿನಗಳ ಆಹೋರಾತ್ರಿ ಧರಣಿಗೂ ಮುಂದಾಗಿದ್ದಾರೆ. ಹೀಗಾಗಿ ಇಂದು ಮತ್ತು ನಾಳೆ ಅಂಗನವಾಡಿಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 1.3 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿದ್ದಾರೆ. ಇವರು ಕಳೆದ ಹಲವು ವರ್ಷಗಳಿಂದ ತಮ್ಮ ವೇತನವನ್ನು ಹೆಚ್ಚಿಸುವಂತೆ ಕೋರಿ ರಾಜ್ಯ-ಕೇಂದ್ರ ಸರ್ಕಾರಗಳಿಗೆ ಮನವಿ ಮಾಡುತ್ತಲೇ ಇದ್ದಾರೆ. ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಆದರೆ, ಯಾವ ಸರ್ಕಾರವೂ ಇವರ ಮನವಿಯನ್ನು ಮಾತ್ರ ಪರಿಗಣಿಸುವ ಯಾವುದೇ ಲಕ್ಷಣ ಕಂಡುಬರುತ್ತಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...