Homeಚಳವಳಿಬೀದಿಗೆ ಕುಳಿತ ಅಂಗನವಾಡಿ ತಾಯಂದಿರು: ಮುಂದುವರಿದ ಅನಿರ್ದಿಷ್ಟಾವಧಿ ಹೋರಾಟ

ಬೀದಿಗೆ ಕುಳಿತ ಅಂಗನವಾಡಿ ತಾಯಂದಿರು: ಮುಂದುವರಿದ ಅನಿರ್ದಿಷ್ಟಾವಧಿ ಹೋರಾಟ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ರಾಜ್ಯ ಸಮಿತಿ) ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅಂಗನವಾಡಿ ನೌಕರರು ಸದಾ ದುಡಿಯುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಹೈಕೋರ್ಟ್ ಆದೇಶದಂತೆ ರಾಜ್ಯದ 47.73 ಲಕ್ಷ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ, ಆರೋಗ್ಯ ಸವಲತ್ತುಗಳನ್ನು ಖಾತ್ರಿಪಡಿಸಲಾಗಿದೆ. ಅಷ್ಟು ಮಾತ್ರವಲ್ಲದೆ ಕೊರೊನಾ ಫ್ರಂಟ್‌ಲೈನ್‌ ವಾರಿಯರ್ಸ್ ಆಗಿ ದುಡಿದು 59 ಜನರು ಮೃತಪಟ್ಟಿದ್ದಾರೆ. ಕೊರೊನಾ ಸಂದರ್ಭದಲ್ಲಿ ಇ- ಸರ್ವೇ, ಚುನಾವಣೆಗಳು, ವ್ಯಾಕ್ಸಿನ್‌ ಹಾಕುವುದು ಮತ್ತು ಅದರ ಸರ್ವೇಗಳು, ಪೋಷಣ್ ಅಭಿಯಾನ, ಪೋಷನ್‌ ಪಕ್ವಾಡ ಥರದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಪರಿಹಾರಗಳು ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನೀತಿಗಳಿಂದಾಗಿ ಅನಿಯಂತ್ರಿತವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಗಳು ಹೆಚ್ಚಾಗಿ ಆಹಾರ ಧಾನ್ಯಗಳು ಸೇರಿದಂತೆ ಪ್ರತಿಯೊಂದು ವಸ್ತು ಮತ್ತು ಸೇವೆಯ ಬೆಲೆಗಳು ಹೆಚ್ಚಾಗಿದೆ. ಆದರೆ ಆದಾಯ ಮಾತ್ರ ಹೆಚ್ಚಳವಾಗಿಲ್ಲ. ಕೊರೊನಾ ಲಾಕ್‌ಡೌನ್‌ ಇದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ 2020 (ಎನ್‌ಇಪಿ) ಜಾರಿಗೆ ತಂದಿದೆ. ರಾಜ್ಯದಲ್ಲಿ ಸಂಬಂಧಿಸಿದ ಸಂಘಟನೆಗಳ ಬಳಿ ಚರ್ಚಿಸದೆ ಟಾಸ್ಕ್‌ ಫೋಸ್ಟ್‌ ಕಮಿಟಿಯನ್ನು ಎನ್‌ಇಪಿಯ ಜಾರಿಗಾಗಿ ನೇಮಕ ಮಾಡಲಾಗಿದೆ ಎಂದು ಅಂಗನವಾಡಿ ನೌಕರರರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

ಎನ್‌ಇಪಿಯ ದಸ್ತಾವೇಜಿನಲ್ಲಿ ಆಶಯಗಳು ಬೆಟ್ಟದಷ್ಟಿವೆ. ಆದರೆ ಜಾರಿಯ ಸಂದರ್ಭದಲ್ಲಿ ಸಂಪೂರ್ಣವಾಗಿ ಖಾಗೀಕರಣ ಮತ್ತು ವಾಣಿಜ್ಯೀಕರಣವಾಗುವ  ಅಂಶಗಳೇ ಹೆಚ್ಚಾಗಿವೆ. ಐಸಿಡಿಎಸ್ ಯೋಜನೆಗೆ ಸಂಬಂಧಿಸಿ 3ರಿಂದ 6 ವರ್ಷ ಅಂದರೆ 36 ತಿಂಗಳು ಮಗುವಿನಿಂದ 5 ವರ್ಷ 10 ತಿಂಗಳ ಮಕ್ಕಳು ಅಂನವಾಡಿ ಕೇಂದ್ರಕ್ಕೆ ದಾಖಲಾಗುತ್ತಿದ್ದರು. ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಲ್ಲಿ ಅನಿಯಮಿತವಾಗಿ ಎಲ್‌ಕೆಜಿ ಯುಕೆಜಿಗಳನ್ನು ತರೆದಿದ್ದರಿಂದ ಅಂಗನವಾಡಿ ಮಕ್ಕಳನ್ನು ಅಲ್ಲಿ ದಾಖಲು ಮಾಡಿ ಅಂಗನವಾಡಿ ಕೇಂದ್ರಕ್ಕೆ  ಈಗಾಗಲೇ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ತಾಯಂದಿರು ತಿಳಿಸಿದ್ದಾರೆ.

5 ವರ್ಷ ತುಂಬುವುದಕ್ಕೆ ಮೊದಲು ಎನ್‌ಇಪಿಯ ಪ್ರಕಾರ 5 ವರ್ಷದ ಮಕ್ಕಳಿಗೆ ಬಾಲವಾಟಿಕಾ ಎನ್ನುವ ಪ್ರತ್ಯೇಕ ವ್ಯವಸ್ಥೆ ಮಾಡಿದರೆ ಅಂಗನವಾಡಿಗಳಲ್ಲಿ ಕೇವಲ 3 ವರ್ಷದ ಮಕ್ಕಳು ಮಾತ್ರ ಇರುತ್ತಾರೆ. ಇದರಿಂದ ಅಂಗನವಾಡಿ ಕೇಂದ್ರಗಳು ನಿಧಾನಗತಿಯಲ್ಲಿ ಮಕ್ಕಳೇ ಇಲ್ಲದ ಪರಿಸ್ಥಿತಿಗೆ ಬರುತ್ತವೆ. ಇದರಿಂದಾಗಿ  1974 ಮಕ್ಕಳ ರಾಷ್ಟ್ರೀಯ ನೀತಿ, 1975ರ ಐಸಿಡಿಎಸ್ ಯೋಜನೆಯ ಉದ್ದೇಶ, 2020ರ ವಿಶ್ವಸಂಸ್ಥೆಯ ಪೋಷಣೆ 2013ರ ಮಕ್ಕಳ ಶಿಕ್ಷಣ ರಾಷ್ಟ್ರೀಯ ನೀತಿ ಮತ್ತು ಗುರಿಗಳನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಪ್ರಮುಖ ಬೇಡಿಕೆಗಳು

  • ಅಂಗನವಾಡಿ ಕೇಂದ್ರಗಳಲ್ಲಿ ಪಾಲನೆಯೊಟ್ಟಿಗೆ ಎಲ್‌ಕೆಜಿ, ಯುಕೆಜಿ ಶಿಕ್ಷಣಕ್ಕೆ ಅವಕಾಶ ನೀಡಬೇಕು. ಸಮಾಜ ಬದಲಾವಣೆಯನ್ನು ಬಯಸುತ್ತಿದೆ. ಆದರೆ ಅಂಗನವಾಡಿ ಕೇಂದ್ರಗಳು ಮಾತ್ರ ಹಳೆಯ ರೀತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಬದಲಾದ ಸಮಾಜದ ರೀತಿಗೆ ಅನುಗುಣವಾಗಿ ಅಂಗನವಾಡಿ ಕೇಂದ್ರಗಳು ಮಕ್ಕಳನ್ನು ಆಕರ್ಷಿಸುವ ಕೇಂದ್ರಗಳಾಗಬೇಕು. ಆದ್ದರಿಂದ ಅಂಗವಾಡಿ ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸಬೇಕು.
  • ಅಂಗನವಾಡಿ ಕೇಂದ್ರಗಳಿಗೆ ಎಲ್ಲ ರೀತಿಯ ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. 1995ರಿಂದ ಪ್ರಾರಂಭವಾಗಿರುವ ಎಲ್ಲ ಯೋಜನೆಗಳಲ್ಲಿ ಆಯ್ಕೆಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಎಸ್‌ಎಸ್‌ಎಲ್‌ಸಿ ಪಾಸಾದವರು. ಅನೇಕರು ಪದವೀಧರರೂ ಇರುವುದರಿಂದ ಅವರಿಗೆ ತರಬೇತಿಯನ್ನು ಕೊಟ್ಟು ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ ಯುಕೆಜಿಯನ್ನು ಪ್ರಾರಂಭ ಮಾಡಬೇಕು.
  • ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭವಾಗುತ್ತಿರುವ ಮತ್ತು ಪ್ರಾರಂಭವಾಗಿರುವ ಎಲ್‌ಕೆಜಿ, ಯುಕೆಜಿಯನ್ನು ನಿಲ್ಲಿಸಬೇಕು. ಅಂಗನವಾಡಿ ನೌಕರರನ್ನು ಐಸಿಡಿಎಸ್‌ನ 5 ಉದ್ದೇಶಗಳಿಗೆ ಬಿಟ್ಟು ಉಳಿದ ಹೆಚ್ಚವರಿ ಕೆಲಸ ನಿರ್ಬಂಧಿಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಬೇಕು. ಹೊಸ ಶಿಕ್ಷಣ ನೀತಿಯ ಶಿಫಾರಸ್ಸಿನಲ್ಲಿರುವ 3 ರಿಂದ 8 ವರ್ಷದ ವರ್ಗೀಕರಣವನ್ನು ಕೈ ಬಿಟ್ಟು, 3ರಿಂದ 6 ವರ್ಷದ ಮಕ್ಕಳು  ಅಂಗನವಾಡಿ ಕೇಂದ್ರದಲ್ಲಿಯೇ ಇರಬೇಕು. 6 ವರ್ಷದೊಳಗಿನ ಮಕ್ಕಳಿಗೆ ಸಾರ್ವತ್ರಿಕ ಮತ್ತು ಉಚಿತ ಅನೌಪಚಾರಿಕ ಶಿಕ್ಷಣ ನೀಡಲು ಪ್ರತ್ಯೇಕ ಕಾಯ್ದೆಯನ್ನು ರೂಪಿಸಬೇಕು.
  • ಶಿಶುಪಾಲನಾ ಕೇಂದ್ರಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ತೆರೆಯದೆ ಪ್ರತ್ಯೇಕವಾಗಿ ತೆರೆಯಬೇಕು.  ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಪಾರಸ್ಸು ಮಾಡಿರುವ 339.48 ಲಕ್ಷ ಅನುದಾನ ಬಿಡಗಡೆ ಮಾಡಬೇಕು. ಅನುಕಂಪದ ಆಧಾರದಲ್ಲಿ ಕೆಸಲ ಕೊಡುವಾಗ ಮಗಳು ಬದಲಿಗೆ ಸೊಸೆ ಎಂದು ಬದಲಿಸಬೇಕು.
  • ಕೋಳಿ ಮೊಟ್ಟೆಯನ್ನು ಆಹಾರ ಪದಾರ್ಥಗಳ ಜೊತೆಯಲ್ಲಿ ಸರಬರಾಜು ಮಾಡಬೇಕು. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮಾರ್ಚ್‌ನಿಂದ ನಮ್ಮ ಹಣದಿಂದ ಮೊಟ್ಟೆ ವಿತರಿಸುವುದಿಲ್ಲ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮತ್ತು ಐಎಲ್‌ಸಿ ಶಿಫಾರಸ್ಸಿನಂತೆ ನೌಕರರಂತೆ ಗುರುತಿಸಿ ಕನಿಷ್ಠ ವೇತನ ಜಾರಿ ಮಾಡಬೇಕು.
  • ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು. ಮಾಡುವ ತನಕ 26 ಸಾವಿರ ಮಾಸಿಕ ವೇತನ ನೀಡಬೇಕು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ಕೊಡಬೇಕು. ಮುಂಬಡ್ತಿ, ವರ್ಗಾವಣೆ, ಪೌಷ್ಟಿಕ ಆಹಾರವನ್ನು ಸರಬರಾಜು ಮಾಡುವ ಎಂಎಸ್‌ಪಿಟಿಸಿಗಳಲ್ಲಿ ರಾಜಕೀಯ ಮಧ್ಯ ಪ್ರವೇಶ ವನ್ನು ತಡೆಯಬೇಕು. ಮುಂಬಡ್ತಿ ನೀಡುವಾಗ ಅದೇ ಕೇಂದ್ರದಲ್ಲಿ ಅರ್ಹ ಅಂಗನವಾಡಿ ಸಹಾಯಕಿ ಇದ್ದರೆ ಅವರಿಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯಿಂದ ಜಿಲ್ಲೆಗೆ, ತಾಲ್ಲೂಕಿನಿಂದ ತಾಲ್ಲೂಕಿಗೆ ಸ್ಥಾನ ಪಲ್ಲಟಕ್ಕೆ ಆದ್ಯತೆ ನೀಡಬೇಕು.
  • ಬಜೆಟ್‌ನಲ್ಲಿ ಕಡಿತವಾಗಿರುವ 8452.38 ಕೋಟಿ ರೂ. ವಾಪಸ್ ನೀಡಬೇಕು.  ಐಸಿಡಿಎಸ್ ಯೋಜನೆಯ ಅನುದಾನವನ್ನು ಹೆಚ್ಚಳ ಮಾಡಿ ದೇಶದ ಮಕ್ಕಳ ಮತ್ತು ಮಹಿಳೆಯರನ್ನು ರಕ್ಷಿಸಬೇಕು. ಅಂಗನವಾಡಿ ಕೇಂದ್ರಗಳ ಬಾಡಿಗೆಗೆ ಇರುವ ಮಾನದಂಡ ತೆಗೆಯಬೇಕು. ಆಯಾಯಾ ತಿಂಗಳಲ್ಲೇ ಬಾಡಿಗೆ ಹಣ ಬಿಡುಗಡೆ ಮಾಡಬೇಕು. ಬಿಎಲ್‌ಒ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಬೇಕು.
  • ಮಾಹಿತಿ ಹಕ್ಕಿನಲ್ಲಿ ಮಾಹಿತಿಗಳನ್ನು ಇಲಾಖೆಯಿಂದಲೇ ಒದಗಿಸಬೇಕೆಂಬ ಆದೇಶ ಇದ್ದರೂ ಜಾರಿ ಮಾಡದೆ ಆರ್‌ಟಿಐ ಹೆಸರಿಂದ ಕಾರ್ಯಕರ್ತೆಯರಿಗೆ ಆಗುತ್ತಿರುವ ದಬ್ಬಾಳಿಕೆ ನಿಲ್ಲಬೇಕು. ಈಗಾಗಲೇ ನಿವೃತ್ತಿ ಸೌಲಭ್ಯದಿಂದ ವಂಚಿತರಾದ ಅಂಗನವಾಡಿ ನೌಕರರನ್ನು ಇಲಾಖೆಯ ಸಭೆಗಳಲ್ಲಿ ಚರ್ಚೆ ಆದಂತೆ ಖಾಯಂ ಪಿಂಚಣಿ ಯೋಜನೆಯಡಿ ತರಬೇಕು. 2016ರಿಂದ ನಿವೃತ್ತಿ ಆದವರಿಗೆ ಬಾಕಿ ಉಳಿದಿರುವ ನಿವೃತ್ತಿ ಹಣ ಬಿಡಗಡೆ ಮಾಡಬೇಕು.
  • 2021ರಲ್ಲಿ ನೀಡಬೇಕಿದ್ದ ಬೇಸಿಗೆ ರಜೆ ನೀಡಲ್ಲದಿರುವುದರಿಂದ 15 ದಿನಗಳ ಕಾಲ ಹೆಚ್ಚುವರಿ ವೇತನ ನೀಡಬೇಕು.

    ಇದನ್ನೂ ಓದಿರಿ: ಎಟಿ&ಎಸ್ ಕಾರ್ಮಿಕರ ಧರಣಿಗೆ 365 ದಿನಗಳು ತುಂಬಿದ ಸಂದರ್ಭದಲ್ಲಿ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...