Homeಮುಖಪುಟಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

- Advertisement -
- Advertisement -

ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿರುವ ಕೋರ್ಟ್, “ವಿವಿಧ ಕಲ್ಯಾಣ ಯೋಜನೆಗಳ ಬೆನ್ನೆಲುಬಾಗಿರುವ ಮತ್ತು ಸಮಾಜಕ್ಕೆ ಪ್ರಮುಖ ಸೇವೆಗಳನ್ನು ಸಲ್ಲಿಸುತ್ತಿರುವ ಈ ವರ್ಗಕ್ಕೆ ಕಡಿಮೆ ಸಂಭಾವನೆ ಕೊಡಲಾಗುತ್ತಿದೆ” ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮನವಿಯನ್ನು ತಿರಸ್ಕರಿಸಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಗ್ರಾಚ್ಯುಟಿಗೆ ಅರ್ಹರಲ್ಲ ಎಂದು ಸರ್ಕಾರಗಳು ವಾದಿಸಿದ್ದವು. ಗುಜರಾತ್‌ನ ಐವರು ಅಂಗನವಾಡಿ ಕಾರ್ಯಕರ್ತೆಯರು ನಡೆಸಿದ 16 ವರ್ಷಗಳ ಕಾನೂನು ಹೋರಾಟಕ್ಕೆ ತಾರ್ಕಿಕ ಅಂತ್ಯ ದೊರೆತಿದೆ.

ಇದನ್ನೂ ಓದಿರಿ: ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಸರ್ವೋಚ್ಚ ನ್ಯಾಯಾಲಯವು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ತೀರ್ಪನ್ನು ನೀಡಿದೆ. “ಧ್ವನಿಯಿಲ್ಲದವರಿಗೆ ಅವರ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಉತ್ತಮ ಸೇವಾ ಪರಿಸ್ಥಿತಿಗಳನ್ನು ಒದಗಿಸುವ ವಿಧಾನಗಳನ್ನು ಕಂಡುಕೊಳ್ಳಿರಿ” ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

2017ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ನಡೆದ ಹೋರಾಟದಲ್ಲಿ ಸೋತ ನಂತರ, ಅಂಗನವಾಡಿ ಕಾರ್ಯಕರ್ತೆಯರು ಸುಪ್ರೀಂ ಮೆಟ್ಟಿಲೇರಿದ್ದರು.

“ಅವರು ಪೂರ್ಣಾವಧಿ ನೌಕರರಲ್ಲ” ಎಂಬ ಸರ್ಕಾರಗಳ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ. ಇಬ್ಬರೂ ನ್ಯಾಯಾಧೀಶರು ಈ ವಿಷಯದ ಬಗ್ಗೆ ಒಮ್ಮತವನ್ನು ಹೊಂದಿದ್ದರು. ಆದರೆ ಪ್ರತ್ಯೇಕ ತೀರ್ಪುಗಳನ್ನು ನೀಡಿದರು. ಸಾಮಾಜಿಕ ಭದ್ರತಾ ಶಾಸನಗಳನ್ನು ಯಾವಾಗಲೂ ಉದಾರವಾಗಿ ಅರ್ಥೈಸಬೇಕು ಎಂದಿರುವ ನ್ಯಾಯಮೂರ್ತಿ ರಸ್ತೋಗಿ ಅಭಿಪ್ರಾಯಪಟ್ಟರು.

“ಎಡಬ್ಲ್ಯೂಡಬ್ಲ್ಯೂಗಳು ಮತ್ತು ಎಡಬ್ಲ್ಯೂಎಚ್‌ಗಳಿಗೆ ಎಲ್ಲಾ ವ್ಯಾಪಕ ಕರ್ತವ್ಯಗಳನ್ನು ನಿಯೋಜಿಸಲಾಗಿದೆ. ಫಲಾನುಭವಿಗಳ ಗುರುತಿಸುವಿಕೆ, ಪೌಷ್ಠಿಕಾಂಶದ ಆಹಾರವನ್ನು ಬೇಯಿಸುವುದು, ಮಕ್ಕಳಿಗೆ ಪ್ರಿಸ್ಕೂಲ್ ನಡೆಸುವುದು, ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸಂಬಂಧಿಸಿದ ಪ್ರಮುಖ ನಿಬಂಧನೆಗಳ ಅನುಷ್ಠಾನವನ್ನು ಇವರಿಗೆ ವಹಿಸಲಾಗಿದೆ. ಆದ್ದರಿಂದ ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ನಿಯೋಜಿಸಲಾದ ಕೆಲಸವು ಅರೆಕಾಲಿಕ ಕೆಲಸ ಎಂಬ ವಾದವನ್ನು ಒಪ್ಪಿಕೊಳ್ಳುವುದು ಅಸಾಧ್ಯ” ಎಂದು ಜಸ್ಟೀಸ್ ಓಕಾ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

“ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ಕಾಡುತ್ತಿರುವ ಸಮಸ್ಯೆಗಳ ಕಡೆಗೆ ನಾವು ನೋಡಿದರೆ ಅವರು ಸಂಬಳದಿಂದ ವಂಚಿತರಾಗಿದ್ದಾರೆ ಮತ್ತು ರಾಜ್ಯದ ಉದ್ಯೋಗಿಗಳಿಗೆ ಇತರ ಪ್ರಯೋಜನಗಳು ಲಭ್ಯವಿವೆ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಸ್ವರೂಪದ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದು, ಗುಜರಾತ್, ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ವ್ಯತಿರಿಕ್ತ ತೀರ್ಪುಗಳನ್ನು ನೀಡಿವೆ. ಈಗ ಸುಪ್ರೀಂ ತೀರ್ಪು ನೀಡುವ ಮೂಲಕ ಕಾನೂನನ್ನು ಇತ್ಯರ್ಥಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...