Homeಕರ್ನಾಟಕ10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಮಾತನಾಡಿ, “ಕಳೆದ ಹಲವು ವರ್ಷಗಳಿಂದ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಈ ಹಿಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹10,000 ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಏಳು ತಿಂಗಳು ಕಳೆದರೂ ಆ ಭರವಸೆ ಈಡೇರಿಲ್ಲ” ಎಂದು ತಿಳಿಸಿದರು.

ಅಲ್ಲದೆ, “ಕಳೆದ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರನ್ನು ಮಾತ್ರ ನಿರ್ಲಕ್ಷಿಸಲಾಗಿದೆ. ₹42,000 ಆಶಾ ಕಾರ್ಯಕರ್ತೆಯರಿಗೆ ₹1,000 ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಹೇಳಿದ್ದರೂ, ಅದು ಕೇವಲ ಭರವಸೆಯಾಗಿಯೇ ಉಳಿದಿದೆ” ಎಂದು ನಾಗಲಕ್ಷ್ಮಿ ಅವರು ಬೇಸರ ವ್ಯಕ್ತಪಡಿಸಿದರು.

ಪ್ರಮುಖ ಬೇಡಿಕೆಗಳು

  • ಮುಖ್ಯಮಂತ್ರಿಗಳು ಘೋಷಿಸಿದಂತೆ, ಮಾಸಿಕ ₹10,000 ಗೌರವಧನವನ್ನು ಏಪ್ರಿಲ್ ತಿಂಗಳಿನಿಂದ ಜಾರಿಗೆ ತರಬೇಕು.
  • 60 ವರ್ಷ ಪೂರೈಸಿದ ಆಶಾ ಕಾರ್ಯಕರ್ತೆಯರನ್ನು ಯಾವುದೇ ಪೂರ್ವ ಸೂಚನೆ ಅಥವಾ ಪರಿಹಾರ ನೀಡದೆ ಸೇವೆಯಿಂದ ತೆಗೆದುಹಾಕುವುದನ್ನು ನಿಲ್ಲಿಸಬೇಕು. ನಿವೃತ್ತರಾದ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು (ಒಟ್ಟು ಮೊತ್ತದ ಪರಿಹಾರ) ನೀಡಬೇಕು.
  • ನಗರ ಪ್ರದೇಶಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ₹2,000 ಗೌರವಧನ ನೀಡಬೇಕು.
  • ಕೇಂದ್ರ ಸರ್ಕಾರ ಜೂನ್-ಜುಲೈನಲ್ಲಿ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲೂ ಜಾರಿಗೆ ತರಬೇಕು.
  • ಜನಸಂಖ್ಯೆ ಮಿತಿಯ ಹೆಸರಿನಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
  • ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.

ಈ ಸತ್ಯಾಗ್ರಹದಲ್ಲಿ ಸಂಘದ ಉಪಾಧ್ಯಕ್ಷೆ ಟಿ.ಸಿ. ರಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪಾಧ್ಯಕ್ಷೆ ನಾಗರತ್ನ, ಮತ್ತು ಇತರ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುವ ನಿರ್ಧಾರಕ್ಕೆ ಬಂದಿರುವುದಾಗಿ ಸಂಘದ ಮುಖಂಡರು ತಿಳಿಸಿದ್ದಾರೆ.

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...