Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ ಪ್ರೆಸ್ ಕ್ಲಬ್ ಖಂಡನೆ

- Advertisement -
- Advertisement -

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್‌) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡಿದ್ದ ಕನಿಷ್ಠ ನಾಲ್ವರು ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ವರದಿಗಳ ಪ್ರಕಾರ, ಇತರ ಏಳು ಪತ್ರಕರ್ತರನ್ನು ವಿಚಾರಣೆಗೆ ಕರೆಯಲಾಗಿದೆ.

ಸಂತ್ರಸ್ತೆಯ ಗುರುತು ಬಹಿರಂಗಗೊಳ್ಳಲು ಕಾರಣವಾದ ಎಫ್‌ಐಆರ್‌ ಮಾಹಿತಿ ಸೋರಿಕೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪತ್ರಕರ್ತ ಮೊಬೈಲ್‌ ವಶಪಡಿಸಿಕೊಡಿರುವ ಕ್ರಮವನ್ನು ಖಂಡಿಸಿರುವ ಚೆನ್ನೈ ಪ್ರೆಸ್ ಕ್ಲಬ್, “ಪತ್ರಕರ್ತರನ್ನು ಆರೋಪಿಗಳಂತೆ ಪರಿಗಣಿಸಲಾಗುತ್ತಿದೆ” ಎಂದು ಹೇಳಿದೆ.

ಡಿಸೆಂಬರ್ 23, 2024ರಂದು, ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಂಪಸ್‌ನಲ್ಲಿ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಜ್ಞಾನಶೇಖರನ್ ಎಂಬ ಬಿರಿಯಾನಿ ಅಂಗಡಿ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಅತ್ಯಾಚಾರದ ವಿಡಿಯೋ ಮಾಡಿಟ್ಟುಕೊಂಡು ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪವೂ ಇದೆ.

ಈ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದ ಮದ್ರಾಸ್ ಹೈಕೋರ್ಟ್, ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಮಾಹಿತಿ ಸೋರಿಕೆ ಎರಡನ್ನೂ ತನಿಖೆ ಮಾಡಲು ಎಸ್‌ಐಟಿ ರಚಿಸಿದೆ. ಸೋರಿಕೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಚೆನ್ನೈ ಪೊಲೀಸ್ ಆಯುಕ್ತ ಎ ಅರುಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಹೈಕೋರ್ಟ್ ರಚಿಸಿರುವ ಎಸ್‌ಐಟಿಯಲ್ಲಿ ಚೆನ್ನೈನ ಅಣ್ಣಾ ನಗರದ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಭುಕ್ಯಾ ಸ್ನೇಹ ಪ್ರಿಯಾ, ಡಿಸಿಪಿ ಅಯ್ಮನ್ ಜಮಾಲ್ (ಕಾನೂನು ಮತ್ತು ಸುವ್ಯವಸ್ಥೆ) ಅವಡಿ ಮತ್ತು ಸೇಲಂ ನಗರ (ಉತ್ತರ) ಡಿಸಿಪಿ ಎಸ್ ಬೃಂದಾ ಅವರು ಇದ್ದಾರೆ.

ಎಸ್‌ಐಟಿ ತಂತಿ ಟಿವಿ, ಡಿಟಿ ನೆಕ್ಸ್ಟ್, ಒನ್ ಇಂಡಿಯಾ ನ್ಯೂಸ್ ಮತ್ತು ಕುಮುದಂನಲ್ಲಿ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಸಮನ್ಸ್ ಜಾರಿ ಮಾಡಿದ್ದು, ಅವರ ಹೇಳಿಕೆಗಳನ್ನು ದಾಖಲಿಸಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿತ ವಿವರಗಳನ್ನು ಸಲ್ಲಿಸಲು ಸೂಚಿಸಿದೆ.

ಎಸ್‌ಐಟಿ ವಿರುದ್ಧ ಚೆನ್ನೈ ಪ್ರೆಸ್ ಕ್ಲಬ್ ಆಕ್ರೋಶ

ಎಸ್‌ಐಟಿಯ ಕ್ರಮಗಳನ್ನು, ವಿಶೇಷವಾಗಿ ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪವನ್ನು ಚೆನ್ನೈ ಪ್ರೆಸ್ ಕ್ಲಬ್‌ ತೀವ್ರವಾಗಿ ಟೀಕಿಸಿದೆ. ವಾಟ್ಸಾಪ್‌ನಲ್ಲಿ ಸಮನ್ಸ್ ಜಾರಿ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಆದೇಶಗಳನ್ನು ಎಸ್‌ಐಟಿ ಉಲ್ಲಂಘಿಸಿದೆ ಎಂದು ಪ್ರೆಸ್ ಕ್ಲಬ್ ಹೇಳಿಕೆಯಲ್ಲಿ ಆರೋಪಿಸಿದೆ.

ಕಾನೂನಿನ ಮೇಲಿನ ಗೌರವದಿಂದಾಗಿ, ಪತ್ರಕರ್ತರು ವೈಯಕ್ತಿಕವಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅವರನ್ನು ತುಂಬಾ ಹೊತ್ತು ಕಾಯುವಂತೆ ಮಾಡಲಾಗಿದೆ. ಆರೋಪಿಗಳಂತೆ ನಡೆಸಿಕೊಳ್ಳಲಾಗಿದೆ ಮತ್ತು ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪ್ರೆಸ್‌ ಹೇಳಿಕೆಯಲ್ಲಿ ತಿಳಿಸಿದೆ.

ಪತ್ರಕರ್ತರ ಫೋನ್‌ಗಳನ್ನು ವಶಪಡಿಸಿಕೊಳ್ಳುವುದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ವರದಿಗಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಇದು ಅವರು ವರ್ಷಗಳ ಕಾಲ ಕೆಲಸ ಮಾಡಿ ಬೆಳೆಸಿಕೊಂಡಿರುವ ಗೌಪ್ಯ ಮೂಲಗಳನ್ನು ರಕ್ಷಿಸುವ ಅವರ ಸಾಮರ್ಥ್ಯಕ್ಕೂ ಅಡ್ಡಿಪಡಿಸುತ್ತದೆ ಎಂದು ಪ್ರೆಸ್‌ ಕ್ಲಬ್‌ ಹೇಳಿದೆ.

ತನಿಖೆಗೆ ಸಹಕರಿಸುತ್ತಿರುವ, ಕಾನೂನು ಪಾಲಿಸುವ ಪತ್ರಕರ್ತರಿಗೆ ಕಿರುಕುಳ ನೀಡುವುದನ್ನು ಮತ್ತು ಬೆದರಿಸುವುದನ್ನು ನಿಲ್ಲಿಸುವಂತೆ ಪ್ರೆಸ್ ಕ್ಲಬ್ ಪೊಲೀಸರನ್ನು ಒತ್ತಾಯಿಸಿದೆ. ವಶಪಡಿಸಿಕೊಂಡ ಎಲ್ಲಾ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತಕ್ಷಣ ಹಿಂದಿರುಗಿಸುವಂತೆ ಆಗ್ರಹಿಸಿದೆ.

ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕಿರುಕುಳಕ್ಕೊಳಗಾದ ಪತ್ರಕರ್ತರ ಪರವಾಗಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ದೇಶಿಸಿದೆ. “ನಾವು ಏನು ಹೇಳಬೇಕೋ ಅದನ್ನು ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಸೋರಿಕೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವ ಸಂದರ್ಭ ನೀಡಿರುವ ನಮ್ಮ ಆದೇಶದಲ್ಲಿ ಹೇಳಿದ್ದೇವೆ. ಈಗ, ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ನಾವು ಈಗ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾ ಅವಧಿಯ ಅರ್ಜಿ (SLP)ಸಲ್ಲಿಸಿ, ಚೆನ್ನೈ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಮಾಡಿದ ಕೆಲವು ಕಟುವಾದ ಅವಲೋಕನಗಳನ್ನು ತೆಗೆದು ಹಾಕಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿತ್ತು.

ಜನವರಿ 27 ರಂದು ಸುಪ್ರೀಂ ಕೋರ್ಟ್, ಎಫ್‌ಐಆರ್ ಸೋರಿಕೆ ಕುರಿತು ಇಲಾಖಾ ತನಿಖೆ ನಡೆಸು ನಿರ್ದೇಶನ ಮತ್ತು ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರ ಸೇರಿದಂತೆ ಹೈಕೋರ್ಟ್ ಮಾಡಿದ್ದ ಅವಲೋಕನಗಳಿಗೆ ತಡೆ ನೀಡಿತ್ತು.

ಇಂಡಿಯಾ ಮೈತ್ರಿಕೂಟಕ್ಕೆ ಮುಖಭಂಗ; ಚಂಡೀಗಢ ಹೊಸ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...