Homeಮುಖಪುಟಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣವನ್ನು ಯಾವುದೇ ಕಾಳಜಿಯಿಲ್ಲದೆ ರಾಜಕೀಯಗೊಳಿಸಲಾಗುತ್ತಿದೆ - ಮದ್ರಾಸ್ ಹೈಕೋರ್ಟ್

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣವನ್ನು ಯಾವುದೇ ಕಾಳಜಿಯಿಲ್ಲದೆ ರಾಜಕೀಯಗೊಳಿಸಲಾಗುತ್ತಿದೆ – ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಯಾವುದೆ ಕಾಳಜಿಯಿಲ್ಲದೆ ರಾಜಕೀಯಗೊಳಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ಹೇಳಿದೆ. ಡಿಸೆಂಬರ್ 23ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ನಡೆದಿತ್ತು. ಈ ಬಗ್ಗೆ ಸಂತ್ರಸ್ತೆ ಬಗ್ಗೆ ದೂರು ನೀಡಿದ್ದು, ತನ್ನ ಮೇಲೆ ಮತ್ತು ತನ್ನ ಸ್ನೇಹಿತನ ಮೇಲೆ ದಾಳಿ ನಡೆಸಲಾಗಿದ್ದು, ಹತ್ತಿರದ ಪೊದೆಗೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿದ್ದರು. ಅಣ್ಣಾ ವಿಶ್ವವಿದ್ಯಾಲಯದ

ಪ್ರಕರಣದ ಬಗ್ಗೆ ತೀವ್ರ ಸಂಕಟವನ್ನು ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ. ವೇಲ್‌ಮುರುಗನ್ ಅವರು, ಇಡೀ ಸಮಾಜವು ಮಹಿಳೆಯರನ್ನು ಅಧೀನಗೊಳಿಸುವುದನ್ನು ಮತ್ತು ಅವರ ವಿರುದ್ಧ ದೌರ್ಜನ್ಯವನ್ನು ಏಕೆ ಮುಂದುವರಿಸಿದೆ ಎಂಬುದನ್ನು ಆತ್ಮಾವಲೋಕನ ಮಾಡಲು ಎಚ್ಚರಿಕೆಯ ಕರೆಯಾಗಿ ಕಾರ್ಯನಿರ್ವಹಿಸುವ ಬದಲು, ಘಟನೆಯನ್ನು ಯಾವುದೆ ಕಾಳಜಿಯಿಲ್ಲದೆ ರಾಜಕೀಯಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪರ ವಕೀಲ ಕೆ.ಬಾಲು ಅವರು ಪಕ್ಷದ ಮಹಿಳಾ ಘಟಕದ ಪ್ರತಿಭಟನೆಗೆ ರಾಜ್ಯ ಪೊಲೀಸರು ಅನುಮತಿ ನಿರಾಕರಿಸಿದ ಬಗ್ಗೆ ಪ್ರಸ್ತಾಪಿಸಿದಾಗ ನ್ಯಾಯಮೂರ್ತಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ರಾಜಕೀಯ ಪಕ್ಷಗಳ ಪ್ರತಿಭಟನೆಗಳು ಕೇವಲ ಮಾಧ್ಯಮಗಳ ಗಮನ ಸೆಳೆಯುವ ಗುರಿಯನ್ನು ಹೊಂದಿವೆಯೇ ಹೊರತು ನಿಜವಾದ ಕಾಳಜಿಯಿಂದ ಮಾಡಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಈ ನಡುವೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ನಿವೃತ್ತ ಐಪಿಎಸ್ ಅಧಿಕಾರಿ ಪ್ರವೀಣ್ ದೀಕ್ಷಿತ್ ಸೇರಿದಂತೆ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಎರಡು ದಿನಗಳ ತನಿಖೆಯಲ್ಲಿ, ಸಮಿತಿಯು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದು, ಸಂತ್ರಸ್ತೆಯ ಕುಟುಂಬಸ್ಥರನ್ನು, ಅಧಿಕಾರಿಗಳು ಮತ್ತು ಎನ್‌ಜಿಒಗಳನ್ನು ಭೇಟಿ ಮಾಡಿದ್ದು, ವಿಶ್ವವಿದ್ಯಾಲಯದ ಭದ್ರತೆ ಪರಿಶೀಲಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎನ್‌ಸಿಡಬ್ಲ್ಯೂ, “ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಎನ್‌ಸಿಡಬ್ಲ್ಯೂ ಭದ್ರತೆ ಪರಿಶೀಲಿಸಿದೆ. ಎಸ್‌ಐಟಿಯನ್ನು ಭೇಟಿ ಮಾಡಿದೆ. ಶಿಫಾರಸುಗಳೊಂದಿಗೆ ವರವಾದ ವರದಿಯನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದೆ. ಅಣ್ಣಾ ವಿಶ್ವವಿದ್ಯಾಲಯದ

ಅತ್ಯಾಚಾರ ಆರೋಪಿಯನ್ನು ಬೀದಿ ಬದಿ ವ್ಯಾಪಾರಸ್ಥ ಜ್ಞಾನಶೇಖರನ್ ಎಂದು ಗುರುತಿಸಲಾಗಿದೆ. ಆರೋಪಿ ಜ್ಞಾನಶೇಖರನ್‌ ಈ ಹಿಂದೆ ಕೂಡಾ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗವಹಿಸಿದ್ದ ಆರೋಪಗಳಿವೆ ಎಂದು ಹೇಳಿದ್ದಾರೆ. ತನಿಖೆಗಾಗಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿತ್ತು.

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...