Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

- Advertisement -
- Advertisement -

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಗೆ ಮಹಿಳಾ ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮದ್ರಾಸ್ ಹೈಕೋರ್ಟ್‌ ಶನಿವಾರ (ಡಿ.28) ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ನ್ಯಾಯಮೂರ್ತಿ ವಿ.ಲಕ್ಷ್ಮಿನಾರಾಯಣನ್ ಅವರ ರಜಾಕಾಲದ ಪೀಠವು, ಪ್ರಕರಣದ ಎಫ್‌ಐಆರ್ ಪ್ರತಿ ಸೋರಿಕೆಗೆ ಸಂಬಂಧಪಟ್ಟಂತೆ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ.

ಸಂತ್ರಸ್ತೆಗೆ ಉಚಿತ ಶಿಕ್ಷಣ ಮತ್ತು ವಸತಿ ಒದಗಿಸುವಂತೆ ಹಾಗೂ ಆಕೆ ಶಿಕ್ಷಣ ಮುಂದುವರಿಸುವಂತೆ ನೋಡಿಕೊಳ್ಳಲು ಅಣ್ಣಾ ವಿಶ್ವವಿದ್ಯಾಲಯಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

“ಅಗತ್ಯವಿದ್ದಲ್ಲಿ, ತಮಿಳುನಾಡು ಸರ್ಕಾರ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸಿದ ಚೆನ್ನೈ ಪೊಲೀಸ್ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎಂದು ಪೀಠ ಹೇಳಿದೆ.

ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ತನಿಖೆ ಪಕ್ಷಪಾತದಿಂದ ಕೂಡಿದೆ. ಹಾಗಾಗಿ, ಆ ತನಿಖೆಯ ಮೇಲೆ ನಮಗೆ ನಂಬಿಕೆಯಿಲ್ಲ. ನ್ಯಾಯಾಲಯ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ವಕೀಲೆ ವರಲಕ್ಷೀ ಎಂಬವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆ ಮನವಿ ಪರಿಗಣಿಸಿ ಶುಕ್ರವಾರ (ಡಿ.27) ನ್ಯಾಯಾಲಯ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅದರ ಭಾಗವಾಗಿ, ಇಂದು ಕೆಲ ಆದೇಶಗಳನ್ನು ಹೊರಡಿಸಿದೆ.

ನ್ಯಾಯಾಲಯ ರಚಿಸಿದ ಎಸ್‌ಐಟಿಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಸ್ನೇಹಾ ಪ್ರಿಯಾ, ಅಯ್ಮನ್ ಜಮಾಲ್ ಮತ್ತು ಬೃಂದಾ ಅವರು ಇದ್ದಾರೆ.

ಎನ್‌ಐಸಿ ನಿರ್ವಹಿಸುತ್ತಿರುವ ಪೋರ್ಟಾಲ್‌ಗೆ ಅಪ್ಲೋಡ್ ಮಾಡುವಾಗ ಉಂಟಾದ ದೋಷದಿಂದ ಎಫ್‌ಐರ್ ಪ್ರತಿ ಸೋರಿಕೆಯಾಗಿದೆ. ಈ ವಿಚಾರ ಗಮನಕ್ಕೆ ಬಂದ ತಕ್ಷಣ ಅದನ್ನು ತಡೆ ಹಿಡಿಯಲಾಗಿದೆ. ಈ ನಡುವೆ 14 ಮಂದಿ ಅದನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅವರನ್ನು ಐಪಿ ಅಡ್ರೆಸ್ ಮೂಲಕ ಪತ್ತೆ ಮಾಡಲಾಗುವುದು ಎಂದು ಸರ್ಕಾರ ಪರ ಅಡ್ವೋಕೇಟ್ ಜನರಲ್ ಪಿ.ಎಸ್‌ ರಾಮನ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನೀವು ನಿಜವಾಗ್ಲೂ ಎಫ್‌ಐಆರ್‌ನಲ್ಲಿರುವ ಅಂಶಗಳನ್ನು ಓದಿದ್ದೀರಾ? ಅದರಲ್ಲಿ ಸಂತ್ರಸ್ತೆಯನ್ನೇ ತಪ್ಪಿತಸ್ಥಳು ಎಂದು ಬಿಂಬಿಸಲಾಗಿದೆ. ಅತ್ಯಾಚಾರಕ್ಕೆ ಆಕೆಯ ಉಡುಗೆ ಕಾರಣ ಎನ್ನುವಂತಿದೆ. ಅದಲ್ಲದೆ, ಚೆನ್ನೈ ಪೊಲೀಸ್ ಆಯುಕ್ತರು ತರಾತುರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಪ್ರಕರಣದಲ್ಲಿ ಒಬ್ಬ ಆರೋಪಿ ಮಾತ್ರ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆ ಇನ್ನೂ ಪ್ರಾರಂಭ ಹಂತದಲ್ಲಿರುವಾಗ ಪೊಲೀಸ್ ಆಯುಕ್ತರು ಅಷ್ಟು ಬೇಗ ತೀರ್ಮಾನಕ್ಕೆ ಏಕೆ ಬಂದರು? ಎಲ್ಲಾ ವಿಷಯಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಅಗತ್ಯವೇನಿತ್ತು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಉತ್ತರ ಕೊಟ್ಟ ಅಡ್ವೋಕೇಟ್ ಜನರಲ್ ” ಮಾಧ್ಯಮಗಳು ಪ್ರಕರಣ ಸಂಬಂಧ ಹಲವು ರೀತಿಯ ವರದಿಗಳನ್ನು ಬಿತ್ತರಿಸುತ್ತಿತ್ತು. ಈ ಕಾರಣಕ್ಕೆ ಅವರಿಗೆ ಸ್ಪಷ್ಟನೆ ಕೊಡುವ ಉದ್ದೇಶದಿಂದ ಮಾತ್ರ ಪೊಲೀಸ್ ಆಯುಕ್ತರು ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಮರುತ್ತರ ಕೊಟ್ಟ ನ್ಯಾಯಾಧೀಶರು, ಹಾಗಾದರೆ, ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಆಯುಕ್ತರು ಹೀಗೆಯೇ ಮಾಹಿತಿ ನೀಡುತ್ತಾರಾ? ನೀವು ಮಾಧ್ಯಗಳನ್ನು ದೂರ ಇಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಆಗ, ಎನ್‌ಸಿಆರ್‌ಬಿ ವರದಿಯ ಪ್ರಕಾರ, ಚೆನ್ನೈ ಮತ್ತು ಕೊಯಮತ್ತೂರು ಸುರಕ್ಷಿತ ನಗರ ಎಂದು ಅಡ್ವೋಕೇಟ್ ಜನರಲ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನಗರಗಳು ಸುರಕ್ಷಿತವಾಗಿರುವುದು ಅಲ್ಲಿನ ಒಳ್ಳೆಯ ಜನರಿಂದ, ಸರ್ಕಾರ ಅದರ ಶ್ರೇಯಸ್ಸು ಪಡೆಯುವುದು ಬೇಡ” ಎಂದು ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮಗಳು ಪ್ರಕರಣದ ಕುರಿತು ತಪ್ಪು ಮಾಹಿತಿಗಳನ್ನು ಹರಡುತ್ತಿವೆ, ಗೊಂದಲಗಳನ್ನು ಸೃಷ್ಟಿಸುತ್ತಿವೆ ಎಂಬ ಅಡ್ವೋಕೇಟ್ ಜನರಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅವರು ಕಾನೂನು ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...