Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್‌

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ತಮಿಳುನಾಡಿನಲ್ಲಿ ರಾಜಕೀಯ ಬಣ್ಣ ಪಡೆದುಕೊಂಡಿರುವ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಘಟನೆ ಸಂಬಂಧ ಮದ್ರಾಸ್ ಹೈಕೋರ್ಟ್ ಶುಕ್ರವಾರ (ಡಿ.27) ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ ಎಂದು ವರದಿಯಾಗಿದೆ.

ವಕೀಲೆ ಆರ್.ವರಲಕ್ಷ್ಮಿ ಅವರು ಮಾಡಿದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ವಿ.ಲಕ್ಷ್ಮೀನಾರಾಯಣನ್ ಅವರ ವಿಭಾಗೀಯ ಪೀಠವು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ. ಆದರೆ, ಮುಖ್ಯ ನ್ಯಾಯಮೂರ್ತಿಗಳು ಇನ್ನೂ ಒಪ್ಪಿಗೆ ನೀಡದ ಕಾರಣ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಸ್ವಯಂಪ್ರೇರಿತ ವಿಚಾರಣೆ ಆರಂಭಿಸಬೇಕು ಎಂದು ವಕೀಲೆ ವರಲಕ್ಷ್ಮಿ ಕೋರಿದ್ದರು. ವಕೀಲೆಯ ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡು ಇಂದು (ಶುಕ್ರವಾರ) ಮಧ್ಯಾಹ್ನ 2.15ಕ್ಕೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಅಣ್ಣಾ ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು.

ಮಧ್ಯಾಹ್ನದ ವಿರಾಮದ ಬಳಿಕ ಪ್ರಕರಣ ವಿಚಾರಣೆ ಪುನರಾರಂಭಿಸಿದ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಈಗ ನ್ಯಾಯಾಲಯದಲ್ಲಿ ಹಾಜರಿಲ್ಲ. ಅವರಿಂದ ಒಪ್ಪಿಗೆ ಪಡೆದ ಬಳಿಕ ವಿಚಾರಣೆ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಕರಣದ ವಿಚಾರಣೆ ಆರಂಭಿಸಿದ ವೇಳೆ ನ್ಯಾಯ ಪೀಠದ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್ (ಎಜಿ) ಪಿ.ಎಸ್.ರಾಮನ್ ಅವರು, ಈ ಪ್ರಕರಣದಲ್ಲಿ ನಮ್ಮ ವಾದ ಆಲಿಸದೆ ಯಾವುದೇ ಮಧ್ಯಂತರ ಆದೇಶ ನೀಡದಂತೆ ಹಾಗೂ ವಿಚಾರಣೆಯನ್ನು ನಾಳೆಗೆ (ಶನಿವಾರ) ಮುಂದೂಡುವಂತೆ ಕೋರಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ಸ್ಥಿತಿಯ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಹಾಜರಿದ್ದ ಎಐಎಡಿಎಂಕೆ ಪಕ್ಷದ ಪರ ವಕೀಲ ಜಯಪ್ರಕಾಶ್ ಸೇರಿದಂತೆ ಕೆಲ ವಕೀಲರು, ಸ್ವಯಂ ಪ್ರೇರಿತ ವಿಚಾರಣೆ ಮುಂದುವರಿಸಲು ಸಾಧ್ಯವಾಗದಿದ್ದರೆ ಅದನ್ನು ವಾಪಸ್ ಪಡೆಯಿರಿ. ನಾವು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಕೀಲೆ ವರಲಕ್ಷ್ಮಿ ಅವರು ನ್ಯಾಯಾಲಯಕ್ಕೆ ಬರೆದ ಪತ್ರದಲ್ಲಿ, ಆರೋಪಿ ಜ್ಞಾನಶೇಖರನ್‌ ಅವರನ್ನು ಬಂಧಿಸಿದ್ದರೂ, ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬನನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಆದರೆ, ಇದುವರೆಗಿನ ತನಿಖೆಯಲ್ಲಿ ಬೇರೆ ಯಾವುದೇ ವ್ಯಕ್ತಿಯ ಪಾತ್ರದ ಬಗ್ಗೆ ತಿಳಿದು ಬಂದಿಲ್ಲ ಎಂದು ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತರು ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಆಡಳಿತ ಪಕ್ಷದೊಂದಿಗೆ ಸಂಪರ್ಕ ಹೊಂದಿರುವುದರಿಂದ ಮತ್ತು ಪಕ್ಷದ ಹಲವು ಹುದ್ದೆಗಳನ್ನು ಹೊಂದಿರುವುದರಿಂದ, ಈಗ ನಡೆಯುತ್ತಿರುವ ತನಿಖೆಯ ನಿಷ್ಪಕ್ಷಪಾತ ಮತ್ತು ದಕ್ಷತೆಯ ಬಗ್ಗೆ ವಕೀಲೆ ವರಲಕ್ಷ್ಮಿ ತಮ್ಮ ಪತ್ರದಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಎಫ್‌ಐಆರ್ ಪ್ರತಿ ಸೋರಿಕೆ ಮಾಡಿ ಸಂತ್ರಸ್ತೆಯ ಗುರುತು ಬಹಿರಂಗ ಮಾಡಲಾಗಿದೆ ಎಂದು ಆರೋಪಿಸಿರುವ ಅವರು, ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೃಷ್ಣಗಿರಿ ಜಿಲ್ಲೆಯ ನಕಲಿ ಎನ್‌ಸಿಸಿ ಶಿಬಿರಗಳಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಚೆನ್ನೈನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಹಲ್ಲೆ ಘಟನೆಗಳನ್ನೂ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಗಳು ಹೇಳಿವೆ.

ವಕೀಲೆ ವರಲಕ್ಷ್ಮಿ ಅವರು ತನಿಖೆಯ ಮೇಲ್ವಿಚಾರಣೆಗೆ ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ಸಮಿತಿಯನ್ನು ರಚಿಸುವಂತೆ ಅಥವಾ ಪರ್ಯಾಯವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಹೆಚ್ಚುತ್ತಿರುವ ಆದಿವಾಸಿಗಳ ಆತ್ಮಹತ್ಯೆ: ಕೇರಳ ಸರ್ಕಾರ, ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....