Homeಕರ್ನಾಟಕಅನ್ನಭಾಗ್ಯ: ಕೇಂದ್ರಿಯ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ, ವಾರದೊಳಗೆ ತೀರ್ಮಾನ ಸಾಧ್ಯತೆ; ಸಚಿವ ಮುನಿಯಪ್ಪ

ಅನ್ನಭಾಗ್ಯ: ಕೇಂದ್ರಿಯ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ, ವಾರದೊಳಗೆ ತೀರ್ಮಾನ ಸಾಧ್ಯತೆ; ಸಚಿವ ಮುನಿಯಪ್ಪ

- Advertisement -
- Advertisement -

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಅಕ್ಕಿ ಹಂಚುವುದು ಹೇಗೆ ಎನ್ನುವ ಟೆನ್ಷನ್ ಶುರುವಾಗಿದೆ.

ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದ್ದರಿಂದ ಕಾಂಗ್ರೆಸ್​ ಸರ್ಕಾರ ಬೇರೆ ಬೇರೆ ರಾಜ್ಯಗಳ ಮೊರೆ ಹೋಗಿದ್ದು, ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಹೀಗೆ ಆಮದು ಮಾಡಿಕೊಂಡ ಅಕ್ಕಿಯನ್ನು ಜುಲೈ 1 ರಿಂದ ಹಂಚಲು ಸರ್ಕಾರ ನಿರ್ಧರಿಸಿದೆ. ಆದರೆ ಇದು ಇನ್ನಷ್ಟು ವಿಳಂಭವಾಗುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ಒಂದು ವಾರದಲ್ಲಿ ನಿರ್ಧಾರವಾಗಲಿದೆ ಎಂದು ಸರ್ಕಾರ ಹೇಳಿದೆ.

ಕೇಂದ್ರೀಯ ಸ್ವಾಮ್ಯದ ಮೂರು ಸಂಸ್ಥೆಗಳಾದ ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ (ಎನ್ ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್) ಮತ್ತು ಭಾರತೀಯ ಆಹಾರ ನಿಗಮ (ಎಫ್ ಸಿಐ)ದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಮೂರು ಏಜೆನ್ಸಿಗಳ ಅಕ್ಕಿಯ ದರ ದುಬಾರಿಯಾಗಿದೆ. ಸಾಗಾಣಿಕೆ ವೆಚ್ಚ ಸೇರಿ ಪ್ರತಿ ಕೆ.ಜಿ ಗೆ 40 ರೂ. ಅಧಿಕ ದಾಟುವ ಸಾಧ್ಯತೆ. ಇದು FCI ಪೂರೈಕೆ ಮಾಡುತ್ತಿದ್ದ ದರಕ್ಕಿಂತ ಹೆಚ್ಚಾಗಲಿದೆ.

ಈಗಾಗಲೇ ಆಹಾರ ಇಲಾಖೆ ಅಧಿಕಾರಿಗಳು ದರ ಮತ್ತು ಸಾಗಾಣಿಕೆ ವೆಚ್ಚದ ಕುರಿತು ಪ್ರಾಥಮಿಕ ಮಾಹಿತಿ ಪಡೆದಿದೆ. ಹಾಗೇ ಸರ್ಕಾರ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಗೆ ದರ ನಿಗದಿ ಮಾಡುವಂತೆ ಮೂರು ಏಜೆನ್ಸಿಗಳಿಗೆ ಒಂದು ವಾರಗಳ ಸಮಯಾವಕಾಶ ನೀಡಿದೆ. ನಂತರ ರಾಜ್ಯ ಸರ್ಕಾರ ತನ್ನ ತೀರ್ಮಾನ ಕೈಗೊಳ್ಳಲಿದೆ. ಸದ್ಯಕ್ಕೆ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅಸಾಧ್ಯ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಕ್ಕಿ ಖರೀದಿ ಟೆಂಡರ್ ಪ್ರಕ್ರಿಯೆ ಬಳಿಕ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಕೇಂದ್ರಿಯ ಸ್ವಾಮ್ಯದ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ

ಈ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್‌ ಮುನಿಯಪ್ಪ ಅವರು, ”ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರದ ಏಜೆನ್ಸಿಗಳಿಗೆ ಅಕ್ಕಿ ಪೂರೈಸುವಂತೆ ಕೇಳಿಕೊಳ್ಳಲಾಗಿದೆ” ಎಂದರು.

”ಅನ್ನಭಾಗ್ಯ ಯೋಜನೆ ಜಾರಿ ಅಕ್ಕಿ ಪೂರೈಕೆ ಸಂಬಂಧ ಮೂರು ಏಜೆನ್ಸಿಗಳ ಜೊತೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಇಲ್ಲಿ ಅಕ್ಕಿ ಪೂರೈಕೆಗೆ ತಕ್ಷಣ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಕೇಳಿಕೊಳ್ಳಲಾಯಿತು. ಇವರು ಟೆಂಡರ್ ಪ್ರಕ್ರಿಯೆಗೆ ಒಂದು ವಾರ ಕಾಲಾವಕಾಶ ಕೇಳಿದ್ದಾರೆ. ಟ್ರೇಡರ್ಸ್, ಮಿಲ್ ಮಾಲೀಕರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡಲಿದ್ದಾರೆ” ಎಂದು ತಿಳಿಸಿದರು.

”ಈ ಹಿಂದೆಯೂ ರಾಜ್ಯದಲ್ಲಿ ಇದೇ ಸಂಸ್ಥೆಗಳಿಂದ ಅಕ್ಕಿ ತರಿಸಲಾಗಿತ್ತು. ಸಂಸ್ಥೆಗಳಿಂದ ಪೂರೈಕೆ ಬಳಿಕ ಸರ್ಕಾರ ಅಕ್ಕಿ ಸರಬರಾಜು ಮಾಡುತ್ತದೆ” ಎಂದು ಸಚಿವ ಮುನಿಯಪ್ಪ ತಿಳಿಸಿದರು.

ರಾಜ್ಯ ಸರ್ಕಾರ ಈ ಮೊದಲು ಜುಲೈ ಮೊದಲ ವಾರ ಅನ್ನಭಾಗ್ಯ ಜಾರಿ ಮಾಡುವುದಾಗಿ ಹೇಳಿತ್ತು. ಈ ಮಾತುಕತೆ ಬಳಿಕ ಮರಳಿ ನಿಗದಿಯಂತೆ ಯೋಜನೆ ಜುಲೈನಲ್ಲಿ ಜಾರಿಯಾಗುವ ಸಾಧ್ಯತೆ ಇದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...