Homeಮುಖಪುಟಅನ್ನದಾತ ಸಮುದಾಯ ತೀವ್ರ ವಿಷಮ ಸ್ಥಿತಿ ಎದುರಿಸುತ್ತಿದೆ: ಕಾಂಗ್ರೆಸ್

ಅನ್ನದಾತ ಸಮುದಾಯ ತೀವ್ರ ವಿಷಮ ಸ್ಥಿತಿ ಎದುರಿಸುತ್ತಿದೆ: ಕಾಂಗ್ರೆಸ್

ಇಂದು (ಸೆ.27) ನಡೆಯುತ್ತಿರುವ 'ಭಾರತ್ ಬಂದ್' ಕರೆಗೆ ಈಗಾಗಲೇ ಹಲವು ಪಕ್ಷಗಳು, ಸಂಘಟನೆಗಳು ಓಗೊಟ್ಟಿದ್ದು, ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳು ಅನ್ನದಾತರ ಪರ ನಿಂತಿವೆ.

- Advertisement -
- Advertisement -

ಬೆಂಗಳೂರು: ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು (ಸೆ.27) ನಡೆಯುತ್ತಿರುವ ‘ಭಾರತ್ ಬಂದ್’ ಕರೆಗೆ ಈಗಾಗಲೇ ಹಲವು ಪಕ್ಷಗಳು, ಸಂಘಟನೆಗಳು ಬೆಂಬಲಿಸಿದ್ದು, ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳು ಅನ್ನದಾತರ ಪರ ನಿಂತಿವೆ.

”ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದಾಗಿ ದೇಶದ ಬಹುಸಂಖ್ಯಾತ ಅನ್ನದಾತ ಸಮುದಾಯ ತೀವ್ರ ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ.

ಪ್ರಧಾನಿ ಮೋದಿ ಸರ್ಕಾರದ ಕರಾಳ ಶಾಸನ, ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ, ಅವರ ನ್ಯಾಯಯುತ ಬೇಡಿಕೆಗಳನ್ನು ಕೇಳುವ ಕನಿಷ್ಠ ಸೌಜನ್ಯ ತೋರಿಲ್ಲ. ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ ಎಂದು ಅವರು ಕಿಡಿಕಾರಿದ್ದಾರೆ.

ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು. ಆದರೆ, ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು, ಕಳೆದ 7 ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ. ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಒಬ್ಬ ರೈತನ ಮಗನಾಗಿ ಬೆಂಬಲಿಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷದ ನೈತಿಕ ಬೆಂಬಲವೂ ಇದೆ. ಹೋರಾಟ ಶಾಂತಿಯುತವಾಗಿರಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಜನಪರ ಬಂದ್‌‌ಗೆ ಜೆಡಿಎಸ್ ಬೆಂಬಲ ಇರಲಿದೆ: ಎಚ್‌ಡಿಕೆ

‘ಜನಪರ, ರೈತ ಮತ್ತು ಶ್ರಮಿಕರ ಪರವಾದ ಯಾವುದೇ ಪ್ರತಿಭಟನೆ ಮತ್ತು ಬಂದ್‌ಗೆ ಜೆಡಿಎಸ್ ಬೆಂಬಲ ಸದಾ ಇರುತ್ತದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, “ಜನಹಿತದಲ್ಲಿ ನಂಬಿಕೆ ಇಟ್ಟು ನಮ್ಮ ಪಕ್ಷ ಕೆಲಸ ಮಾಡುತ್ತದೆ. ಅವರ ಹಿತಕ್ಕೆ ದಕ್ಕೆ ಎದುರಾದರೆ ಎಲ್ಲ ವೇದಿಕೆಗಳಲ್ಲೂ ದನಿ ಎತ್ತುತ್ತದೆ. ಇದರಲ್ಲಿ ಯಾವುದೇ ಮುಲಾಜಿಲ್ಲ” ಎಂದು ಸ್ಪಷ್ಟಪಡಿಸಿದರು.

ಬಂದ್ ಶಾಂತಿಯುತವಾಗಿ ನಡೆಯಲಿ ಹಾಗೂ ರೈತರು, ಜನರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಬಗ್ಗೆ ಸರಕಾರಗಳ ಗಮನ ಸೆಳೆಯಲಿ ಎಂದು ಎಚ್‌ಡಿಕೆ ಆಶಿಸಿದರು.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಪಿಡಿಪಿ-ಬಿಜೆಪಿ ಮೈತ್ರಿಯು ಅಖಂಡವಾಗಿ ಉಳಿದಿದೆಯೇ..?’; ಮುಫ್ತಿ ವಿರುದ್ಧ ಒಮರ್ ಅಬ್ದುಲ್ಲಾ ಕಿಡಿ

0
ಅನಂತನಾಗ್ ರಜೌರಿ ಸಂಸದೀಯ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಮತ ನೀಡುವಂತೆ, ಬಿಜೆಪಿ ಪ್ರಮುಖ ನಾಯಕರೊಬ್ಬರು ತಮ್ಮ ಪಹಾರಿ ಸಮುದಾಯದ ಸದಸ್ಯರನ್ನು ಕೇಳಿದ್ದು, ಮಾಜಿ ಮುಖ್ಯಮಂತ್ರಿ...