ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 292 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 233 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 19 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.
ಕೋಯಮತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಸೋಲನ್ನು ಕಂಡಿದ್ದು, ಡಿಎಂಕೆ ಅರ್ಭರ್ಥಿ ಗಣಪತಿ ರಾಜಕುಮಾರ್ ಅವರು ಗೆಲುವನ್ನು ಸಾಧಿಸಿದ್ದಾರೆ. ಅಣ್ಣಾಮಲೈ ವಿರುದ್ಧ 18,000ಕ್ಕೂ ಅಧಿಕ ಮತಗಳಿಂದ ಗಣಪತಿ ರಾಜಕುಮಾರ್ ಗೆಲುವನ್ನು ಸಾಧಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿರುದ್ಧ 1,14,000ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15, 239ಕ್ಕೂ ಅಧಿಕ ನೋಟಾ ಮತಗಳ ಚಲಾವಣೆಯಾಗಿದ್ದು, ನೋಟ ಮೂರನೇ ಸ್ಥಾನದಲ್ಲಿದೆ.
ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಮಿಝರೋಂನ 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ. ನಾಗಲ್ಯಾಂಡ್ನ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಪುದುಚೇರಿಯ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಸಿಕ್ಕಿಂನ ಒಂದು ಕ್ಷೇತ್ರದಲ್ಲಿ ಎಸ್‌ಕೆಎಂ ಮುನ್ನಡೆಯನ್ನು ಸಾಧಿಸಿದೆ. ಅಂಡೋಮಾನ್ ನಿಕೋಬರ್ ದ್ವೀಪದ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಮಣಿಪುರ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಮೇಘಾಲಯದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನೊಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ. ಗೋವಾದ ಎರಡು ಕ್ಷೇತ್ರದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ದಾದ್ರಾ ಮತ್ತು ನಾಗರ್ ಅವೇಲಿಯಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಮತ್ತು ಪಕ್ಷೇತರ ಅಭ್ಯರ್ಥಿ ಇನ್ನೊಂದು ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.
ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ದ.ಕನ್ನಡ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿಕಾಂತ್ ಸೆಂಥಿಲ್ ಡಿಎಂಡಿಕೆಯ ನಲ್ಲತಂಬಿ ವಿರುದ್ಧ 42,000ಕ್ಕೂ ಅಧಿಕ ಮತಗಳ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ.


