Homeಮುಖಪುಟತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಹೀನಾಯ ಸೋಲು

ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಹೀನಾಯ ಸೋಲು

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 292 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 233 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 19 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಕೋಯಮತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಸೋಲನ್ನು ಕಂಡಿದ್ದು, ಡಿಎಂಕೆ ಅರ್ಭರ್ಥಿ ಗಣಪತಿ ರಾಜಕುಮಾರ್‌ ಅವರು ಗೆಲುವನ್ನು ಸಾಧಿಸಿದ್ದಾರೆ. ಅಣ್ಣಾಮಲೈ ವಿರುದ್ಧ 18,000ಕ್ಕೂ ಅಧಿಕ ಮತಗಳಿಂದ ಗಣಪತಿ ರಾಜಕುಮಾರ್‌ ಗೆಲುವನ್ನು ಸಾಧಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ವಿರುದ್ಧ 1,14,000ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15, 239ಕ್ಕೂ ಅಧಿಕ ನೋಟಾ ಮತಗಳ ಚಲಾವಣೆಯಾಗಿದ್ದು, ನೋಟ ಮೂರನೇ ಸ್ಥಾನದಲ್ಲಿದೆ.

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ.  ಮಿಝರೋಂನ 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ.  ನಾಗಲ್ಯಾಂಡ್ನ 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಪುದುಚೇರಿಯ 1 ಕ್ಷೇತ್ರದಲ್ಲಿ ಕಾಂಗ್ರೆಸ್‌  ಮುನ್ನಡೆಯನ್ನು ಸಾಧಿಸಿದೆ. ಸಿಕ್ಕಿಂನ ಒಂದು ಕ್ಷೇತ್ರದಲ್ಲಿ ಎಸ್‌ಕೆಎಂ ಮುನ್ನಡೆಯನ್ನು ಸಾಧಿಸಿದೆ. ಅಂಡೋಮಾನ್‌ ನಿಕೋಬರ್‌ ದ್ವೀಪದ 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ.  ಮಣಿಪುರ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಮೇಘಾಲಯದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನೊಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ.  ಗೋವಾದ ಎರಡು ಕ್ಷೇತ್ರದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಇನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ದಾದ್ರಾ ಮತ್ತು ನಾಗರ್‌ ಅವೇಲಿಯಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಮತ್ತು ಪಕ್ಷೇತರ ಅಭ್ಯರ್ಥಿ ಇನ್ನೊಂದು ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ದ.ಕನ್ನಡ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿಕಾಂತ್‌ ಸೆಂಥಿಲ್‌ ಡಿಎಂಡಿಕೆಯ ನಲ್ಲತಂಬಿ ವಿರುದ್ಧ  42,000ಕ್ಕೂ ಅಧಿಕ ಮತಗಳ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...