HomeUncategorizedSIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

- Advertisement -
- Advertisement -

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ತರಹುಣಸೆ ನಿವಾಸಿ ಅನ್ನಪೂರ್ಣ ಎಂ (EPIC ಸಂಖ್ಯೆ: ZBG8817611) ಎಂಬ ಮತದಾರರಿಗೆ ಚುನಾವಣಾ ಆಯೋಗ ನೀಡಿರುವ ನೋಟಿಸ್, ಆಡಳಿತಶಾಹಿಯ ತಾರ್ಕಿಕಹೀನ ಧೋರಣೆಗೆ ಸ್ಪಷ್ಟ ಸಾಕ್ಷಿಯಾಗಿದೆ.

ಅನ್ನಪೂರ್ಣ ಎಂ ಅವರು ಬೆಂಗಳೂರು ಉತ್ತರ ತಾಲೂಕಿನ ತರಹುಣಸೆಯ ವಾಸಿಯಾಗಿದ್ದು, ಭಾಗ ಸಂಖ್ಯೆ 3ರ (ಸ್ಟೋನ್ ಹಿಲ್ ಸರ್ಕಾರಿ ಶಾಲೆ) ಕ್ರಮಸಂಖ್ಯೆ 603 ರಲ್ಲಿ ನೋಂದಾಯಿತ ಮತದಾರರಾಗಿದ್ದಾರೆ. ಆಯೋಗದ ಮಾರ್ಗದರ್ಶನದಂತೆ ಅವರು ತಮ್ಮ ತಾಯಿ ಮುನಿ ಅಕ್ಕಯ್ಯಮ್ಮ ಅವರ ವಿವರಗಳೊಂದಿಗೆ ಸರಿಯಾದ ಮ್ಯಾಪಿಂಗ್ ಮಾಡಿ, ಎನ್ಯುಮರೇಷನ್ ನಮೂನೆಯನ್ನು ಪೂರ್ಣಗೊಳಿಸಿ ಬಿಎಲ್‌ಒ ಅವರಿಗೆ ನಿಯಮಾನುಸಾರ ತಲುಪಿಸಿದ್ದರು. ಕರಡು ಪಟ್ಟಿಯಲ್ಲೂ ಅವರ ಹೆಸರು ಬಂದಿತ್ತು. ಆದರೆ, ನಂತರದಲ್ಲಿ ಆಯೋಗವು ಸಿದ್ಧಪಡಿಸಿರುವ ಆನ್‌ಲೈನ್ ಆಲ್ಗರಿದಮ್ ಮತ್ತು ತಾಂತ್ರಿಕ ವ್ಯವಸ್ಥೆಯು ಇದೀಗ ಅವರಿಗೆ ಅನಿರೀಕ್ಷಿತ ನೋಟಿಸ್ ಒಂದನ್ನು ನೀಡಿದೆ.

ಚುನಾವಣಾ ಆಯೋಗ ನೀಡಿರುವ ನೋಟಿಸ್‌ನ ಪ್ರಕಾರ, ಹಿಂದಿನ SIR ಸಮಯದಲ್ಲಿ ಬಳಕೆಯಾದ ನಿಮ್ಮ ಅಜ್ಜಿ/ಅಜ್ಜಿಯ ವಿವರಗಳು ಮತ್ತು ನಿಮ್ಮ ನಡುವಿನ ವಯಸ್ಸಿನ ವ್ಯತ್ಯಾಸವು 40 ವರ್ಷಗಳಿಗಿಂತ ಕಡಿಮೆಯಿದೆ, ಇದು ತಪ್ಪಾದ ಜೋಡಣೆ ಎಂಬ ವಿಚಿತ್ರ ಕಾರಣವನ್ನು ನೀಡಲಾಗಿದೆ. ಸೆಪ್ಟೆಂಬರ್ 11 ರಂದು ಮೂಲ ದಾಖಲೆಗಳೊಂದಿಗೆ ವಿಚಾರಣಾಧಿಕಾರಿಗಳ ಮುಂದೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ.

ಇಲ್ಲಿ ಏಳುವ ಪ್ರಮುಖ ಪ್ರಶ್ನೆಯೆಂದರೆ, ಮತದಾರರು ತಮ್ಮ ತಂದೆಯ ವಿವರ ಹಾಗೂ ಅಗತ್ಯ ಮೂಲ ದಾಖಲೆಗಳನ್ನು (ಎಸ್‌ಎಸ್‌ಎಲ್‌ಸಿ, ಆಧಾರ್ ಹಾಗೂ ಕರಾರುವಕ್ಕಾದ ಎನ್ಯುಮರೇಷನ್ ಫಾರಂ) ಸರಿಯಾಗಿ ನೀಡಿದ್ದರೂ, ಹಿನ್ನೆಲೆಯಲ್ಲಿ ಸಿಸ್ಟಮ್‌ನಲ್ಲಾಗುವ ತಾಂತ್ರಿಕ ಮ್ಯಾಪಿಂಗ್ ದೋಷಗಳಿಗೆ ಸಾರ್ವಜನಿಕರನ್ನು ಹೊಣೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಅಜ್ಜ-ಮೊಮ್ಮಗಳ ನಡುವಿನ ವಯಸ್ಸಿನ ಅಂತರದ ತಾಂತ್ರಿಕ ಕಾರಣವೊಡ್ಡಿ, ದಶಕಗಳಿಂದ ಅದೇ ಕ್ಷೇತ್ರದಲ್ಲಿ ವಾಸಿಸುತ್ತಿರುವ ನೈಜ ಮತದಾರರಿಗೆ ನೋಟಿಸ್ ಜಾರಿ ಮಾಡುವುದು ಚುನಾವಣಾ ಆಯೋಗದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ.

ಚುನಾವಣಾ ಆಯೋಗದ ನಡೆಗೆ ಬೇಸರ:

ಈ ಬಗ್ಗೆ ನಾನು ಗೌರಿ.ಕಾಂನೊಂದಿಗೆ ಮಾತನಾಡಿರು ‘ಅನ್ನಪೂರ್ಣ ಎಂ’ ನನ್ನ ಬಳಿ ಎಲ್ಲಾ ರೀತಿಯ ಸರಿಯಾದ ದಾಖಲೆಗಳಿದ್ದವು. ನಿಯಮದಂತೆಯೇ ನನ್ನ ತಾಯಿಯ ಹೆಸರಿನೊಂದಿಗೆ ಸರಿಯಾಗಿ ಮ್ಯಾಪಿಂಗ್ ಮಾಡಿ ಎನ್ಯುಮರೇಷನ್ ಫಾರಂ ಅನ್ನು ಬಿಎಲ್‌ಒಗೆ ಹಸ್ತಾಂತರಿಸಿದ್ದೆ. ಆದರೆ ಚುನಾವಣಾ ಆಯೋಗ ನೀಡಿದ ನೋಟಿಸ್‌ನಲ್ಲಿ ‘ನಿಮ್ಮ ಮತ್ತು ನಿಮ್ಮ ಅಜ್ಜನ ನಡುವಿನ ವಯಸ್ಸಿನ ಅಂತರ ತಾಳೆಯಾಗುತ್ತಿಲ್ಲ’ ಎನ್ನುವ ವಿಚಿತ್ರ ಕಾರಣ ನೀಡಲಾಗಿದೆ. ವಾಸ್ತವವಾಗಿ ನನ್ನ ಮತ್ತು ನನ್ನ ಅಜ್ಜನ ವಯಸ್ಸಿನ ಅಂತರ 40 ವರ್ಷಕ್ಕಿಂತಲೂ ಹೆಚ್ಚಿದೆ. ಒಂದು ವೇಳೆ ಆಯೋಗ ಸ್ವಯಂಪ್ರೇರಿತವಾಗಿ ನನ್ನ ಹೆಸರನ್ನು ಅಜ್ಜನ ಹೆಸರಿಗೆ ಮ್ಯಾಪಿಂಗ್ ಮಾಡಿಕೊಂಡಿದೆ ಎಂದರೂ, ಅವರು ನೀಡಿರುವ ಈ ವಯಸ್ಸಿನ ವ್ಯತ್ಯಾಸದ ನೆಪ ತೀರಾ ದೋಷಪೂರಿತವಾಗಿದೆ. ಸರಿ ಇರುವ ದಾಖಲೆಗಳನ್ನು ಪರಿಶೀಲಿಸದೆ, ತಾಂತ್ರಿಕ ತಪ್ಪುಗಳನ್ನು ನಮ್ಮ ಮೇಲೆ ಹೇರಿ ವಿಚಾರಣೆಗೆ ಹಾಜರಾಗಬೇಕೆಂದು ಕಿರುಕುಳ ನೀಡುತ್ತಿರುವುದು ಬೇಸರ ತಂದಿದೆ ಎಂದಿದ್ದಾರೆ.

ಇಂತಹ ಸಾಲು ಸಾಲು ನೋಟಿಸ್‌ಗಳು ಬಡ ಮತ್ತು ಶ್ರಮಿಕ ವರ್ಗದ ಮತದಾರರನ್ನು ತಾಲೂಕು ಕಚೇರಿಗಳು ಹಾಗೂ ವಿಚಾರಣಾ ಕೇಂದ್ರಗಳಿಗೆ ಅಲೆಯುವಂತೆ ಮಾಡುತ್ತಿವೆ. ಬ್ಯಾಟರಾಯನಪುರ ಮಾತ್ರವಲ್ಲದೆ ರಾಜ್ಯಾದ್ಯಂತ ಆಯೋಗದ ಇಂತಹ ಯಾಂತ್ರಿಕ ಪರಿಶೀಲನಾ ವಿಧಾನದಿಂದಾಗಿ ಸಾವಿರಾರು ಮತದಾರರು ಅಂತಿಮ ಪಟ್ಟಿಯಿಂದ ಹೊರಬೀಳುವ ಭೀತಿಯಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...