Homeಕರ್ನಾಟಕಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

- Advertisement -
- Advertisement -

ಭಾರತದಾದ್ಯಂತ ಕೊರೊನಾ ವೈರಸ್‌ ಅಪಾಯಕಾರಿಯಾಗಿ ಹರಡುತ್ತಿದೆ. ದೇಶದ ಬೆರಳೆಣಿಕೆಯ ಒಂದೆರಡು ರಾಜ್ಯಗಳನ್ನು ಬಿಟ್ಟರೆ ಎಲ್ಲಾ ರಾಜ್ಯಗಳು ಕೊರೊನಾ ಸೋಂಕನ್ನು ನಿಯಂತ್ರಿಸಲಾಗದೆ ಪರದಾಡುತ್ತಿವೆ.ಇವುಗಳಲ್ಲಿ ಕರ್ನಾಟಕವೂ ಒಂದು. ಆದರೆ, ಕರ್ನಾಕಟದ ಕೊಡಗು ಜಿಲ್ಲೆ ಮಾತ್ರ ಸೋಂಕಿನ ಬಾದೆಯಿಂದ ಮುಕ್ತವಾಗಿ ಸಂತೋ‍ಷದ ನಗೆ ಬೀರುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಕೊಡಗಿನಲ್ಲಿ ಕಳೆದ ಐದು ವಾರಗಳಿಂದ ಒಂದೇ ಒಂದು ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿಲ್ಲ. ಕೊಡಗನ್ನು ಕೊರೊನಾ ಸೋಂಕಿನಿಂದ ದೂರವಿಡಲು ಶ್ರಮಿಸುತ್ತಿರುವವರು ಅಲ್ಲಿನ ಜಿಲ್ಲಾಧಿಕಾರಿಯಾದ ಕೇರಳ ಮೂಲದ ‘ಅನೀಸ್ ಕಣ್ಮಣಿ ಜಾಯ್‌’.

ಕೇರಳದ ಬಡ ರೈತನ ಮಗಳಾಗಿದ್ದ ಅನೀಸ್ ಅವರು ತಮ್ಮ ಶಾಲಾ ದಿನಗಳಲ್ಲಿ ಪುಸ್ತಕಗಳನ್ನೂ ಖರೀದಿಸಲಾಗದಷ್ಟು ಬಡತನದಲ್ಲಿ ಬೆಳೆದವರು. ಆದರೆ, ಅವರು ಈಗ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ. ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಕೊಡಗು ಜಿಲ್ಲೆಯನ್ನು ಮುನ್ನಡೆಸುತ್ತಿರುವ ಇವರ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಿಗರು ಪ್ರಶಂಸೆಯ ಮಳೆಗರೆಯುತ್ತಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಕೊಡಗಿನಲ್ಲಿ ಅವರು ಮಾಡುತ್ತಿರುವ ಪ್ರಯತ್ನ ರಾಷ್ಟ್ರಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಇಡೀ ದೇಶದಲ್ಲಿ ಕೊರೊನಾ ಮುಕ್ತವಾಗಿರುವ ಕೆಲವೇ ಜಿಲ್ಲೆಗಳಲ್ಲಿ ಕೊಡಗು ಕೂಡ ಒಂದು. ಕರ್ನಾಟಕವೂ ಸೇರಿದಂತೆ ಇತರ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, ಕೊಡಗು ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಒಂದೂ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್;  ಕೊರೊನಾ ವಿರುದ್ಧ ಗೆದ್ದ ಕೊಡಗು..!!
ಅನೀಸ್ ಕಣ್ಮಣಿ ಜಾಯ್

Covid19india.org ನಲ್ಲಿ ನವೀಕರಿಸಿದ ಸಂಖ್ಯೆಗಳ ಪ್ರಕಾರ, ಇಲ್ಲಿಯವರೆಗೆ ಕೊಡಗಿನಲ್ಲಿ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೂವರಲ್ಲಿ ಎರಡು ಪ್ರಕರಣಗಳು ಸಕ್ರಿಯವಾಗಿವೆ ಮತ್ತು ಒಬ್ಬರು ಗುಣಮುಖರಾಗಿದ್ದಾರೆ.

ದೇಶಾದ್ಯಂತ ಲಾಕ್‌ಡೌನ್‌ ಸಡಿಲಗೊಳಿಸಿ, ಅನೇಕ ಪ್ರವಾಸಿ ತಾಣಗಳನ್ನು ತೆರೆಯಲಾಗುತ್ತಿದೆ. ಆದರೆ, ಕೊಡಗಿನಲ್ಲಿ ಪ್ರವಾಸಿ ತಾಣಗಳನ್ನು ಇನ್ನೂ ಕೆಲವು ದಿನಗಳ ವರೆಗೆ ತೆರೆಯುವುದಿಲ್ಲ ಎಂದು ಅನ್ನೀಸ್‌ ಘೋಷಿಸಿದ್ದಾರೆ.

ನೊಂದಾಯಿಸಿಕೊಂಡಿರುವ ಹೋಂಸ್ಟೇಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಬರುವ ಪ್ರವಾಸಗಳ ಪ್ರಯಾಣದ ಇತಿಹಾಸ, ಅವರ ವಿವರಗಳುಳ್ಳ ದಾಖಲೆಗಳನ್ನು ಪಡೆದುಕೊಳ್ಳಬೇಕು ಹಾಗೂ ಕ್ವಾರಂಟೈನ್‌ಗೆ ಒಳಪಟ್ಟಿದ್ದರೆ ಎಂದು ತಿಳಿದುಕೊಳ್ಳುವಂತೆ ಆದೇಶಿಸಲಾಗಿದೆ.

ಕೂರ್ಗ್‌ ಎಂದೇ ಖ್ಯಾತಿ ಪಡೆದಿರುವ ಪ್ರವಾಸಿ ತಾಣವಾದ ಕೊಡಗಿನಲ್ಲಿ ಇದೂವರೆಗೂ 3 ಕೊರೊನಾ ಪ್ರಕರಣಗಳು ಮಾತ್ರ ದಾಖಲಾಗಿದ್ದು, ಸೋಂಕನ್ನು ನಿಯಂತ್ರಸುವಲ್ಲಿ ಅಲ್ಲಿಯ ಜಿಲ್ಲಾಧಿಕಾರಿಯಾಗಿರುವ ಅನೀಸ್ ಪ್ರಯತ್ನ ಯಶಸ್ವಿಯಾಗಿದೆ. ಬಡತನದ ವಿರುದ್ಧ ಹೋರಾಡಿ ಸಾಧನೆ ಮಾಡಿರುವ ಅನ್ನೀಸ್ ಇದೀಗ ಕೊರೊನಾ ವಿರುದ್ಧದ ಹೋರಾಟದಲ್ಲಿಯೂ ಸಾಧನೆ ಮಾಡಿ ಯಶಸ್ವಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ಕೇಳಿಬರುತ್ತಿವೆ.

Ennis Kanmani Joy of Kerala fought poverty and cracked UPSC Civil Services Exam. She secured 65th rank in her second…

Posted by Sochle on Saturday, June 6, 2020

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಅನ್ನೀಸ್‌ ಅವರು ಬಡತನದ ವಿರುದ್ಧ ಹೇಗೆ ಹೋರಾಡಿದರು ಮತ್ತು ಹೇಗೆ ಕನಸನ್ನು ಸಾಧಿಸಿದರು ಎಂಬ ಕಥೆಯನ್ನು ಹಂಚಿಕೊಂಡಿದ್ದಾರೆ.


ಓದಿ: ‘ಭರವಸೆಯ ಕಿರಣ’; ಕೊರೊನಾ ಸೋಂಕಿತ 97 ವರ್ಷದ ಹಿರಿಯ ವ್ಯಕ್ತಿ ಗುಣಮುಖ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...