Homeಮುಖಪುಟಚುನಾವಣಾ ಬಾಂಡ್ ರದ್ದತಿ ಹೆಚ್ಚಿನ ಪಾರದರ್ಶಕತೆಗೆ ಕಾರಣವಾಗಲಿದೆ: ಅಮರ್ತ್ಯ ಸೇನ್

ಚುನಾವಣಾ ಬಾಂಡ್ ರದ್ದತಿ ಹೆಚ್ಚಿನ ಪಾರದರ್ಶಕತೆಗೆ ಕಾರಣವಾಗಲಿದೆ: ಅಮರ್ತ್ಯ ಸೇನ್

- Advertisement -
- Advertisement -

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರು ಸೋಮವಾರ ಸ್ವಾಗತಿಸಿದ್ದಾರೆ. ಇದೊಂದು ‘ದೊಡ್ಡ ಹಗರಣ’ವಾಗಿತ್ತು ಎಂದಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಅಮೆರಿಕದ ಮ್ಯಾಸಚೂಸೆಟ್ಸ್‌ನಿಂದ ಮಾತನಾಡಿದ ಸೇನ್, “ಚುನಾವಣಾ ಬಾಂಡ್ ರದ್ದತಿ ಚುನಾವಣಾ ಸಂದರ್ಭದಲ್ಲಿ ಜನರಲ್ಲಿ ಹೆಚ್ಚಿನ ಪಾರದರ್ಶಕತೆಗೆ ಕಾರಣವಾಗಲಿದೆ” ಎಂದು ಹೇಳಿದ್ದಾರೆ.

“ಚುನಾವಣಾ ಬಾಂಡ್‌ ಯೋಜನೆ ಒಂದು ಡೊಡ್ಡ ಹಗರಣವಾಗಿತ್ತು. ಅದು ರದ್ದುಪಡಿಸಿರುವುದು ನನಗೆ ಬಹಳ ಖುಷಿ ಕೊಟ್ಟಿದೆ. ಇದು ಚುನಾವಣಾ ಸಮಯದಲ್ಲಿ ಜನರಿಗೆ ಪಾರದರ್ಶಕತೆಯನ್ನು ಒದಗಿಸಲಿದೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಫೆ.15, 2024ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದೆ. ಈ ಮೂಲಕ ಕಾನೂನಾತ್ಮಕವಾಗಿ ನಡೆಯುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದೆ.

ಚುನಾವಣಾ ಬಾಂಡ್ ಯೋಜನೆ ಅಸಂವಿಧಾನಿಕವಾಗಿದ್ದು, ಇದು ಜನರ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್ ನೀಡುತ್ತಿತ್ತು. ಹಲವು ಕಂಪನಿಗಳು, ಉದ್ಯಮಿಗಳು ರಾಜಕೀಯ ಪಕ್ಷಗಳಿಗೆ, ವಿಶೇಷವಾಗಿ ಬಿಜೆಪಿಗೆ ಕೋಟ್ಯಾಂತರ ರೂಪಾಯಿ ಹಣ ಈಗಾಗಲೇ ನೀಡಿದ್ದಾರೆ. ಯಾರು, ಯಾವಾಗ, ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಮಾರ್ಚ್‌ ಒಳಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವಾಗ ಎಸ್‌ಬಿಐಗೆ ಸೂಚಿಸಿದೆ. ಅಲ್ಲದೆ, ಮಾರ್ಚ್ 13ರ ಒಳಗೆ ಚುನಾವಣಾ ಆಯೋಗ ಈ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಆದೇಶಿಸಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವ, ಸಂವಿಧಾನ, ಸತ್ಯವನ್ನು ರಕ್ಷಿಸಲು ಮಾಧ್ಯಮ ವಿಫಲವಾಗಿದೆ: ನ್ಯಾ. ಕುರಿಯನ್ ಜೋಸೆಫ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...