Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು: ಸಾವಿನ ಹೆದ್ದಾರಿಯಾಗುತ್ತಿದೆಯಾ?

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು: ಸಾವಿನ ಹೆದ್ದಾರಿಯಾಗುತ್ತಿದೆಯಾ?

- Advertisement -
- Advertisement -

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ.

ಈ ಬೈಕ್​ ಅಪಘಾತದಲ್ಲಿ ಮಣಿ(25), ಜನಾರ್ದನ ಪೂಜಾರಿ(21) ಸಾವನ್ನಪ್ಪಿದ್ದಾರೆ. ಮೃತರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಸ್ಥಳಕ್ಕೆ ಮದ್ದೂರು ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಸಾವಿನ ಹೆದ್ದಾರಿಯಾಗುತ್ತಿದೆಯಾ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇ?

ಬೆಂಗಳೂರು – ಮೈಸೂರು ನಡುವಿನ ಎಕ್ಸ್​ಪ್ರೆಸ್​ ವೇ ಉದ್ಘಾಟನೆಯಾದಾಗಿನಿಂದ ಅಲ್ಲಲ್ಲಿ ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗುತ್ತಲೇ ಇವೆ. ಇನ್ನೂ ಉದ್ಘಾಟನೆಗೂ ಮುನ್ನ ಕೂಡ ಈ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ ವೇಳೆಯಲ್ಲೂ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಎಕ್ಸ್​ಪ್ರೆಸ್​ ವೇಯಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ವಾಹನಗಳ ಸಂಚಾರ ಪ್ರಾರಂಭವಾಯಿತು. ಅಲ್ಲಿಂದ ಇಲ್ಲಿವರೆಗೆ ಸರಿ ಸುಮಾರು 335ಕ್ಕೂ ಹೆಚ್ಚು ಅಪಘಾತ ಪ್ರಕರಣಗಳು ವರದಿಯಾಗಿದ್ದು, ಸಾಕಷ್ಟು ಜನರ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 51 ಕಿಮೀ ಹೆದ್ದಾರಿ ಹಾದುಹೋಗಲಿದ್ದು, 6 ತಿಂಗಳಲ್ಲಿ 110ಕ್ಕೂ ಅಧಿಕ ಅಪಘಾತಗಳು ನಡೆದಿದ್ದು, 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸುಮಾರು 100 ಜನ ಗಾಯಾಳುಗಳಾಗಿದ್ದಾರೆ ಎಂದು ವರದಿಯಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 225 ಅಪಘಾತ ಪ್ರಕರಣಗಳು ವರದಿಯಾಗಿದ್ದು, 43 ಜನರು ಪ್ರಾಣಬಿಟ್ಟಿದ್ದಾರೆ. ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಡಿಸೆಂಬರ್‌ನಲ್ಲಿ 40 ಅಪಘಾತ ಸಂಭವಿಸಿದ್ದು, 9 ಜನ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಮತ್ತಿಕೆರೆ ಸಮೀಪ 3 ಕಾರುಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಮೂವರು ಗಾಯಾಳುಗಳಾಗಿದ್ದರು. ಹೆದ್ದಾರಿ ಕಾಮಗಾರಿ ಕೊನೆಯ ಹಂತಕ್ಕೆ ಬಂದ ಡಿಸೆಂಬರ್, ಜನವರಿ ತಿಂಗಳಲ್ಲಿಯೇ ಹೆಚ್ಚಿನ ಅಪಘಾತ ಪ್ರಕರಣಗಳು ಸಂಭವಿಸಿವೆ.

ಎಕ್ಸ್​ಪ್ರೆಸ್​ ವೇಯಲ್ಲಿ ಎಲ್ಲಿಯೂ ವೇಗ ಮಿತಿ ಹಾಗೂ ಇತರೆ ಮಾಹಿತಿಯನ್ನು ಒದಗಿಸುವ ಸೂಚನಾ ಫಲಕಗಳು ಇಲ್ಲ. ಜೊತೆಗೆ ಮೈಸೂರು ಜಿಲ್ಲೆಯಲ್ಲಿ ಹಾದುಹೋಗುವ ಹೆದ್ದಾರಿಯಲ್ಲಿ ಸೇತುವೆಗಳು ಹೆಚ್ಚು ತಿರುವಿನಿಂದ ಕೂಡಿರುವುದು ಅಪಘಾತಕ್ಕೆ ಕಾರವಾಗಿದೆ.

ಜನವರಿಯಿಂದ ಈವರೆಗೆ 243 ಅಪಘಾತ, 110 ಜನ ಸಾವು

ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು, 50 ಜನ ಸಾವನ್ನಪ್ಪಿದರೆ, 190 ಜನರಿಗೆ ಗಾಯಗಳಾಗಿವೆ. ಇನ್ನು ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಸಾವನ್ನಪ್ಪಿದ್ದಾರೆ. 54 ಮಂದಿಗೆ ತೀವ್ರ ಪೆಟ್ಟು ಬಿದ್ದಿದ್ದರೆ, 189 ಮಂದಿಗೆ ಕೈ ಕಾಲು ಮುರಿತವಾಗಿದ್ದು, 295 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮೂಲಕ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇ ಸಾವಿನ ಹೆದ್ದಾರಿಯಾಗಿ ಮಾರ್ಪಾಡುತ್ತಿದೆ.

ಇದನ್ನೂ ಓದಿ: ಜನಾಕ್ರೋಶಕ್ಕೆ ಬೆಚ್ಚಿದ ಸರ್ಕಾರ: ಬೆಂಗಳೂರು-ಮೈಸೂರು ಟೋಲ್ ದರ ಹೆಚ್ಚಳಕ್ಕೆ ತಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆ್ಯನಿಮೇಟೆಡ್ ವಿಡಿಯೋ ಹಂಚಿಕೆ: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

0
ಕಾಂಗ್ರೆಸ್ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲಿದೆ ಎಂಬ ಸಂದೇಶ ಸಾರುವ ಆ್ಯನಿಮೇಟೆಡ್ ವಿಡಿಯೋ ಪೋಸ್ಟ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಮೇ 4,...