Homeಕರ್ನಾಟಕಮೈ-ಬೆಂ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಸಾವು

ಮೈ-ಬೆಂ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಸಾವು

- Advertisement -
- Advertisement -

ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಂದು ಸಂಜೆ ಮತ್ತೊಂದು ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ರಾಮನಗರ ತಾಲ್ಲೂಕಿನ ಜೈಪುರ ಬಳಿ ಅಪಘಾತ ಸಂಭವಿಸಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಫ್ಲೈವುಡ್ ಶೀಟ್‌ಗಳನ್ನು ತುಂಬಿಕೊಂಡು ಚಲಿಸುತ್ತಿದ್ದ ಬೊಲೊರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್‌ನ ಗ್ಲಾಸ್ ಹೊಡೆದು ಫ್ಲೈವುಡ್ ಶೀಟ್‌ಗಳು ಬಸ್‌ನೊಳಕ್ಕೆ ನುಗ್ಗಿವೆ. ನಿಯಂತ್ರಣ ತಪ್ಪಿದ್ದ ಬಸ್ ಪಕ್ಕದ ರಸ್ತೆ ದಾಟಿ ಬಂದು ನಿಂತಿದೆ. ದುರ್ಘಟನೆಯಲ್ಲಿ ನಿರ್ವಾಹಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇಂದು ಸಂಜೆ 4 ಗಂಟೆ ಸಮಯಕ್ಕೆ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡ ಚಾಲಕ ಮತ್ತು ಇತರ ಪ್ರಯಾಣಿಕರನ್ನು ರಾಮನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು ದಿನಗಳ ಹಿಂದಷ್ಟೇ ಇದೇ ರಸ್ತೆಯಲ್ಲಿ ಬೈಕ್ ಸವಾರ ವಾಹನವೊಂದಕ್ಕೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಜನವರಿಯಿಂದ ಈವರೆಗಿನ ಅಪಘಾತಗಳಲ್ಲಿ 111 ಜನ ಸಾವು

ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 244 ಅಪಘಾತಗಳು ಸಂಭವಿಸಿದ್ದು, 51 ಜನ ಸಾವನ್ನಪ್ಪಿದರೆ, 190 ಜನರಿಗೆ ಗಾಯಗಳಾಗಿವೆ. ಇನ್ನು ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಸಾವನ್ನಪ್ಪಿದ್ದಾರೆ. 54 ಮಂದಿಗೆ ತೀವ್ರ ಪೆಟ್ಟು ಬಿದ್ದಿದ್ದರೆ, 189 ಮಂದಿಗೆ ಕೈ ಕಾಲು ಮುರಿತವಾಗಿದ್ದು, 295 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮೂಲಕ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇ ಸಾವಿನ ಹೆದ್ದಾರಿಯಾಗಿ ಮಾರ್ಪಾಡುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.

ಈ ಕುರಿತು ಇಂದು ಮೈಸೂರಿನಲ್ಲಿ ಸ್ಪಷ್ಟನೆ ನೀಡಿರುವ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹರವರು, “ಬೆಂಗಳೂರು ಮೈಸೂರು ಹೆದ್ದಾರಿಯನ್ನು ವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದು ಹೆದ್ದಾರಿಯೇ ಹೊರತು ರೇಸ್ ಟ್ರಾಕ್ ಅಲ್ಲ. ಯಾರು ಅತಿ ಹೆಚ್ಚು ವೇಗವಾಗಿ ಸಂಚರಿಸುತ್ತಾರೆ ಅವರು ಅಪಘಾತಕ್ಕೆ ತುತ್ತಾಗುತ್ತಾರೆ. ಅದಕ್ಕೂ ರಸ್ತೆಗೂ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. We need explanation from commissioner, KARNATAKA STATE ROAD SAFETY AUTHORITY
    “WHAT ACTION YOU HAVE TAKEN ON THESE ACCIDENTS !?”

    CHAIRMSN, SUPREME COURT COMMITTEE ON ROAD SAFETY
    SECRETARY MoRTH
    RO, MORTH BANGALORE

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...