Homeಮುಖಪುಟಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

ಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

- Advertisement -
- Advertisement -

ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಒಂದು ದಿನಗಳ ಬಳಕ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಊಹಿಸಲು ಸಾಧ್ಯವಾಗದ ಅಮಾನವೀಯ ಘಟನೆಗಳು ಬೆಳಕಿಗೆ ಬರುತ್ತಿವೆ.

ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿರುವುದು ಇದೀಗ ಬಹಿರಂಗವಾಗಿದೆ. ಈ ಬಗ್ಗೆ ಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಿಂಗ್ ಜಿಲ್ಲೆಯ ಸೆರೋವ್‌ ಗ್ರಾಮದಲ್ಲಿ ಸಂಸ್ತ್ರಧಾರಿಗಳ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೋರ್ವರ 80 ವರ್ಷದ ಪತ್ನಿಯನ್ನು ಮನೆಯ ಒಳಗೆ ಕೂಡಿ ಹಾಕಿ ಬೆಂಕಿ ಹಚ್ಚಿ ಜೀವಂತವಾಗಿ ದಹಿಸಿದೆ ಎಂದು ಸೆರೋವ್‌ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾದ ಎಫ್‌ಐಆರ್ ನಲ್ಲಿ ಹೇಳಲಾಗಿದೆ. ಮೇ 28ರಂದು ಸೆರೋವ್‌ನಲ್ಲಿ ಸಾಮೂಹಿಕ ಹಿಂಸಾಚಾರ ಹಾಗೂ ಗುಂಡಿನ ಕಾಳಗ ನಡೆದ ಸಮಯದಲ್ಲಿ ಈ ಘಟನೆ ನಡೆದಿದೆ.

ಇಂಪಾಲ್‌ನಿಂದ ಸುಮಾರು 45 ಕಿಮೀ ದೂರದಲ್ಲಿರುವ ಸರ ಗ್ರಾಮದಲ್ಲಿ ಮೇ 28ರಂದು ಈ ಘಟನೆ ನಡೆದಿದೆ. 80 ವರ್ಷದ ಇಚಿತೊಂಬಿ ಮನೆಯೊಳಗೆ ಇದ್ದಾಗ ದಾಳಿಕೋರರು ಹೊರಗಿನಿಂದ ಬೀಗ ಹಾಕಿದ್ದರು. ಅನಂತರ ಮನೆಗೆ ಬೆಂಕಿ ಹಚ್ಚಲಾಗಿದೆ. ಕುಟುಂಬದವರು ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದ. ನಂತರ ಇಬೆಟೊಂಬಿಯು ಸಜೀವವಾಗಿ ಸುಟ್ಟು ಕರಕಲಾಗಿದ್ದರು ಎಂದು ಅವರು ಕುಟುಂಬದವರು ಹೇಳಿದ್ದಾರೆ.

ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗ್ರಾಮದ ಮೇಲೆ ದಾಳಿ ನಡೆಸಿದ ಸಶಸ್ತ್ರಧಾರಿಗಳ ಗುಂಪು ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯಾಗಿಯರುವ 80 ವರ್ಷದ ಇತೊಂಬಿ ಮನೆಯಲ್ಲಿರುವಾಗ ಹೊರಗಿ ನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದ್ದರು. ಅವರನ್ನು ರಕ್ಷಿಸಲು ಕುಟುಂಬದವರು ಬಂದ ಸಂದರ್ಭದಲ್ಲಿ ಮನೆ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಇಬೆತೊಂಬಿ ಅವರ ಮೊಮ್ಮಗ ಪ್ರೇಮಕಾಂತ್ ಹೇಳಿದ್ದಾರೆ.

”ನಾನು ಅಜ್ಜಿಯನ್ನು ರಕ್ಷಿಸಲು ಪ್ರಯತ್ನಿಸಿದ ಸಂದರ್ಭ ಗುಂಡಿನ ದಾಳಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ” ಎಂದು ಪ್ರೇಮಕಾಂತ್‌ ತಿಳಿಸಿದ್ದಾರೆ.

ದೇಶಾದ್ಯಂತ ಅಲ್ಲೋಲ ಕಲ್ಲೋಲ ಉಂಟು ಮಾಡಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ , ಅತ್ಯಾಚಾರ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ ಎಂದು ಮಣಿಪುರ ಸಿಎಂ ಬಿರೇನ್ ಸಿಂಗ್ ಹೇಳಿದ್ದರು. ಇದೀಗ ದಿನಕ್ಕೊಂಡು ಇಂತಹ ಕ್ರೌರ್ಯಗಳು ಬೆಳಕಿಗೆ ಬರುತ್ತಿವೆ.

ಇದನ್ನೂ ಓದಿ: ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...