Homeಮುಖಪುಟಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

- Advertisement -
- Advertisement -

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ ಮಾಡಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕೆಲಸದ ಹೊರೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ ಎಂಬುವುದಾಗಿ ಡೆತ್ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಗಿರ್ ಸೋಮನಾಥ್ ಜಿಲ್ಲೆಯ ಕೋಡಿನಾರ್‌ನ ಛರಾ ಕನ್ಯಾ ಪ್ರಾಥಮಿಕ ಶಾಲೆಯ ಶಿಕ್ಷಕ ಅರವಿಂದ್ ಅವರ ಶವ ಬೆಳಗಿನ ಜಾವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೂ ಮುನ್ನ ಅರವಿಂದ್ ತನ್ನ ಪತ್ನಿಗೆ ಬರೆದಿರುವ ಪತ್ರದಲ್ಲಿ ಅಥವಾ ಡೆತ್‌ನೋಟ್‌ನಲ್ಲಿ, ” ನಾನು ಈ ಎಸ್‌ಐಆರ್ ಕೆಲಸವನ್ನು ಇನ್ನು ಮುಂದೆ ಮಾಡಲು ಸಾಧ್ಯವಿಲ್ಲ. ಕಳೆದ ಕೆಲವು ದಿನಗಳಿಂದ ನಿರಂತರ ಕೆಲಸದಿಂದ ನಾನು ದಣಿದಿದ್ದೇನೆ ಮತ್ತು ಮಾನಸಿಕವಾಗಿ ಒತ್ತಡಕ್ಕೊಳಗಾಗಿದ್ದೇನೆ. ನಿನ್ನ ಮತ್ತು ಮಗನ ಬಗ್ಗೆ ಕಾಳಜಿವಹಿಸು. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುತ್ತೇನೆ. ಆದರೆ, ಈಗ ಈ ಅಂತಿಮ ಹೆಜ್ಜೆ ಇಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ” ಎಂದು ತಿಳಿಸಿದ್ದಾರೆ. ತನ್ನ ಕೆಲಸದ ದಾಖಲೆಗಳನ್ನು ಶಾಲೆಗೆ ಹಸ್ತಾಂತರಿಸಲು ಸೂಚಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅರವಿಂದ್ ಅವರ ಡೆತ್ ನೋಟ್‌ ಬಿಎಲ್‌ಒಗಳ ಗ್ರೂಪ್‌ಗಳಲ್ಲಿ ಹರಿದಾಡಿದ್ದು, ಅರವಿಂದ್ ಅವರ ಸಾವಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಷಯ ಚರ್ಚೆಯಾಗುತ್ತಿದೆ. ಹಲವರು ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಳಿಸಲು ಬಿಎಲ್‌ಒಗಳು ಮಧ್ಯರಾತ್ರಿಯವರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಎಸ್‌ಐಆರ್‌ ಕೆಲಸದಿಂದ ಈಗಾಗಲೇ ಒತ್ತಡಕ್ಕೆ ಒಳಗಾಗಿರುವ, ತಾಂತ್ರಿಕ ಸಮಸ್ಯೆಗಳಿಂದ ಬೇಸತ್ತು ಹೋಗಿರುವ, ಗಡುವಿನೊಳಗೆ ಕೆಲಸ ಮುಗಿಸುವ ಅನಿವಾರ್ಯತೆಯಲ್ಲಿರುವ ಬಿಎಲ್‌ಒಗಳು ಅರವಿಂದ್ ಅವರ ಸಾವಿನಿಂದ ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಅರವಿಂದ್ ಅವರ ಸಾವು ಒಂದು ಪ್ರತ್ಯೇಕ ದುರಂತವಲ್ಲ, ಬದಲಾಗಿ ವ್ಯವಸ್ಥಿತ ಆಡಳಿತಾತ್ಮಕ ಒತ್ತಡದ ನೇರ ಪರಿಣಾಮ ಎಂದು ಶಿಕ್ಷಕರ ಸಂಘಗಳು ಆರೋಪಿಸಿವೆ ಎಂದು ವರದಿ ಹೇಳಿದೆ.

“ಅರವಿಂದ್ ಅವರ ಸಾವಿನಿಂದ ಇಡೀ ಶಿಕ್ಷಕ ಸಮುದಾಯ ಆಘಾತಕ್ಕೊಳಗಾಗಿದೆ. ಎಸ್‌ಐಆರ್‌ನ ಕೆಲಸದ ಹೊರೆಯಿಂದಾಗಿ, ಅರವಿಂದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೋಡಿನಾರ್‌ನ ಅತ್ಯುತ್ತಮ ಶಿಕ್ಷಕರಲ್ಲಿ ಒಬ್ಬರು” ಎಂದು ಗಿರ್‌ ಸೋಮನಾಥ್ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬರದ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಅಖಿಲ ಭಾರತ ಶೈಕ್ಷಣಿಕ ಮಹಾಸಂಘ ಮೃತ ಶಿಕ್ಷಕನ ಕುಟುಂಬದ ಜವಾಬ್ದಾರಿಯನ್ನು ಸರ್ಕಾರ ಹೊತ್ತುಕೊಳ್ಳಬೇಕು. ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದೆ.

“ಗಿರ್ ಸೋಮನಾಥ್‌ನ ಶಿಕ್ಷಕನ ಡೆತ್‌ನೋಟ್‌ ನೋಡುವಾಗ ಅವರ ಮೇಲೆ ಹೇರಲಾದ್ದ ತೀವ್ರ ಒತ್ತಡ ಸ್ಪಷ್ಟವಾಗಿ ಗೊತ್ತಾಗುತ್ತದೆ. ನಮ್ಮ ಸಂಘವು ಈ ವ್ಯವಸ್ಥೆಯನ್ನು ಬಲವಾಗಿ ವಿರೋಧಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ಶಿಕ್ಷಕನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಅದರ ಸಂಘದ ರಾಜ್ಯಾಧ್ಯಕ್ಷ ಮಿತೇಶ್ ಭಟ್ ಆಗ್ರಹಿಸಿದ್ದಾರೆ.

ಎಸ್‌ಐಆರ್ ಕೆಲಸದ ಅಸಹನೀಯ ಹೊರೆಯ ಬಗ್ಗೆ ಒಕ್ಕೂಟವು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ ಎಂದು ಭಟ್ ಹೇಳಿದ್ದಾರೆ.

ಅರವಿಂದ್ ಅವರ ಸಾವಿನ ಬಗ್ಗೆ ಆಕ್ರೋಶ ಹೆಚ್ಚಾದಂತೆ ಬಿಎಲ್‌ಒಗಳು ಮತ್ತು ಎಸ್‌ಐಆರ್ ಪ್ರಗತಿಯನ್ನು ನೋಡಿಕೊಳ್ಳುವ ಗಿರ್ ಸೋಮನಾಥ್ ಕಲೆಕ್ಟರ್ ಎನ್.ವಿ. ಉಪಾಧ್ಯಾಯ ಪ್ರತಿಕ್ರಿಯೆ ನೀಡಿದ್ದು, “ಅರವಿಂದ್ ಅವರು ಯಾವುದೇ ಕೆಲಸದ ಒತ್ತಡದ ಬಗ್ಗೆ ನನಗೆ ವರದಿ ಮಾಡಿರಲಿಲ್ಲ. ಅವರ ಸಾವಿನ ಸುದ್ದಿ ತಿಳಿದು ಆಘಾತವಾಗಿದೆ” ಎಂದು ಹೇಳಿದ್ದಾರೆ.

ಎಸ್‌ಐಆರ್‌ನಲ್ಲಿ ಅರವಿಂದ್ ಅವರ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ ಕಲೆಕ್ಟರ್, “ಅವರು ಅಸಾಧಾರಣರು. ಒಂದೇ ಒಂದು ದೂರು ಅವರ ವಿರುದ್ದ ಬಂದಿರಲಿಲ್ಲ. ಅವರು ಈಗಾಗಲೇ ತಮ್ಮ ಕೆಲಸದ ಶೇಕಡ 43ರಷ್ಟು ಪೂರ್ಣಗೊಳಿಸಿದ್ದರು. ಒತ್ತಡಕ್ಕೊಳಗಾಗಿರುವುದಾಗಿ ಅವರು ನನಗೆ ಎಂದಿಗೂ ತಿಳಿಸಿರಲಿಲ್ಲ. ಪೊಲೀಸ್ ತನಿಖಾ ವರದಿಯ ನಂತರವೇ ಪ್ರಕರಣದ ಸತ್ಯಾಸತ್ಯತೆ ತಿಳಿಯಬೇಕಿದೆ ಎಂದು ಕಲೆಕ್ಟರ್ ತಿಳಿಸಿದ್ದಾರೆ.

ಎಸ್‌ಐಆರ್ ಒತ್ತಡದಿಂದ ಈ ತಿಂಗಳಲ್ಲಿ 10 ಮಂದಿಯ ಆತ್ಮಹತ್ಯೆ ಸೇರಿದಂತೆ 20ಕ್ಕೂ ಹೆಚ್ಚು ಜನರು ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...