ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

ಗುಜರಾತ್‌ನ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿ ನಾಲ್ಕು ದಶಕಗಳಷ್ಟು ಹಳೆಯದಾದ ‘ಗಂಭೀರ ಸೇತುವೆ’ಯ ಒಂದು ಭಾಗ ಬುಧವಾರ (ಜು.9) ಬೆಳಿಗ್ಗೆ ಕುಸಿದಿದ್ದು, ಹಲವು ವಾಹನಗಳು ನದಿಗೆ ಬಿದ್ದಿವೆ. ಘಟನೆಯಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಠಾತ್ ಸೇತುವೆ ಕುಸಿದ ಪರಿಣಾಮ ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಗ್ರಾಮಸ್ಥರು ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ನಂತರ, ಪೊಲೀಸರು … Continue reading ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು