Homeಮುಖಪುಟಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಮತ್ತೊಂದು ಪ್ರಕರಣ : ಜೈಲಿನಿಂದಲೇ ಬಂಧಿಸಿದ ಇಡಿ

ಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಮತ್ತೊಂದು ಪ್ರಕರಣ : ಜೈಲಿನಿಂದಲೇ ಬಂಧಿಸಿದ ಇಡಿ

- Advertisement -
- Advertisement -

ವಂಚನೆ ಮತ್ತು ದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ (ಫೆ.25) ಪತ್ರಕರ್ತ ಮಹೇಶ್ ಲಾಂಗಾ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌) ಬಂಧಿಸಿದೆ.

ಲಾಂಗಾ ಅವರನ್ನು ಅಹಮದಾಬಾದ್‌ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು ಫೆಬ್ರವರಿ 28 ರವರೆಗೆ ಇಡಿ ಕಸ್ಟಡಿಗೆ ನೀಡಿದೆ.

ಮತ್ತೊಂದು ಪ್ರಕರಣದಲ್ಲಿ ಮಹೇಶ್ ಲಾಂಗಾ ಅವರು ಸಾಬರಮತಿ ಕೇಂದ್ರ ಕಾರಾಗೃದಲ್ಲಿದ್ದರು. ಅಲ್ಲಿಂದಲೇ ಇಡಿ ಬಂಧಿಸಿದೆ.

ದಿ ಹಿಂದೂ ಪತ್ರಿಕೆಯ ಗುಜರಾತ್ ಆವೃತ್ತಿಯ ಸಹಾಯಕ ಸಂಪಾದಕ ಮಹೇಶ್ ಲಾಂಗಾ ಅವರ ವಿರುದ್ದ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಗುಜರಾತ್ ಪೊಲೀಸರು ದಾಖಲಿಸಿರುವ ಐದು ಎಫ್‌ಐಆರ್‌ಗಳು ಮತ್ತು ಇಡಿ ದಾಖಲಿಸಿದ ಎರಡು ಪ್ರಕರಣಗಳು ಸೇರಿವೆ.

ಅಕ್ಟೋಬರ್‌ನಲ್ಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಆಧರಿಸಿ ಮಹೇಶ್ ಲಾಂಗಾ ವಿರುದ್ದ ಪ್ರಕರಣ ದಾಖಲಿಸಿಕೊಂಡ ಇಡಿ, ಅವರನ್ನು ಬಂಧಿಸಿದೆ. ಉದ್ಯಮಿಯೊಬ್ಬರಿಗೆ 28.68 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ ಈ ಪ್ರಕರಣ ದಾಖಲಿಸಲಾಗಿದೆ.

ವಂಚನೆ ಮತ್ತು ನಷ್ಟಕ್ಕೆ ಕಾರಣವಾದ ಆರೋಪದ ಮೇಲೆ ಅಹಮದಾಬಾದ್‌ನ ಸ್ಯಾಟಲೈಟ್ ಪೊಲೀಸ್ ಠಾಣೆಯಲ್ಲಿ ಲಾಂಗಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿರುವುದು ತನಿಖೆಯ ಸಮಯದಲ್ಲಿ ತಿಳಿದುಬಂದಿದೆ ಎಂದು ಇಡಿ ತಿಳಿಸಿದೆ. ಈ ಪ್ರಕರಣವು ಭೂ ದಲ್ಲಾಳಿಯಿಂದ 40 ಲಕ್ಷ ರೂ. ಸುಲಿಗೆ ಮಾಡಿದ ಆರೋಪವನ್ನು ಆಧರಿಸಿದೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆರೋಪದ ಮೇಲೆ ಮೇಲೆ ಲಾಂಗಾ ಅವರನ್ನು ಅಕ್ಟೋಬರ್ 7, 2024ರಂದು ಅಹಮದಾಬಾದ್ ಕ್ರೈಂ ಬ್ರ್ಯಾಂಚ್ ಮೊದಲು ಬಂಧಿಸಿತ್ತು.
ಧ್ರುವಿ ಎಂಟರ್‌ಪ್ರೈಸ್ ಎಂಬ ಕಂಪನಿಯು ಇನ್‌ಪುಟ್ ತೆರಿಗೆ ಕ್ರೆಡಿಟ್ ಪಡೆಯಲು ಒಂದೇ ಶಾಶ್ವತ ಖಾತೆ ಸಂಖ್ಯೆಯಿಂದ ಆರು ಸಂಸ್ಥೆಗಳನ್ನು ಸೃಷ್ಟಿಸಿದೆ ಎಂದು ಪೊಲೀಸರು ಆರೋಪಿಸಿದ್ದರು. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಕಂಪನಿಗಳಲ್ಲಿ ಡಿಎ ಎಂಟರ್‌ಪ್ರೈಸ್ ಕೂಡ ಒಂದು.

ಅಕ್ಟೋಬರ್ 22ರಂದು, ಗುಜರಾತ್ ಕಡಲ ಮಂಡಳಿಗೆ ಸಂಬಂಧಿಸಿದ ಗೌಪ್ಯ ಸರ್ಕಾರಿ ದಾಖಲೆಗಳನ್ನು ಹೊಂದಿದ್ದ ಆರೋಪದ ಮೇಲೆ ಲಾಂಗಾ ವಿರುದ್ಧ ಪೊಲೀಸರು ಎರಡನೇ ಪ್ರಕರಣವನ್ನು ದಾಖಲಿಸಿದ್ದರು. ಮೊದಲ ಪ್ರಕರಣದಲ್ಲಿ ಬಂಧನದ ಸಮಯದಲ್ಲಿ ಅವರಿಂದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಗೌಪ್ಯ ಸರ್ಕಾರಿ ದಾಖಲೆಗಳನ್ನು ಹೊಂದಿದ್ದಕ್ಕಾಗಿ ಲಾಂಗಾ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯುವಂತೆ ಪತ್ರಿಕಾ ಸಂಸ್ಥೆಗಳು ಪೊಲೀಸರನ್ನು ಒತ್ತಾಯಿಸಿವೆ.

ಅಕ್ಟೋಬರ್ 29ರಂದು, ಅಹಮದಾಬಾದ್‌ನಲ್ಲಿ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಆರೋಪದ ಮೇಲೆ ಲಾಂಗಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಅದೇ ದಿನ, ಇಡಿಯ ಅಹಮದಾಬಾದ್ ವಲಯ ಕಚೇರಿಯು ಲಾಂಗಾ ಮತ್ತು ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿತ್ತು.

ಬಿಜೆಪಿ-ಡಿಎಂಕೆ ಸರ್ಕಾರಗಳ ವಿರುದ್ಧ ‘ಗೆಟ್‌ಔಟ್‌’ ಅಭಿಯಾನ ಆರಂಭಿಸಿದ ನಟ ವಿಜಯ್ ನೇತೃತ್ವದ ಟಿವಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...