Homeಮುಖಪುಟಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ (ಜು.10) ಪಕ್ಷದ ಇತರ 12 ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡಿದ್ದಾರೆ ಎಂದು ವರದಿಯಾಗಿದೆ.

Indianexpress.com ವರದಿಯ ಪ್ರಕಾರ, ಹೊಸದಾಗಿ ಫ್ರೀಝ್ ಮಾಡಲಾದ 12 ಖಾತೆಗಳು ದೇಶದ ಪ್ರಮುಖ ಸಾರ್ವಜನಿಕ ವಲಯದ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಹರಡಿಕೊಂಡಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಟಿಎಂಸಿ ಪಕ್ಷಕ್ಕೆ ಸೇರಿದ ಒಟ್ಟು 15 ಬ್ಯಾಂಕ್ ಖಾತೆಗಳನ್ನು ಇದುವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಇವುಗಳಲ್ಲಿ ಸುಮಾರು 1,000 ಕೋಟಿ ರೂಪಾಯಿಗಳಷ್ಟು ಠೇವಣಿ ಇರುವುದು ಪತ್ತೆಯಾಗಿದೆ. ಪೊಲೀಸರು ಈ ಖಾತೆಗಳ ಮಾಲೀಕರ ವಿವರಗಳನ್ನು ಹಾಗೂ ಇವುಗಳಲ್ಲಿ ನಡೆದಿರುವ ಆರ್ಥಿಕ ವಹಿವಾಟುಗಳ ಸಂಪೂರ್ಣ ದಾಖಲೆಗಳನ್ನು ಒದಗಿಸುವಂತೆ ಕೇಳಿದ್ದಾರೆ.

ಕಲ್ಕತ್ತಾ ಹೈಕೋರ್ಟ್ ಟಿಎಂಸಿ ಪಕ್ಷಕ್ಕೆ ತನ್ನ ಮೂರು ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ಭಾಗಶಃ ಬಳಸಲು ಅನುಮತಿ ನೀಡಿದ ಮತ್ತು ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಸುಬ್ರತಾ ತಾಲೂಕ್ದಾರ್ ಅವರನ್ನು ಸೆಪ್ಟೆಂಬರ್ 30 ರವರೆಗೆ ವಿಶೇಷ ಅಧಿಕಾರಿಯನ್ನಾಗಿ ನೇಮಿಸಿದ ಮರುದಿನವೇ ಈ ಬೆಳವಣಿಗೆ ನಡೆದಿದೆ.

ಪೊಲೀಸರು ತಮ್ಮ ಪಕ್ಷದ ಮೂರು ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡಿದ ನಂತರ, ಮಮತಾ ಬ್ಯಾನರ್ಜಿ ನೇತೃತ್ವದ ಬಣವು ತಕ್ಷಣದ ಮಧ್ಯಪ್ರವೇಶವನ್ನು ಕೋರಿ ಹೈಕೋರ್ಟ್ ಮೆಟ್ಟಿಲೇರಿತ್ತು.

ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ, ಟಿಎಂಸಿ ಪಕ್ಷದ ಬಂಡಾಯ ಶಾಸಕರು ಮತ್ತು ನಾಯಕರ ಗುಂಪು ಪಕ್ಷದೊಳಗೆ “ಗಂಭೀರ ವಿವಾದ” ಇರುವುದನ್ನು ಉಲ್ಲೇಖಿಸಿ, ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡುವಂತೆ ಬ್ಯಾಂಕ್‌ಗಳಿಗೆ ಕೇಳಿಕೊಂಡಿದ್ದರು.

ಬಂಡಾಯಗಾರರು ಹಣದ ಮೂಲದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಧಾನಗರ ಪೊಲೀಸರ ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡಿದ್ದರು. ಇದಾಗಿ ಒಂದು ದಿನದ ನಂತರ, ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಜಾರಿ ನಿರ್ದೇಶನಾಲಯವು (ಇಡಿ) ಸಹ ಪಕ್ಷದ ಮೂರು ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದರಿಂದ, ಹೈಕೋರ್ಟ್ ಅನುಮತಿ ನೀಡಿದರೂ ಟಿಎಂಸಿ ಪಕ್ಷಕ್ಕೆ 440 ಕೋಟಿ ರೂಪಾಯಿ ಹಣವನ್ನು ಇದುವರೆಗೆ ಬಳಸಲು ಸಾಧ್ಯವಾಗಿಲ್ಲ.

ಈ ಸಂಬಂಧ ಹಿರಿಯ ನ್ಯಾಯವಾದಿ ಕಿಶೋರ್ ದತ್ತಾ ಅವರು ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ರಾವ್ ಅವರ ಪೀಠದ ಮುಂದೆ ತುರ್ತು ವಿಚಾರಣೆಗೆ ಕೋರಿದ್ದು, ಹೈಕೋರ್ಟ್‌ನ ಇನ್ನೊಬ್ಬರು ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರು ಈಗಾಲೇ ನೀಡಿರುವ ಆದೇಶವು ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ್ದಾಗಿದ್ದರೆ, ಈ ಹೊಸ ಅರ್ಜಿಯು ಪಿಎಂಎಲ್‌ಎ ಅಡಿಯಲ್ಲಿ ಇಡಿ ಕೈಗೊಂಡಿರುವ ಕ್ರಮವನ್ನು ಪ್ರಶ್ನಿಸುತ್ತದೆ ಎಂದು ತಿಳಿಸಿದ್ದಾರೆ. ಈ ಅರ್ಜಿಯ ಮುಂದಿನ ವಿಚಾರಣೆಯು ಸೋಮವಾರ ನಡೆಯಲಿದೆ.

ಖಾಸಗಿ ವಿಮಾನಯಾನ ಸಂಸ್ಥೆಯೊಂದರ ಒಳಗೊಳ್ಳುವಿಕೆ ಹಾಗೂ ಎಂಬ್ರೇಯರ್ ಬಿಸಿನೆಸ್ ಜೆಟ್ ಮತ್ತು ಅಗಸ್ಟಾ ಹೆಲಿಕಾಪ್ಟರ್ ಖರೀದಿಗೆ ಸಂಬಂಧಿಸಿದ ಸುಮಾರು 160 ಕೋಟಿ ರೂಪಾಯಿಗಳ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಟಿಎಂಸಿ ಮೂರು ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...