ಬಹುರಾಷ್ಟ್ರೀಯ ಕಂಪೆನಿಗಳು, ಸಿದ್ದರಾಮಯ್ಯ

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇಂದು ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ಬಿಜೆಪಿ
ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಪಕ್ಷವೇ ಭ್ರಷ್ಟರ ಪಕ್ಷವಾಗಿರುವುದರಿಂದ ಶಶಿಕಲಾ ಜೊಲ್ಲೆಯವರು ಲಂಚ ಪಡೆದದ್ದನ್ನು ಬಿಜೆಪಿ ನಾಯಕರು ಸಾಧನೆಯಾಗಿ ಪರಿಗಣಿಸಿದಂತಿದೆ. ಇಲ್ಲದಿದ್ದರೆ ದಾಖಲೆ ಸಾಮೇತ ಸಿಕ್ಕಿಬಿದ್ದಿರುವ ಭ್ರಷ್ಟ ಮಂತ್ರಿಯನ್ನು ಇನ್ನೂ ಸಚಿವ ಸಂಪುಟದಲ್ಲಿ ಇಟ್ಟುಕೊಂಡು ಸುಮ್ಮನೆ ಕೂರುತ್ತಿದ್ದರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾಧೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರಿಗೆ ಅವರಿಗೆ ಬಿ.ಎಸ್ ಯಡಿಯೂರಪ್ಪನವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ. ಸ್ವತಃ ಬಿಜೆಪಿ ಶಾಸಕರೇ ಯಡಿಯೂರಪ್ಪನವರ ಕುಟುಂಬ ಸರ್ಕಾರದ ಖಜಾನೆಯನ್ನು ಲೂಟಿ ಮಾಡುತ್ತಿದೆ ಅಂದಿದ್ದಾರೆ, ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ರಾಜೀನಾಮೆ ನೀಡುವಂತೆ ಯಾರು ಒತ್ತಡ ತಂದಿಲ್ಲ: ಬಿ.ಎಸ್ ಯಡಿಯೂರಪ್ಪ

LEAVE A REPLY

Please enter your comment!
Please enter your name here