Homeಮುಖಪುಟಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

ಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ.

- Advertisement -
- Advertisement -

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿದೆ. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿದ ಬಳಿಕ ಗೃಹಬಂಧನ ಮತ್ತೆ ವಿಳಂಬವಾಯಿತು ಎಂದು ಪಿಟಿಐ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಎತ್ತಿರುವ ಆಕ್ಷೇಪವು ನವ್ಲಾಖಾ ಅವರನ್ನು ಜೈಲಿನಿಂದ ಸ್ಥಳಾಂತರಿಸಲು ಉಂಟಾಗಿರುವ ಎರಡನೇ ಅಡಚಣೆಯಾಗಿದೆ.

ಗೃಹಬಂಧನಕ್ಕೆ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಧಿಸಿದ ಷರತ್ತುಗಳ ಪೈಕಿ, ನವೆಂಬರ್ 14 ರೊಳಗೆ ಪರಿಹಾರದ ಪುರಾವೆಯಾಗಿ 2 ಲಕ್ಷ ರೂಪಾಯಿಗಳ ಶ್ಯೂರಿಟಿಯನ್ನು ಸಲ್ಲಿಸಬೇಕಿತ್ತು. ನವ್ಲಾಖಾ ಅವರು ದಾಖಲೆಗಳನ್ನು ನೀಡಲು ಸಾಧ್ಯವಾಗದ ಕಾರಣ ಆರಂಭದಲ್ಲಿ ಅವರನ್ನು ಜೈಲಿನಿಂದ ಸ್ಥಳಾಂತರಿಸಲಾಗಲಿಲ್ಲ.

ಮಂಗಳವಾರ ನವ್ಲಾಖಾ ಅವರ ವಕೀಲರು, “ಸಾಲ್ವೆನ್ಸಿ ಪ್ರಮಾಣಪತ್ರವನ್ನು ಪಡೆಯಲು ಕನಿಷ್ಠ ಆರು ವಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಮನವಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಇದಕ್ಕೆ ಒಪ್ಪಿಗೆ ನೀಡಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಲಿಲ್ಲ.

ಮನೆಯ ಪ್ರತಿ ಪ್ರವೇಶ ಮತ್ತು ನಿರ್ಗಮನ ಬಿಂದುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇರಬೇಕಾಗಿದೆ. ನವಲಾಖಾ ಅವರ ಗೃಹಬಂಧನಕ್ಕೆ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಷರತ್ತುಗಳಲ್ಲಿ ಇದೂ ಒಂದಾಗಿದೆ.

ಕಟ್ಟಡದ ನೆಲಮಹಡಿಯು ಸಾರ್ವಜನಿಕ ಗ್ರಂಥಾಲಯವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದ ಆರೋಪಿಗಳ ಮೇಲೆ ನಿಗಾ ಇಡುವುದು ತುಂಬಾ ಕಷ್ಟಕರವಾಗುತ್ತದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ವಾದಿಸಿದೆ. ಕಟ್ಟಡದ ಮಾಲೀಕರನ್ನು “ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ” ಎಂದು ಗುರುತಿಸಿರುವ ಬಗ್ಗೆ ಇದು ಆಕ್ಷೇಪಣೆಗಳನ್ನು ಎತ್ತಿದೆ.

ನವ್ಲಾಖಾ ಪರವಾಗಿ ಹಾಜರಾದ ವಕೀಲ ಯುಗ್ ಮೋಹಿತ್ ಚೌಧರಿ, ಏಜೆನ್ಸಿ ಬಯಸಿದಲ್ಲೆಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲು ಸಿದ್ಧ ಎಂದು ನ್ಯಾಯಾಲಯಕ್ಕೆ ತಿಳಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಟ್ಟಡದ ಮೊದಲ ಮಹಡಿಗೆ ಮಾತ್ರ ನವ್ಲಾಖಾ ಅವರನ್ನು ನಿರ್ಬಂಧಿಸಲಾಗುವುದು ಮತ್ತು ನೆಲ ಅಂತಸ್ತಿನ ಗ್ರಂಥಾಲಯಕ್ಕೆ ಪ್ರವೇಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಟ್ಟಡದ ಮಾಲೀಕತ್ವದ ಬಗ್ಗೆ ಆಕ್ಷೇಪಣೆಯ ಕುರಿತು ಚೌಧರಿ, “ನೀವು ನಿವೇಶನದ ಮಾಲೀಕತ್ವದ ಬಗ್ಗೆ ಹೇಳಲು ಸಾಧ್ಯವಿಲ್ಲ. ಸಿಪಿಐ(ಎಂ) ಒಂದು ನೋಂದಾಯಿತ ರಾಜಕೀಯ ಪಕ್ಷವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಆದಾಗ್ಯೂ ಎನ್‌ಐಎ ಈಗ ಸಲ್ಲಿಸಿರುವ ವರದಿಯ ಕುರಿತು ಸುಪ್ರೀಂ ಕೋರ್ಟ್‌ನ ಆದೇಶಕ್ಕಾಗಿ ಕಾಯದೆ ಈ ಹಂತದಲ್ಲಿ ನವ್ಲಾಖಾ ಅವರನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ವಿಶೇಷ ಎನ್‌ಐಎ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಾಗಿದ್ದು ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠದ ಮುಂದೆ ಇಂದು (ಶುಕ್ರವಾರ) ವಿಚಾರಣೆ ಬರಲಿದೆ.

ಇದರ ನಡುವೆ ಹಿರಿಯ ನಟಿ ಸುಹಾಸಿನಿ ಮುಲೆ ಅವರು ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ನವಲಖಾ ಅವರಿಗೆ ಜಾಮೀನುದಾರರಾಗಿ ಹಾಜರಾಗಿದ್ದರು. ಸುಮಾರು 30 ವರ್ಷಗಳಿಂದ ನವ್ಲಾಖಾ ಅವರು ಪರಿಚಯವಿದ್ದಾರೆ ಎಂದು ಸುಹಾಸಿನಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...