Homeಮುಖಪುಟಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿಯ ಸಿಂಘು ಗಡಿಯಲ್ಲಿ ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 40 ವರ್ಷದ ರೈತರೊಬ್ಬರು ಶನಿವಾರ ವಿಷ ಸೇವಿಸಿ ಪ್ರಾಣತ್ಯಾಗ ಮಾಡಿದ್ದಾರೆ.

ಅಮರಿಂದರ್ ಸಿಂಗ್ ಎಂದು ಗುರುತಿಸಲಾಗಿರುವ ರೈತ, ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಆಲಿಸುತ್ತಿಲ್ಲ. ನನ್ನ ಸಾವು ರೈತ ಆಂದೋಲನಕ್ಕೆ ಯಶಸ್ಸನ್ನು ತರುತ್ತದೆ ಎನ್ನುವ ಕಾರಣಕ್ಕೆ ಪ್ರಾಣತ್ಯಾಗ ಮಾಡುವುದಾಗಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

“ವಿಷ ಸೇವಿಸಿದ ನಂತರ ಅಮರಿಂದರ್ ಸಿಂಗ್ ಅವರನ್ನು ಸೋನಿಪತ್‌ನ ಫಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಮರಿಂದರ್ ಸಿಂಗ್ ಅವರ ಕುಟುಂಬವನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಶವವನ್ನು ಪ್ರತಿಭಟನಾ ಸ್ಥಳದಲ್ಲಿನ ಇತರ ರೈತರಿಗೆ ಹಸ್ತಾಂತರಿಸಲಾಗುತ್ತದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದು, ಟ್ವಿಟರ್ ಟ್ರೆಂಡಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೈತರ ಕರೆಗೆ ಓಗೊಟ್ಟು ಲಕ್ಷಾಂತರ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮಂದೀಪ್ ಜಸ್ಸಿ ಎಂಬುವವರು ಟ್ವೀಟ್ ಮಾಡಿ, “ಮೋದೀಜಿ, ಇದು ವಿನಯಪೂರ್ವಕ ವಿನಂತಿ. ದಯವಿಟ್ಟು ರೈತರ ಸಮಸ್ಯೆಯನ್ನು ಬಗೆಹರಿಸಿ” ಎಂದು ಬರೆದುಕೊಂಡಿದ್ದಾರೆ.

ಮೊಹಮ್ಮದ್ ಎಂಬುವವರು ಟ್ವೀಟ್ ಮಾಡಿ, “ರೈತರು ಬೀದಿಯಲ್ಲಿ ಸಾಯುತ್ತಿದ್ದರೆ, ಸಂವಿಧಾನ ಸಂಸತ್ತಿನಲ್ಲಿ ಸಾಯುತ್ತಿದೆ. ದೇಶ ಎಚ್ಚರಗೊಳ್ಳಬೇಕಿದೆ” ಎಂದು ಬರೆದುಕೊಂಡಿದ್ದಾರೆ.

ಸಿಮ್ರನ್ ಸಂಧು ಎಂಬುವವರು, “ಭಾರತ ಮತ್ತೊಮ್ಮೊ ಒಂದಾಗಬೇಕಿದೆ. ಆದರೆ ಈ ಬಾರಿ ಬ್ರಿಟಿಷರ ವಿರುದ್ಧವಲ್ಲ. ಬದಲಿಗೆ ಮೋದಿ ಸರ್ಕಾರದ ವಿರುದ್ಧ” ಎಂದು ಟ್ವೀಟ್ ಮಾಡಿದ್ದಾರೆ.

ಹೀಗೆ ಲಕ್ಷಕ್ಕೂ ಹೆಚ್ಚು ಜನ ಮೋದಿ ಸರ್ಕಾರದ ವಿರುದ್ಧ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಮೋದಿ -ಶಾ ರೇ ಜವಾಬ್ದಾರರು: ಮತ್ತೊಬ್ಬ ರೈತನ ಆತ್ಮಹತ್ಯೆ ಯತ್ನ

ಈ ತಿಂಗಳು ವರದಿಯಾದ ಎರಡನೇ ರೈತ ಸಾವು ಇದು. ಕಳೆದ ವಾರ ದೆಹಲಿ-ಗಾಜಿಯಾಬಾದ್ ಗಡಿ ಬಳಿ ಪ್ರತಿಭಟನಾ ಸ್ಥಳದಲ್ಲಿ 75 ವರ್ಷದ ರೈತ ಪ್ರಾಣತ್ಯಾಗ ಮಾಡಿದ್ದರು.

ರೈತ ಹೋರಾಟವನ್ನು ಬೆಂಬಲಿಸಿ ಡಿಸಂಬರ್‌ನಲ್ಲಿ ಸಿಖ್ ಧರ್ಮಗುರು ಬಾಬಾ ರಾಮ್ ಸಿಂಗ್ ಜಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಮ್ಮ ಆತ್ಮಹತ್ಯಾ ಬರಹದಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದುಕೊಂಡಿದ್ದರು.

ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಚಳಿಗಾಳಿ, ಅನಾರೋಗ್ಯ, ಆತ್ಮಹತ್ಯೆ ಸೇರಿದಂತೆ ಹಲವು ಕಾರಣಗಳಿಂದ 60 ಹೆಚ್ಚು ರೈತರು ಸಾವನಪ್ಪಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಡಿಸೆಂಬರ್ 20ರ ಭಾನುವಾರ ಮಡಿದವರ ನೆನಪಿನಲ್ಲಿ ಶ್ರದ್ಧಾಂಜಲಿ ದಿವಸ್ ಆಚರಿಸಲಾಗಿತ್ತು.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...