Homeಕರ್ನಾಟಕಸ್ಲಂ ನಿವಾಸಿಗಳ ಮೇಲೆ ಹಲ್ಲೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್

ಸ್ಲಂ ನಿವಾಸಿಗಳ ಮೇಲೆ ಹಲ್ಲೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್

- Advertisement -
- Advertisement -

ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಶಾಸಕ ಮುನಿರತ್ನ ಮತ್ತು ಅವರ ಸಹಚರರು ನಡೆಸಿದ ದೌರ್ಜನ್ಯಕ್ಕೆ ಈ ಎಫ್ಐಆರ್ ದಾಖಲಾಗಿದೆ. “ನಮ್ಮ ಮನೆ ನೆಲಸಮ ಮಾಡಿ, ಶಾಸಕ ಮುನಿರತ್ನ ಮತ್ತು ಅವರ ಸಹಚರರು ದರ್ಪ ಮೆರೆದಿದ್ದಾರೆ” ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪೀಣ್ಯದಲ್ಲಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಬಡ ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಬುಲ್ಡೋಜರ್ ಮೂಲಕ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಮುನಿರತ್ನ ಸಹಚರರಾದ ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ , ಕಿಟ್ಟಿ , ಗಂಗಾ ಎಂಬುವವರು ಬಂದು ಮನೆ ನೆಲಸಮ ಮಾಡಿಸಿದ್ದಾರೆ. ಮನೆಯಲ್ಲಿ ಕೂಡಿಟಿದ್ದ ಸಾವಿರಾರು ರೂಪಾಯಿ ಹಣದ ಜೊತೆಗೆ 30 ಗ್ರಾಂ ಚಿನ್ನಾಭರಣ ಮಣ್ಣು ಪಾಲಾಗಿದೆಯೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯಶವಂತಪುರ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....