Homeಮುಖಪುಟಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

"ಆಕೆಯ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಳು. ಆಕೆಯ ಸ್ಥಿತಿ ಗಂಭಿರವಾಗಿದೆ, ಹಾಗಾಗಿ ಲಕ್ನೋಗೆ ಕರೆದೊಯ್ಯುವಂತೆ ಸ್ಥಳೀಯ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದರು. ಆದರೆ ಬಲರಾಂಪರ ಪಟ್ಟಣದ ಬಳಿ ಹೋಗುತ್ತಿರುವಾಗ ನನ್ನ ಮಗಳು ಸತ್ತುಹೋದಳು" ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ.

- Advertisement -
- Advertisement -

ಹತ್ರಾಸ್‌ನಲ್ಲಿ ನಡೆದ ಘೋರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ನೆನಪು ಮಾಸುವ ಮುನ್ನ, ಉತ್ತರಪ್ರದೇಶದಲ್ಲಿ ಮಂಗಳವಾರ ಸಂಜೆ ಮತ್ತೊಬ್ಬ ದಲಿತ ಯುವತಿಗೆ ಮತ್ತುಬರಿಸಿ ಅತ್ಯಾಚಾರ ಮಾಡಿದ ನಂತರ ಹಲ್ಲೆ ಮಾಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಆಕೆ ಸಾವನ್ನಪ್ಪಿರುವ ದುರ್ಘಟನೆ ಜರುಗಿದೆ.

ಹತ್ರಾಸ್‌ನಿಂದ 500 ಕಿ.ಮೀ ದೂರದಲ್ಲಿರುವ ಬಲರಾಂಪುರದ ಯುವತಿ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದು, ಆಕೆಯನ್ನು ಮಂಗಳವಾರ ಸಂಜೆ, ಲಕ್ನೋ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾಳೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಪೊಲೀಸರು, ಮಹಿಳೆಯ ದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ ಎಂದು ಹೇಳಿದ್ದು, ವೈದ್ಯಕೀಯ ಪರೀಕ್ಷೆಯಿಂದ ಅತ್ಯಾಚಾರ ದೃಢಪಟ್ಟಿದೆಯೇ ಎಂಬುದರ ಬಗ್ಗೆ ಅಧಿಕೃತವಾಗಿ ಮಾತನಾಡಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಕಾಲೇಜಿಗೆ ದಾಖಲಾಗಲು ಹೋಗುವಾಗ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ತಾಯಿ ಆರೋಪಿಸಿದ್ದಾರೆ. ಯುವತಿ ಸರಿಯಾದ ಸಮಯಕ್ಕೆ ಮನೆಗೆ ಬರಲಿಲ್ಲವಾದ್ದರಿಂದ ಆಕೆಯ ಕುಟುಂಬವು ಹುಡುಕಾಡಲು ಪ್ರಾರಂಭಿಸಿದೆ. ಆದರೆ, ಸಂಜೆ 7 ಗಂಟೆ ಸುಮಾರಿಗೆ ಆಕೆ ಹಿಂತಿರುಗಿದ್ದು, ಹಲ್ಲೆಕೋರರು ಆಕೆಯನ್ನು ಇ-ರಿಕ್ಷಾದಲ್ಲಿ ಕೂರಿಸಿ ಮನೆಗೆ ಕಳುಹಿಸಿದ್ದಾರೆ ಎಂದು ಕುಟುಂಬ ಹೇಳಿದೆ.

“ಅಪಹರಿಸಿದವರು ಅವಳಿಗೆ ಯಾವುದೋ ಚುಚ್ಚುಮದ್ದು ನೀಡಿದ್ದರಿಂದಾಗಿ ಅಕೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ನಂತರ ಅವಳ ಮೇಲೆ ಅತ್ಯಾಚಾರ ಮಾಡಿ, ಆಕೆಯ ಕಾಲು ಮತ್ತು ಬೆನ್ನನ್ನು ಮುರಿದಿದ್ದಾರೆ. ನಂತರ ಆಕೆಯನ್ನು ನಮ್ಮ ಮನೆಯ ಮುಂದೆ ಎಸೆದಿದ್ದರು. ನನ್ನ ಮಗಳಿಗೆ ಮಾತನಾಡಲೂ, ನಿಲ್ಲಲೂ ಸಾಧ್ಯವಾಗಲಿಲ್ಲ. ನನ್ನನ್ನು ಉಳಿಸಿ. ಸಾಯಲು ಇಷ್ಟವಿಲ್ಲ ಎಂದು ಅಳುತ್ತಿದ್ದಳು” ಎಂದು ಸಂತ್ರಸ್ತೆಯ ಯುವತಿಯ ತಾಯಿ ರೋದಿಸುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

“ಆಕೆಯ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಳು. ಆಕೆಯ ಸ್ಥಿತಿ ಗಂಭಿರವಾಗಿದೆ, ಹಾಗಾಗಿ ಲಕ್ನೋಗೆ ಕರೆದೊಯ್ಯುವಂತೆ ಸ್ಥಳೀಯ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದರು. ಆದರೆ ಬಲರಾಂಪರ ಪಟ್ಟಣದ ಬಳಿ ಹೋಗುತ್ತಿರುವಾಗ ನನ್ನ ಮಗಳು ಸತ್ತುಹೋದಳು” ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ.

ಆದರೆ, ಶವಪರೀಕ್ಷೆಯಲ್ಲಿ ಆಕೆಯ ಕೈ ಕಾಲುಗಳು ಮುರಿದಿವೆ ಎಂದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. “ಈ ಪ್ರಕರಣದಲ್ಲಿ, ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ಕೈ ಕಾಲುಗಳನ್ನು ಮುರಿದ ಆರೋಪಗಳು ನಿಜವಲ್ಲ. ಮರಣೋತ್ತರ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಿಲ್ಲ” ಎಂದು ಬಲರಾಂಪುರ್ ಪೊಲೀಸರು ಕಳೆದ ರಾತ್ರಿ ಟ್ವೀಟ್ ಮಾಡಿದ್ದಾರೆ.

“ಅವಳ ಕೈಗಳಲ್ಲಿ ಗ್ಲೂಕೋಸ್ ಸಿರಿಂಜ್ ಅಂಟಿಕೊಂಡಿತ್ತು. ಚುಚ್ಚುಮದ್ದಿನ ಗುರುತುಗಳಿದ್ದವು. ಅವಳ ಸ್ಥತಿ ತುಂಬಾ ಗಂಭಿರವಾಗಿತ್ತು. ಕುಟುಂಬವು ಇಬ್ಬರು ವ್ಯಕ್ತಿಗಳನ್ನು ಹೆಸರಿಸಿದ್ದರು. ಪೊಲೀಸರು ಶೀಘ್ರ ಕ್ರಮ ಕೈಗೊಂಡು ಅವರನ್ನು ಬಂಧಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿ ದೇವ್ ರಂಜನ್ ವರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಹತ್ರಾಸ್ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಮಂಗಳವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅಂದು ಮಧ್ಯರಾತ್ರಿ ಪೊಲೀಸರು ಆಕೆಯ ಕುಟುಂಬದವರಿಗೂ ತಿಳಿಸದೇ ಶವಸಂಸ್ಕಾರ ಮಾಡಿದ್ದರು. ಇದರ ವಿರುದ್ಧ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದರ ನಡುವೆ ಇಂತಹದ್ದೇ ಮತ್ತೊಂದು ಘಟನೆ ಉತ್ತರಪ್ರದೇಶದಲ್ಲೇ ವರದಿಯಾಗಿರುವುದು ಆಘಾತವನ್ನುಂಟುಮಾಡಿದೆ.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಇಂತಹದ್ದೇ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ...

0
ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು...