Homeಮುಖಪುಟಮಣಿಪುರದಲ್ಲಿ ಮತ್ತೋರ್ವ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ; ತಿಂಗಳಲ್ಲಿ ಮೂರನೇ ಪ್ರಕರಣ

ಮಣಿಪುರದಲ್ಲಿ ಮತ್ತೋರ್ವ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ; ತಿಂಗಳಲ್ಲಿ ಮೂರನೇ ಪ್ರಕರಣ

- Advertisement -
- Advertisement -

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಎಸಗಿ ಕೊಂದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಬಾಲಕಿ ಶುಕ್ರವಾರ ಥಾನ್ಲೋನ್ ಉಪವಿಭಾಗದ ಕಾಡುಗಳಲ್ಲಿ ಕಟ್ಟಿಗೆ ಸಂಗ್ರಹಿಸಲು ಹೋಗಿದ್ದಳು. ತುಂಬಾ ಹೊತ್ತಿನವರೆಗೂ ಆಕೆ ಮನೆಗೆ ಹಿಂತಿರುಗದೇ ಇದ್ದಾಗ, ಆಕೆಯ ತಂದೆ ಬಾಲಕಿಯನ್ನು ಹುಡುಕಲು ಹೋದಾಗ ಹರಿದ ಬಟ್ಟೆಗಳು ಮತ್ತು ಗಾಯದ ಗುರುತುಗಳೊಂದಿಗೆ ಆಕೆಯ ದೇಹ ಸಿಕ್ಕಿದೆ.

ತನಿಖೆಯ ನಂತರ, ಆರೋಪಿಯನ್ನು ಜಿಲ್ಲೆಯ ಖೋಕೆನ್ ಗ್ರಾಮದಿಂದ ಬಂಧಿಸಲಾಯಿತು, ಆತ ಫೆರ್ಜಾಲ್ ಜಿಲ್ಲೆಯ ಮೂಲದವರು ಎಂದು ಗುರುತಿಸಲಾಗಿದೆ.

ಈ ಘಟನೆಯು ಆಕ್ರೋಶವನ್ನು ಹುಟ್ಟುಹಾಕಿದೆ, ಜೋಮಿ ತಾಯಂದಿರ ಸಂಘವು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. “ಅತ್ಯಾಚಾರದ ಪುನರಾವರ್ತನೆಯು ಗೌರವದ ಕೊರತೆ ಮತ್ತು ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ವಿಫಲತೆಗೆ ಸಾಕ್ಷಿಯಾಗಿದೆ” ಎಂದು ಸಂಘವು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ವಾರಗಳಲ್ಲಿ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವರದಿಯಾದ ಮೂರನೇ ಘಟನೆ ಇದು.

ಈ ತಿಂಗಳ ಆರಂಭದಲ್ಲಿ, 10 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಾರ್ಚ್‌ನಲ್ಲಿ, ಒಂಬತ್ತು ವರ್ಷದ ಬಾಲಕಿಯೊಬ್ಬಳು ಪರಿಹಾರ ಶಿಬಿರದ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಈ ಪ್ರದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ ಸುರಕ್ಷತೆಯನ್ನು ಹೆಚ್ಚಿಸಲು ತ್ವರಿತ ಮತ್ತು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಿವಾಸಿಗಳು ಹಾಗೂ ನಾಗರಿಕ ಹಕ್ಕುಗಳ ಗುಂಪುಗಳು ಅಧಿಕಾರಿಗಳನ್ನು ಒತ್ತಾಯಿಸಿವೆ.

ಮಧ್ಯಪ್ರದೇಶ| ದೇವಾಲಯದ ಬಾಗಿಲು ತೆರೆಯದ ಅರ್ಚಕನನ್ನು ಥಳಿಸಿದ ಬಿಜೆಪಿ ಎಂಎಲ್‌ಎ ಮಗನ ಸಹಚರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...