Homeಎಕಾನಮಿಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿರುವ ರಾಹುಲ್‌ ಗಾಂಧಿ ಭಾರತದ ಆರ್ಥಿಕತೆಯ ಕುಸಿತವನ್ನು ಉಲ್ಲೇಖಿಸಿ, “ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ ಇದು” ಎಂದು ವ್ಯಂಗ್ಯವಾಡಿದ್ದಾರೆ.

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ -7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿತ್ತು. ಇದನ್ನು ಉಲ್ಲೇಖಿಸಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇಂದು (ಜ.9) ಟ್ವೀಟ್‌ ಮಾಡಿದ್ದಾರೆ.

“ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ- ಜಿಡಿಪಿ- -7.7%, ತಲಾದಾಯ- -5.4%, ನಿರುದ್ಯೋಗ ದರ- 9.1%. ಅತಿಯಾದ ವಿಕಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5 ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಇದನ್ನೂ ಓದಿ: ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಮುಚ್ಚಿಟ್ಟ ಆರೋಪ: BJP ಸಂಸದ ಪಿ.ಸಿ. ಮೋಹನ್ ವಿರುದ್ಧ ವಿಚಾರಣೆ

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಹಲವರು ಟೀಕಿಸಿದ್ದಾರೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರೈತ ವಿರೋಧಿ ಕಾಯ್ದೆಗಳು & ಕರ್ನಾಟಕಕ್ಕಾಗಿರುವ ಅನ್ಯಾಯ: ದಕ್ಷಿಣ ಭಾರತದ ರೈತ ಪ್ರತಿನಿಧಿಗಳ ಸಮಾಲೋಚನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...