ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್
PC: Magzter

ದೆಹಲಿ ಸಿಖ್ ಗುರುದ್ವಾರ ಮ್ಯಾನೇಜ್ಮೆಂಟ್ ಕಮಿಟಿ (DSGMC) ಬಾಲಿವುಡ್ ನಟಿ ಕಂಗನಾ ರಣಾವತ್, ತಮ್ಮ ಅವಹೇಳನಕಾರಿ ಟ್ವಿಟ್‌ಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಲೀಗಲ್ ನೋಟಿಸ್ ಕಳುಹಿಸಿದೆ. ನಟಿ ಕಂಗನಾ, ಹಿರಿಯ ವೃದ್ಧೆಯನ್ನು, ದೆಹಲಿ ಚಲೋ ರೈತರ ಪ್ರತಿಭನೆಯಲ್ಲಿ ಭಾಗಿಯಾಗಿರುವ ಬಿಲ್ಕೀಸ್ ಬಾನು ಎಂದು ತಪ್ಪಾಗಿ ಗುರುತಿಸಿದ್ದರು. ಜೊತೆಗೆ 100 ರೂಪಾಯಿಗೆ ಸಿಗುತ್ತಾರೆ ಎಂದು ವ್ಯಂಗ್ಯವಾಡಿದ್ದರು.

ನಟಿ ಕಂಗನಾ ಟ್ವೀಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾದ ನಂತರ ವೃದ್ಧೆಯ ಮೇಲಿನ ಟ್ವೀಟ್  ಅಳಿಸಿದ್ದಾರೆ. ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿರುವ DSGMC ಲೀಗಲ್ ನೋಟಿಸ್ ಕಳುಹಿಸಿ, ಕ್ಷಮೆ ಕೇಳುವಂತೆ ಆಗ್ರಹಿಸಿದೆ.

“ಹಿರಿಯ ತಾಯಿಯನ್ನು 100 ರೂ.ಗಳಿಗೆ ಲಭ್ಯವಿರುವ ಮಹಿಳೆ ಎಂದು ಕರೆದು ಅವಹೇಳನಕಾರಿ ಟ್ವೀಟ್ ಮಾಡಿರುವ ಕಂಗನಾರಿಗೆ ನಾವು ಲೀಗಲ್ ನೋಟಿಸ್ ಕಳುಹಿಸಿದ್ದೇವೆ. ಅವರ ಟ್ವೀಟ್‌ಗಳು ರೈತರ ಪ್ರತಿಭಟನೆಯನ್ನು ರಾಷ್ಟ್ರ ವಿರೋಧಿ ಎಂದು ಬಿಂಬಿಸುತ್ತವೆ. ರೈತರ ಪ್ರತಿಭಟನೆಯ ಬಗ್ಗೆ ಅವರು ಮಾಡಿದ ಅವಹೇಳನಕಾರಿದ ಟೀಕೆಗಳಿಗೆ ಬೇಷರತ್ತಾಗಿ ಕ್ಷಮೆಯಾಚಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಡಿಎಸ್‌ಜಿಎಂಸಿಯ ಅಧ್ಯಕ್ಷ ಮಂಜಿಂದರ್ ಸಿಂಗ್ ಸಿರ್ಸಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಕಳೆದ ನವೆಂಬರ್‌ 27 ರಂದು ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್. ಅವರು 100 ರೂಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ್ದರು.

ನಟಿ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ಪಂಜಾಬ್‌ನ ವಕೀಲರೊಬ್ಬರು ಕೂಡ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

“ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೊದಲು ರಣಾವತ್ ಅವರು ದೃಢಿಕರಿಸಿದ ಮಾಹಿತಿಯನ್ನು ಹೊಂದಿರಬೇಕು ಮತ್ತು ಅವರ ಟ್ವೀಟ್‌ಗಳ ಬಗ್ಗೆ ಕ್ಷಮೆಯಾಚಿಸಬೇಕು” ಎಂದು ವಕೀಲ ಹರ್ಕಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ನಟಿ ಕಂಗನಾ ಹೇಳಿಕೆಗೆ, ದಿಲ್ಜಿತ್ ದೋಸಾಂಜ್, ಪ್ರಿನ್ಸ್ ನರುಲ್ಲಾ, ಸರ್ಗುನ್ ಮೆಹ್ತಾ, ಹಿಮಾಂಶಿ ಖುರಾನಾ ಮತ್ತು ಇತರ ಹಲವಾರು ನಟರು ತಮ್ಮ ಟ್ವಿಟರ್‌ ಖಾತೆಯಲ್ಲಿ ನಟಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here