Homeಮುಖಪುಟಹರಿಯಾಣದಲ್ಲಿ ಮತ್ತೊಂದು ಮಹಾಪಂಚಾಯತ್ - 50,000 ಜನ ಸೇರುವ ನಿರೀಕ್ಷೆ!

ಹರಿಯಾಣದಲ್ಲಿ ಮತ್ತೊಂದು ಮಹಾಪಂಚಾಯತ್ – 50,000 ಜನ ಸೇರುವ ನಿರೀಕ್ಷೆ!

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 2 ತಿಂಗಳಿನಿಂದ ನಡೆಸುತ್ತಿರುವ ಹೋರಾಟ 71 ನೇ ದಿನಕ್ಕೆ ಕಾಲಿಟ್ಟಿದೆ. ಈ ನಿಟ್ಟಿನಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳುತ್ತಿದೆ. ಇದರ ಭಾಗವಾಗಿ ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಮತ್ತೊಂದು ಮಹಾಪಂಚಾಯತ್ ಸಭೆಯನ್ನು ಆಯೋಜಿಸಲಾಗಿದ್ದು, ಇಲ್ಲಿ ಸುಮಾರು 50 ಸಾವಿರ ರೈತ ಬೆಂಬಲಿಗರು ಸೇರುವ ನಿರೀಕ್ಷೆಯಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ.

ರೈತ ಹೋರಾಟವನ್ನು ಬೆಂಬಲಿಸಿ ಇದುವರೆಗೂ ಬಾಗ್‌ಪಥ್, ಮಥುರಾ, ಮುಜಪ್ಪರ್ ನಗರ, ರಾಜಸ್ಥಾನ್ ಸೇರಿದಂತೆ ಹಲವು ಕಡೆ ಮಹಾಪಂಚಾಯತ್‌ಗಳು ನಡೆದಿವೆ. ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ದೇಶದಾದ್ಯಂತ ಇಂತಹ ಪಂಚಾಯತ್‌ಗಳನ್ನು ಸಂಘಟಿಸಲಾಗುವುದು ಎಂದು ರಾಕೇಶ್ ಟಿಕಾಯತ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷಗಳ ಆಗ್ರಹಕ್ಕೆ ಮಣಿದ ಕೇಂದ್ರ – ರೈತ ಹೋರಾಟದ ಬಗ್ಗೆ ಸಂಸತ್ತಿನಲ್ಲಿ 15 ಗಂಟೆ…

ಸರ್ಕಾರವು ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದೆಯಾದರೂ ಎಲ್ಲವೂ ವಿಫಲಗೊಂಡಿದೆ. ಇದೀಗ ರೈತರು ಶನಿವಾರದಂದು ದೇಶಾದ್ಯಂತ ‘ಸಂಚಾರ ಸ್ಥಗಿತ ಚಳವಳಿ’ (ಪ್ರಮುಖ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳ ತಡೆ) ನಡೆಸುವಂತೆ ಕರೆ ನೀಡಿದ್ದಾರೆ.

‘ಸಂಚಾರ ಸ್ಥಗಿತ ಚಳವಳಿ’ ಫೆಬ್ರವರಿ 6ರ ಶನಿವಾರ ಮಧ್ಯಾಹ್ನ 12 ರಿಂದ 3 ಗಂಟೆಯ ತನಕ ಅಂದರೆ ಒಟ್ಟು ಮೂರು ಗಂಟೆಗಳ ಕಾಲ ನಡೆಯಲಿದ್ದು, ಶಾಂತಿಯುವ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರು ಮನವಿ ಮಾಡಿದ್ದಾರೆ.

100ಕ್ಕೂ ಹೆಚ್ಚು ರೈತರು ಕಾಣೆಯಾಗಿರುವುದು, ರೈತರು ಮತ್ತು ಪತ್ರಕರ್ತರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು, ರೈತರು ಪ್ರತಿಭಟನೆ ನಡೆಸುತ್ತಿರುವ ಗಡಿಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಹೋರಾಟಗಾರರಿಗೆ ಕಿರುಕುಳ, ಪ್ರತಿಭಟನಾ ಸ್ಥಳಗಳ ವಿದ್ಯುತ್ ಮತ್ತು ನೀರು ಸರಬರಾಜನ್ನು ನಿಲ್ಲಿಸಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಲು ರೈತರು ಈ ‘ಸಂಚಾರ ಸ್ಥಗಿತ ಚಳವಳಿ’ ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಕೇಂದ್ರ ಸರ್ಕಾರ ರೈತರನ್ನು ಬೆದರಿಸಲು ಮಾಡುತ್ತಿರುವ ಎಲ್ಲಾ ಪ್ರಯತ್ನಗಳ ಹೊರತಾಗಿಯು ರೈತರು ಹೋರಾಟದಿಂದ ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ರೈತ ಮುಖಂಡ ರಾಕೇಶ್ ಟಿಕಾಯತ್‌, “ಕೇಂದ್ರ ಸರ್ಕಾರಕ್ಕೆ ನಾವು ಅಕ್ಟೋಬರ್‌ವರೆಗೆ ಸಮಯ ನೀಡಿದ್ದು, ನಮ್ಮ ಮಾತನ್ನು ಆಲಿಸದಿದ್ದರೆ ದೇಶವ್ಯಾಪಿ 40 ಲಕ್ಷ ಟ್ರಾಕ್ಟರ್‌ಗಳ ರ‍್ಯಾಲಿ ನಡೆಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಜನವರಿ 26 ರ ಗಣರಾಜ್ಯೋತ್ಸವಂದು ರೈತರು ನಡೆಸಿದ ಟ್ರಾಕ್ಟರ್ ಪರೇಡ್ ‌ನಂತರ ರೈತ ಹೋರಾಟದ ಸ್ಥಳಗಳಲ್ಲಿ ಅಹಿತಕರ ಘಟನೆ ನಡೆದಿತ್ತು. ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಇದನ್ನು ಬಿಜೆಪಿಯೆ ಮಾಡಿಸಿದೆ ಎಂದು ವರದಿ ಮಾಡಿದೆ. ಅದಾಗಿಯು, ಕೇಂದ್ರ ಸರ್ಕಾರ ದೆಹಲಿಯ ಹೋರಾಟದ ಸ್ಥಳಗಳಲ್ಲಿ ಇಂಟರ್ನೆಟ್ ಸೇವೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಿತ್ತು. ಇದು ಜಗತ್ತಿನಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...