2023ರ ಚುನಾವಣೆ ಹಿನ್ನೆಲೆಯಲ್ಲಿ ಹಲವು ಮಂದಿ ಜೆಡಿಎಸ್, ಬಿಜೆಪಿ ತೊರೆಯುತ್ತಿದ್ದು, ಆ ಪಟ್ಟಿಗೆ ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಸಹ ಸೇರಿಕೊಂಡಿದ್ದಾರೆ. ಇಂದು ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರನ್ನು ಭೇಟಿಮಾಡಿದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿಯವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎ.ಟಿ ರಾಮಸ್ವಾಮಿಯವರು ಜೆಡಿಎಸ್ ತ್ಯಜಿಸುತ್ತಾರೆ ಎಂದು ಹಲವು ತಿಂಗಳುಗಳಿಂದ ಚರ್ಚೆಯಾಗುತ್ತಿತ್ತು. ಇಂದಿನ ರಾಜೀನಾಮೆ ಮೂಲಕ ಅದು ನಿಜವಾಗಿದೆ. ಮುಂಬರುವ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣರವರು ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಕೂಡ ಕಾಂಗ್ರೆಸ್ ಸೇರಲಿದ್ದಾರೆ.
ಬಹಳಷ್ಟು ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ನಿನ್ನೆಯಷ್ಟೇ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರಿದ್ದಾರೆ. ಅರಸೀಕೆರೆಯ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಮಾಜಿ ಶಾಸಕ ವೈ.ಎಸ್.ವಿ ದತ್ತಾರವರು ಕಾಂಗ್ರೆಸ್ ಸೇರಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಹಾಗೂ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರಿದ್ದಾರೆ. ಇನ್ನು ಆಯನೂರು ಮಂಜುನಾಥ್ ಮತ್ತು ಆರ್.ಶಂಕರ್‌ರವರು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣ ರಾಜೀನಾಮೆ: ಕಾಂಗ್ರೆಸ್ ಸೇರುವ ಸಾಧ್ಯತೆ


