Homeಕರ್ನಾಟಕಮತ್ತೊಂದು ಮತೀಯ ಗೂಂಡಾಗಿರಿ: ಧರ್ಮಸ್ಥಳದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ

ಮತ್ತೊಂದು ಮತೀಯ ಗೂಂಡಾಗಿರಿ: ಧರ್ಮಸ್ಥಳದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ

- Advertisement -
- Advertisement -

ಧರ್ಮಸ್ಥಳ ಬಸ್‌ ನಿಲ್ದಾಣಕ್ಕೆ ಯುವತಿಯನ್ನು ಡ್ರಾಪ್‌ ಮಾಡಲು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ಚಾಲಕನ ಮೇಲೆ ಗುಂಪೊಂದು ಮತೀಯ ಗೂಂಡಾಗಿರಿ ನಡೆಸಿ ಹಲ್ಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಉಜಿರೆ ನಿವಾಸಿ, ಆಟೋ ಚಾಲಕ ಮುಹಮ್ಮದ್‌ ಆಶಿಕ್‌ ಯುವತಿಯೊಬ್ಬರನ್ನು ಧರ್ಮಸ್ಥಳಕ್ಕೆ ಬಿಟ್ಟು ಬರಲು ಬಾಡಿಗೆಗೆ ಹೋಗಿದ್ದರು. ಯುವತಿಯನ್ನು ಇಳಿಸಿ, ಹಿಂದಿರುಗಿ ಬರುವಾಗ ಗುಂಪೊಂದು ಆತನನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿದೆ.

ಧರ್ಮಸ್ಥಳದ ಬಸ್‌ ನಿಲ್ದಾಣದ ಹೊರಭಾಗದಲ್ಲಿ ಆಟೋವನ್ನು ತಡೆ ನಾಲ್ವರು ದುಷ್ಕರ್ಮಿಗಳ ಗುಂಪು, ಆಶಿಕ್ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಶಿಕ್‌ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆರಂಭಗೊಂಡ ಮತೀಯ ಗೂಂಡಾಗಿರಿ ಪ್ರಕರಗಳು ಈಗಲೂ ವರದಿಯಾಗುತ್ತಿವೆ. ನೂತನ ಕಾಂಗ್ರೆಸ್ ಸರ್ಕಾರ ಈ ರೀತಿಯ ಅನೈತಿಕ ಪೊಲೀಸ್‌ಗಿರಿ ತಡೆಯಲು ನೂತನ ಸರ್ಕಾರ ಆಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿದೆಯಾದರೂ ಪ್ರಕರಣಗಳು ಮಾತ್ರ ನಿಂತಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಸೋಮೇಶ್ವರ ಬೀಚ್‌ಗೆ ವಿಹಾರಕ್ಕೆಂದು ಬಂದಿದ್ದು ಕೇರಳ ಮೂಲದ  ವಿದ್ಯಾರ್ಥಿಗಳ ಮೇಲೆ ಮತೀಯ ಗೂಂಡಾಗಿರಿ ನಡೆಸಿದ ಪ್ರಕರಣ ಜೂನ್ 2 ರಂದು ವರದಿಯಾಗಿತ್ತು. ಮಂಗಳೂರಿನಲ್ಲಿ ‘ಮುಸ್ಲಿಮ್’ ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಸಹ ನಡೆದಿತ್ತು. ಜುಲೈ 29ರಂದು ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಐವರು ಕಾರ್ಯಕರ್ತರನ್ನು ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ; ಉಡುಪಿ ವಿಡಿಯೋ ಪ್ರಕರಣ: ಹಾಸ್ಟೆಲ್ ಮಕ್ಕಳ ಹುಚ್ಚಾಟವೂ, ಹಿಡನ್ ಹಿಂದುತ್ವದ ಹಿಕಮತ್ತೂ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...