Homeಮುಖಪುಟಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

- Advertisement -
- Advertisement -

ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ.

ವಿಜಯಪುರದ ಹಿಂದು ಯುವತಿ ಹಾಗೂ ಹಾವೇರಿಯ ಮುಸ್ಲಿಂ ಯುವಕ ಇಬ್ಬರು ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಯುವಕ-ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಯುವಕ ಯುವತಿಯರಿಬ್ಬರು ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯಗೊಂಡಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಏಕಾಏಕಿಯಾಗಿ ಹೋಟೆಲ್ ಮೇಲೆ ದಾಳಿ ನಡೆಸುವ ಅಧಿಕಾರವನ್ನು ಬಜರಂಗದಳದವರಿಗೆ ಕೊಟ್ಟಿದ್ಯಾರು? ಪರಸ್ಪರ ಸಮ್ಮತಿ ಮೇರೆಗೆ ಇಬ್ಬರು ಸ್ನೇಹಿತರು ಒಟ್ಟಿಗೆ ಇದ್ದಾಗಲೂ ಅದನ್ನು ತಪ್ಪು ಎಂದು ಹೇಳಿ ಪೊಲೀಸರಿಗೆ ಒಪ್ಪಿಸಲು ಮತೀಯ ಗೂಂಡಾಗಳಿಗೆ ಅಧಿಕಾರವಿದೆಯೇ? ಪೊಲೀಸರು ಬಜರಂಗದಳದವನ್ನು ಬಂಧಿಸದೇ ಆ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದೇಕೆ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿವೆ. ಅಲ್ಲದೇ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು, ಮಂಡ್ಯದಲ್ಲಿ, ವಿಜಯಪುರದಲ್ಲಿ ನಡೆದಿದ್ದ ಮತೀಯ ಗೂಂಡಾಗಿರಿ ಘಟನೆಗಳು ಮಾಸುವ ಮುಂಚೆಯೇ ಮಂಗಳೂರಿನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಈ ಹಿಂದೆಯೂ ಮಂಗಳೂರಿನಲ್ಲಿ ಹಲವು ಇದೇ ರೀತಿಯ ಘಟನೆಗಳು ನಡೆದಿದ್ದವು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೆ ಇತ್ತೀಚೆಗೆ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಮಾತನಾಡಿದ್ದರು. ಅದಕ್ಕೆ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು. ಅಕ್ಟೋಬರ್ 21 ರಂದು ಬೆಂಗಳೂರಿನಲ್ಲಿ ಪ್ರೀತಿ ಬೇಕು, ದ್ವೇಷ ಸಾಕು ಹೆಸರಿನಲ್ಲಿ ಮತೀಯ ಗೂಂಡಾಗಿರಿ ಮತ್ತು ಅದನ್ನು ಸಮರ್ಥಿಸುವ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದೆ. ಸಿಎಂ ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಆಲ್‌ ಇಂಡಿಯಾ ಲಾಯರ್ಸ್ ‌ ಅಸೋಸಿಯೇಷನ್‌ ಫಾರ್‌ ಜಸ್ಟೀಸ್ಸ್ ಸಂಘಟನೆಯು ನೋಟೀಸ್ ಜಾರಿ ಮಾಡಿದೆ.


ಇದನ್ನೂ ಓದಿ: ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. Election ಹತ್ತಿರ ಬಂದಾಗ ನಾನು ಗೌರಿ ನೀನು ಗೌರಿ ಅಂತಾ ಹೊಸ ಹೊಸ website ಗಳು ಹುಟ್ಟಿಕೊಳ್ಳುತ್ತವೆ ಏನೇನೇ ನ್ಯೂಸ್ ಗಳನ್ನು ಬಿತ್ತಲು ಸುರು ಮಾಡುತ್ತವೆ.

    ನೈತಿಕ ಪೋಲಿಸ್ ಗರಿ ತಪ್ಪು, ಇದನ್ನು ಒಪ್ಪಿಕೊಳ್ಳುತ್ತೇವೆ. ಆದರೆ
    ಇಲ್ಲಿ ಹಿಂದೂ ಯುವತಿ – ಮುಸ್ಲಿಂ ಯುವಕ ವಿಷಯ ಬಂದಾಗ ಎದ್ದೇಳುವ ವೆಬ್ ಸೈಟ್ ಗಳು , ಮುಸ್ಲಿಂ ಯುವತಿ- ಹಿಂದೂ ಯುವಕರ ವಿಷಯ ಬಂದ ಸಂದರ್ಭದಲ್ಲಿ ಯಾಕೆ ಮಲಗಿದ್ದವು. ಇಂತಹ ವಿಷಯ ಬಂದಾಗ ನಡೆದ ಧಾಳಿಗಳ ಸಂದರ್ಭದಲ್ಲಿ ಯಾಕೆ ಮಾಧ್ಯಮ ಗಳು ಜಾಣ ಮೌನ ತೋರಿಸುತ್ತಿವೆ. ಅಂದರೆ ಮಾಧ್ಯಮ ವೆಬ್ ಸೈಟ್ ಗಳು ಏನನ್ನು ಪ್ರಚೋದಿಸುತ್ತಾ ಇವೆ ?

    ಹಾಗೂ ಇಲ್ಲಿ ಪೋಲೀಸರ ರಿಪೋರ್ಟ್ ಬರದೆ ಯಾವುದೇ ಘಟನೆಯನ್ನು ನೈತಿಕ ಹಾಗೂ ಅನೈತಿಕ ಎಂದು ಘೋಷಿಸಲು ಮಾಧ್ಯಮ ಗಳಿಗೆ ಅಧಿಕಾರ ಕೊಟ್ಟವರು ಯಾರು?

  2. ಮಾಧ್ಯಮಗಳು ನಮ್ಮನ್ನು ದಾರಿ ತಪ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...