Homeಮುಖಪುಟತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ - ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

ತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ – ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

"ಕರುಣಾನಿಧಿ ಸಾವಿನ ನಂತರ ಪಕ್ಷದ ಚುಕ್ಕಾಣಿ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಈ ವೇಳೆ ಎಂ.ಕೆ. ಸ್ಟಾಲಿನ್​ ಇಡೀ ಪಕ್ಷವನ್ನು ತನ್ನ ಹತೋಟಿಗೆ ತೆಗೆದುಕೊಂಡರು. ಅಲ್ಲದೆ, ಅಳಗಿರಿ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿದ್ದರು"

- Advertisement -
- Advertisement -

ತಮಿಳುನಾಡು ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪ್ರಕ್ರಿಯೆಗಳು ಗರಿಗೆದರುತ್ತಿದೆ. ಈ ಹಿಂದೆ ನಟ ರಜನಿಕಾಂತ್​ ತಾವು ಹೊಸ ಪಕ್ಷ ಸ್ಥಾಪಿಸುವುದಾಗಿ ಮಾಹಿತಿ ನೀಡಿದ್ದರು. ಇದರ ಬೆನ್ನಿಗೆ ಡಿಎಂಕೆ ಪಕ್ಷದ ಹಿರಿಯ ಮಾಜಿ ಮುಖಂಡ ಮತ್ತು ಮಾಜಿ ಸಿಎಂ ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ. ಅಳಗಿರಿ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಇಂದು ಅಧಿಕೃತ ಹೇಳಿಕೆ ನೀಡಿರುವ ಅಳಗಿರಿ, “ಜನತೆ, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬಯಸಿದರೆ ನಾನು ಖಂಡಿತವಾಗಿ ಹೊಸ ಪಕ್ಷ ಸ್ಥಾಪಿಸಿ ಮತ್ತೆ ರಾಜ್ಯ ರಾಜಕಾರಣಕ್ಕೆ ಇಳಿಯುತ್ತೇನೆ” ಎಂದು ತಿಳಿಸಿದ್ದಾರೆ.

ಎರಡನೇ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಅಳಗಿರಿ ಸುದ್ದಿಗಾರರೊಂದಿಗೆ ಮಾತನಾಡಿ, “ಜನವರಿ 3 ರಂದು ತಮ್ಮ ಬೆಂಬಲಿಗರನ್ನು ಸಂಪರ್ಕಿಸಿ ಹೊಸ ಪಕ್ಷವನ್ನು ಪ್ರಾರಂಭಿಸುವ ಬಗ್ಗೆ ನಿರ್ಧರಿಸುತ್ತೇನೆ. ನನ್ನ ಬೆಂಬಲಿಗರು ಹೊಸ ಪಕ್ಷವನ್ನು ಬಯಸಿದರೆ, ನಾನು ಖಚಿತವಾಗಿ ಹೊಸ ಪಕ್ಷ ಸ್ಥಾಪನೆ ಮಾಡುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ಡಿಎಂಕೆ ಪಕ್ಷವನ್ನು ಬೆಂಬಲಿಸುವುದಿಲ್ಲ. ಅಲ್ಲದೆ, ಪಕ್ಷಕ್ಕೆ ಮತ್ತೆ ಸೇರಲು ನನ್ನನ್ನು ಡಿಎಂಕೆ ಈವರೆಗೆ ಆಹ್ವಾನಿಸಿಯೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಇದೇ ಸಂದರ್ಭದಲ್ಲಿ ನಟ ರಜನಿಕಾಂತ್​ ಅವರನ್ನು ಭೇಟಿ ಮಾಡುವ ಕುರಿತು ಮಾತನಾಡಿದ ಅವರು, “ಪ್ರಸ್ತುತ ನಟ ರಜನಿಕಾಂತ್​ ತಮ್ಮ ‘ಅಣ್ಣಾತೆ’ ಚಿತ್ರದ ಚಿತ್ರೀಕರಣದಲಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಅವರು ಹೈದ್ರಾಬಾದ್​ನಿಂದ ಹಿಂದಿರುಗಿದ ನಂತರ ನಾನು ಅವರನ್ನು ಭೇಟಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ದಿವಂಗತ ಮಾಜಿ ಸಿಎಂ ಕರುಣಾನಿಧಿ ಬದುಕಿದ್ದವರೆಗೆ ಅವರ ಇಬ್ಬರು ಮಕ್ಕಳಾದ ಎಂ.ಕೆ. ಅಳಗಿರಿ ಮತ್ತು ಎಂ.ಕೆ. ಸ್ಟಾಲಿನ್ ಅವರಿಗೆ ಪಕ್ಷದಲ್ಲಿ ಸಮಾನ ಸ್ಥಾನಮಾನ ನೀಡಲಾಗಿತ್ತು. ಅಳಗಿರಿ ಯುಪಿಎ ಎರಡನೇ ಅವಧಿಯಲ್ಲಿ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ನೇಮಕವಾಗಿದ್ದರೆ, ರಾಜ್ಯ ರಾಜಕಾರಣದಲ್ಲಿ ಸ್ಟಾಲಿನ್​ ಪ್ರಬಲರಾಗಿದ್ದರು.

ಇದನ್ನೂ ಓದಿ: ಕಾಶ್ಮೀರ:10 ಜಿಲ್ಲೆಗಳಲ್ಲಿ 9 ಜಿಲ್ಲೆಗಳು ’ಗುಪ್ಕರ್‌’ ಪಾಲಿಗೆ-ಬಿಜೆಪಿಗೆ ಮುಖಭಂಗ

ಆದರೆ, ಕರುಣಾನಿಧಿ ಸಾವಿನ ನಂತರ ಪಕ್ಷದ ಚುಕ್ಕಾಣಿ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಈ ವೇಳೆ ಎಂ.ಕೆ. ಸ್ಟಾಲಿನ್​ ಇಡೀ ಪಕ್ಷವನ್ನು ತನ್ನ ಹತೋಟಿಗೆ ತೆಗೆದುಕೊಂಡರು. ಅಲ್ಲದೆ, ಅಳಗಿರಿ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿದ್ದರು. ಆ ನಂತರ ಅಳಗಿರಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಹೀಗಿರುವಾಗ ಅಳಗಿರಿಯವರ ಈ ಹೇಳಿಕೆ ಇಡೀ ತಮಿಳುನಾಡು ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.​ ಏಕೆಂದರೆ ಮಧುರೈ ಸೇರಿದಂತೆ ಇಡೀ ದಕ್ಷಿಣ ತಮಿಳುನಾಡಿನಲ್ಲಿ ಇವರಿಗೆ ಸಾಕಷ್ಟು ಹಿಡಿತವಿದೆ. ಹಾಗಾಗಿ ಇವರು ಹೊಸ ಪಕ್ಷ ಸ್ಥಾಪಿಸಿದರೆ ಡಿಎಂಕೆ ಮತಗಳು ಚದುರಿಹೋಗುವ ಸಾಧ್ಯತೆ ಇದೆ ಎಂಬುದು ಡಿಎಂಕೆ ಪಕ್ಷದ ಆತಂಕಕ್ಕೂ ಕಾರಣವಾಗಿದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.


ಇದನ್ನೂ ಓದಿ: ಡಿಸೆಂಬರ್ 25 ವಾಜಪೇಯಿ ಜನ್ಮದಿನ: ‘ಆಯ್ದ’ ರೈತರೊಂದಿಗೆ ಪ್ರಧಾನಿ ಮೋದಿ ಸಂವಹನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...