Homeಮುಖಪುಟಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

- Advertisement -
- Advertisement -

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸಲಿಂಗಾಸಕ್ತ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಹೆಸರನ್ನು ಎರಡನೇ ಬಾರಿಗೆ ಪುನರುಚ್ಚರಿಸಲು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, RAW “ಆಕ್ಷೇಪಣೆಗಳನ್ನು” ತಿರಸ್ಕರಿಸಿದೆ.

ಸ್ವಿಸ್ ಪ್ರಜೆ ನಿಕೋಲಸ್ ಜರ್ಮೈನ್ ಬ್ಯಾಚ್‌ಮನ್‌ನೊಂದಿಗಿನ ಕಿರ್ಪಾಲ್ ಅವರ ಜೊತೆ ಸಲಿಂಗಾಸಕ್ತಿ ಸಂಬಂಧ ಹೊಂದಿದ್ದಾರೆ. ಹಾಗಾಗಿ ಈ ಬಗ್ಗೆ RAW ಆತಂಕ ವ್ಯಕ್ತಪಡಿಸಿದೆ. ಮತ್ತೊಂದೆಡೆ ಕಾನೂನು ಸಚಿವಾಲಯವು ಕಿರ್ಪಾಲ್ ಅವರ ಸರ್ಕಾರದ ವಿರುದ್ಧದ ಹೋರಾಟ ಮತ್ತು ಸಲಿಂಗಾಸಕ್ತಿಯ ವಿಚಾರವನ್ನು ಇಟ್ಟುಕೊಂಡು ಆಕ್ಷೇಪಿಸಿದೆ. ಅಷ್ಟೇ ಅಲ್ಲದೇ ಸಲಿಂಗಿಯ ಜೊತೆಗಿರುವುದು ವಿವಾಹವಲ್ಲ ಎಂದು ಹೇಳಿದೆ. ಆದರೆ ಭಾರತದಲ್ಲಿ ಸಲಿಂಗಿಗಳು ಮದುವೆಯಾಗುವುದನ್ನು ಕಾನೂನು ಬದ್ಧಗೊಳಿಸಲಾಗಿದೆ.

“ಎರಡು ದೇಶದವರು ಮದುವೆಯಾದರೆ, ಅವರು ಭಾರತದ ವಿರುದ್ಧ ಕೆಲಸ ಮಾಡುತ್ತಾರೆ ಹಾಗಾಗಿ ಅದು ರಾಷ್ಟ್ರೀಯ ಭದ್ರತೆಯ ಧಕ್ಕೆಯಾಗುತ್ತದೆ ಎಂದು RAW ಊಹಿಸಿರುವುದು ಸರಿಯಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವವರು ವಿದೇಶಿ ಪ್ರಜೆಗಳನ್ನು ಸಂಗಾತಿಗಳಾಗಿ ಹೊಂದಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಮತ್ತು ಪ್ರಸ್ತುತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೆಸರನ್ನು ಉಲ್ಲೇಖಿಸಿದೆ. ತಾತ್ವಿಕವಾಗಿ, ಕಿರ್ಪಾಲ್ ಅವರ ಸಂಗಾತಿಯು ವಿದೇಶಿ ಪ್ರಜೆ ಎಂಬ ಕಾರಣದ ಉಮೇದುವಾರಿಕೆಗೆ ಯಾವುದೇ ಆಕ್ಷೇಪಣೆ ಇರುವಂತಿಲ್ಲ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರ ಸಲಿಂಗಾಸಕ್ತದ ಕಾರಣ ಹೇಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನವತೇಜ್ ಜೋಹರ್ ಸಾಂವಿಧಾನಿಕ ಪೀಠದ ತೀರ್ಪಿನ ಬಗ್ಗೆ ನೆನಪಿಸಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಘನತೆ ಮತ್ತು ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಲು ಅರ್ಹನಾಗಿದ್ದಾನೆ ಎಂದು ತೀರ್ಪು ನೀಡಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ನ್ಯಾಯಾಧೀಶರಾಗಲು ಅವರ ಉಮೇದುವಾರಿಕೆಯನ್ನು ತಿರಸ್ಕರಿಸುವುದು” ಸುಪ್ರೀಂ ಕೋರ್ಟ್ ಸ್ಥಾಪಿಸಿದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಕೇಂದ್ರ ಸರ್ಕಾರಕ್ಕೆ ಬುದ್ದಿ ಹೇಳಿದೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

“ಕಿರ್ಪಾಲ್ ಸಾಮರ್ಥ್ಯ, ಸಮಗ್ರತೆ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದಾರೆ. ಅವರ ನೇಮಕಾತಿಯು ದೆಹಲಿ ಹೈಕೋರ್ಟ್‌ನ ಪೀಠಕ್ಕೆ ಮೌಲ್ಯವನ್ನು ಸೇರಿಸುತ್ತದೆ ಮತ್ತು ವೈವಿಧ್ಯತೆಯನ್ನು ಒದಗಿಸುತ್ತದೆ. ಅವರ ನಡತೆ ಮತ್ತು ನಡವಳಿಕೆಯು ಮೇಲ್ಮಟ್ಟದಲ್ಲಿದೆ.” ಎಂದು ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರು ತಮ್ಮ ಲೈಂಗಿಕ ದೃಷ್ಟಿಕೋನದ ಕಾರಣಕ್ಕಾಗಿ ಸರ್ಕಾರ ತನ್ನ ನೇಮಕಾತಿಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿ ಮಾಧ್ಯಮಗಳೊಂದಿಗೆ ಇನ್ನುಮುಂದೆ ಮಾತನಾಡದಿದ್ದರೆ ಉತ್ತಮ ಎಂದು ಅದು ಹೇಳಿದೆ. ಆದಾಗ್ಯೂ, ಐದು ವರ್ಷಗಳ ಕಾಲ ತನ್ನ ಹೆಸರನ್ನು ಸ್ಥಗಿತಗೊಳಿಸುವುದರಿಂದ ಕಿರ್ಪಾಲ್‌ ಅವರಿಗೆ ಸಾಕಷ್ಟು ನೋವು ಮತ್ತು ವೇದನೆ ಅನುಭವಿಸಿದ್ದಾರೆ ಎನ್ನುವುದನ್ನು ಕೊಲಿಜಿಯಂ ಅರ್ಥಮಾಡಿಕೊಂಡಿದೆ.

ಅಕ್ಟೋಬರ್ 13, 2017 ರಂದು ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ಗೆ ಕಳುಹಿಸಿದೆ. ಅದರಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಸಂದರ್ಭಗಳಲ್ಲಿ ಪರಿಗಣಿಸಿದೆ – ಸೆಪ್ಟೆಂಬರ್ 4, 2018, ಜನವರಿ 16, 2019, ಏಪ್ರಿಲ್ 1, 2019 ಮತ್ತು ಮಾರ್ಚ್ 2 ರಂದು , 2021. ಪ್ರತಿ ಬಾರಿಯೂ, ಕಿರ್ಪಾಲ್ ಅವರ ವಿದೇಶಿ ಸಂಗಾತಿಯೊಂದಿಗಿನ ಸಂಬಂಧದಿಂದ ರಾಷ್ಟೀಯ ಭದ್ರತೆಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಊಹೆಯ ವರದಿಯನ್ನು ಕೇಂದ್ರ ಸರ್ಕಾರ ದಾಖಲಿಸಿ ವಿರೋಧಿಸಿತ್ತು ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೂಡ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿತು.

ನವೆಂಬರ್ 11, 2021 ರಂದು, ಆಗಿನ ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತು. ಅದನ್ನು ಸರ್ಕಾರವು ನವೆಂಬರ್ 25, 2022 ರಂದು ಹಿಂದಿರುಗಿಸಿತು. ಜನವರಿ 18, 2023 ರಂದು, ಸುಪ್ರೀಂ ಕೋರ್ಟ್ ಅವರ ಹೆಸರನ್ನು ಪುನರುಚ್ಚರಿಸಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಏಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ. ಆದರೆ ಸರ್ಕಾರ ಮಾತ್ರ ಇವರ ನೇಮಕಕ್ಕೆ ಪ್ರತಿಬಾರಿಯೂ ಆಕ್ಷೇಪಗಳನ್ನು ಸಲ್ಲಿಸುತ್ತಲೇ ಇದೆ. ಆಕ್ಷೇಪಗಳನ್ನು ತಿರಸ್ಕರಿಸುವುದರ ಜೊತೆಗೆ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...