HomeUncategorizedಯುಕೆಯಲ್ಲಿ ಮತ್ತೊಬ್ಬರು ಭಾರತೀಯ ಮೂಲದ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ

ಯುಕೆಯಲ್ಲಿ ಮತ್ತೊಬ್ಬರು ಭಾರತೀಯ ಮೂಲದ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ

- Advertisement -
- Advertisement -

ಯುಕೆಯ ವೆಸ್ಟ್ ಮಿಡ್‌ಲ್ಯಾಂಡ್ಸ್‌ನಲ್ಲಿ 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ಪ್ರೇರಿತ ಅತ್ಯಾಚಾರ ನಡೆದಿದೆ ಎಂದು ವರದಿಯಾಗಿದೆ.

ಯುವತಿಯ ಜನಾಂಗೀಯ ಗುರುತಿನ ಕಾರಣದಿಂದಾಗಿ ಅತ್ಯಾಚಾರ ನಡೆದಿದೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ದೃಢಪಡಿಸಿದ್ದಾಗಿ ವರದಿಗಳು ಹೇಳಿವೆ.

“ಇದು ಯುವತಿಯ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದ್ದು, ಇದಕ್ಕೆ ಕಾರಣರಾದ ವ್ಯಕ್ತಿಯನ್ನು ಬಂಧಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿ ರೋನನ್ ಟೈರರ್ ಹೇಳಿದ್ದಾಗಿ” ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ಶನಿವಾರ (ಅ.25) ವಾಲ್ಸಾಲ್‌ನ ಪಾರ್ಕ್ ಹಾಲ್ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಾಹಿತಿ ಬಂದ ಬಳಿಕ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ವೇಳೆ ಜನಾಂಗೀಯ ಪ್ರೇರಿತ ದೌರ್ಜನ್ಯ ಬೆಳಕಿಗೆ ಬಂದಿದೆ.

ವೆಸ್ಟ್ ಮಿಡ್‌ಲ್ಯಾಂಡ್ಸ್‌ ಪೊಲೀಸರು ಅಪರಾಧಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದು, ಆತನನ್ನು ಪತ್ತೆಹಚ್ಚುವಲ್ಲಿ ಸಹಕರಿಸುವಂತೆ ಸ್ಥಳೀಯ ನಿವಾಸಿಗಳಿಗೆ ಮನವಿ ಮಾಡಿದ್ದಾರೆ.

“ಅಧಿಕಾರಿಗಳ ತಂಡ ಸಾಕ್ಷ್ಯಗಳನ್ನು ಕಲೆ ಹಾಕುತ್ತಿವೆ. ಆರೋಪಿಯ ಮಾಹಿತಿ ಸಂಗ್ರಹಿಸುತ್ತಿವೆ. ಇದರಿಂದಾಗಿ ಆತನನ್ನು ಸಾಧ್ಯವಾದಷ್ಟು ಬೇಗ ವಶಕ್ಕೆ ಪಡೆಯಬಹುದು” ಎಂದು ಟೈರರ್ ಹೇಳಿದ್ದಾರೆ.

“ನಾವು ಹಲವಾರು ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದೇವೆ. ಘಟನೆ ನಡೆದ ಸಂದರ್ಭದಲ್ಲಿ ಆ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡಿರುವುದನ್ನು ಯಾರಾದರು ನೋಡಿದ್ದರೆ ಮಾಹಿತಿ ನೀಡಬಹುದು. ಅಲ್ಲದೆ, ಆ ಪ್ರದೇಶದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದಾಗ ನಿಮ್ಮ ಡ್ಯಾಶ್ ಕ್ಯಾಮ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ದೃಶ್ಯಗಳು ರೆಕಾರ್ಡ್ ಆಗಿದ್ದರೆ ನೀಡಬಹುದು” ಎಂದು ಎಂದು ಟೈರರ್ ಮನವಿ ಮಾಡಿದ್ದಾರೆ.

ಪೊಲೀಸರು ಹೆಚ್ಚಿನ ವಿವರಗಳನ್ನು ದೃಢೀಕರಿಸದಿದ್ದರೂ, ಸ್ಥಳೀಯ ಸಮುದಾಯ ಗುಂಪುಗಳು ಬಲಿಪಶು ಪಂಜಾಬಿ ಮಹಿಳೆ ಎಂದು ಹೇಳಿಕೊಂಡಿವೆ. ಹತ್ತಿರದ ಓಲ್ಡ್‌ಬರಿ ಪ್ರದೇಶದಲ್ಲಿ ಬ್ರಿಟಿಷ್ ಸಿಖ್ ಮಹಿಳೆಯ ಮೇಲೆ ಜನಾಂಗೀಯ ಪ್ರೇರಿತ ಅತ್ಯಾಚಾರ ನಡೆದ ಬಳಿಕ, ಅಂತಹ ಎರಡನೇ ಘಟನೆ ಇದೀಗ ವರದಿಯಾಗಿದೆ.

ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...