Homeಕರ್ನಾಟಕತೂತುಬಿದ್ದ ಬೆಂಗಳೂರಿನ ಮತ್ತೊಂದು ರಸ್ತೆ; ಅವ್ಯವಸ್ಥೆಗೆ ಕೊನೆ ಎಂದು?

ತೂತುಬಿದ್ದ ಬೆಂಗಳೂರಿನ ಮತ್ತೊಂದು ರಸ್ತೆ; ಅವ್ಯವಸ್ಥೆಗೆ ಕೊನೆ ಎಂದು?

- Advertisement -
- Advertisement -

ಬೆಂಗಳೂರಿನ ಇಟ್ಟಮಡು ಮುಖ್ಯರಸ್ತೆಯ ಒಂದು ಭಾಗ ಇಂದು ಬೆಳಿಗ್ಗೆ ತೂತುಬಿದ್ದಿದೆ. ಆ ಮೂಲಕ ಸರಣಿ ರಸ್ತೆ ಅವಗಢಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ. ಸದ್ಯಕ್ಕೆ ಯಾವುದೇ ಜೀವಹಾನಿ ಸಂಭವಿಸದಂತೆ ರಸ್ತೆ ಕುಳಿ ಬಿದ್ದ ಭಾಗದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ ಎಂದು ವರದಿಯಾಗಿದೆ.

ಇಟ್ಟಮಡು ಮುಖ್ಯರಸ್ತೆಯ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಿಯೇ ಈ ಅವಘಡ ಸಂಭವಿಸಿರುವುದಾಗಿ ಎಎನ್ಐ ವರದಿ ಮಾಡಿದೆ.

ಕಳೆದ ವಾರ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಇದೇ ರೀತಿಯ ರಸ್ತೆಯ ಕುಳಿಬಿದ್ದ ಪ್ರಕರಣ ವರದಿಯಾಗಿತ್ತು. ಮೆಟ್ರೋ ನಿಲ್ದಾಣದ 50 ಮೀಟರ್ ದೂರದಲ್ಲಿ 4-5 ಅಡಿಯಷ್ಟು ಆಳದ ಗುಂಡಿ ಕಂಡುಬಂದಿತ್ತು. ಬಿಬಿಎಂಪಿಯ ಕಾರ್ಯವೈಖರಿ ಬಗ್ಗೆ ಟೀಕೆ ವ್ಯಕ್ತವಾಗಿತ್ತು.

ಅದಕ್ಕೂ ಒಂದು ವಾರಗಳ ಹಿಂದೆ ಬ್ರಿಗೇಡ್ ರಸ್ತೆಯಲ್ಲಿ ದೊಡ್ಡ ತೂತು ಬಿದ್ದಿದ್ದು ಪರಿಣಾಮ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾಗಿದ್ದಾನೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಪುನೀತ್ ಎಂದು ಗುರುತಿಸಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇಡೀ ದೃಶ್ಯಾವಳಿ ಸಿಸಿಕ್ಯಾಮರದಲ್ಲಿ ದಾಖಲಾಗಿದೆ.

ಬೆಂಗಳೂರಿನ ವಾಣಿಜ್ಯ ಪ್ರದೇಶವಾದ ಜನನಿಬಿಡ ಬ್ರಿಗೇಡ್ ಟವರ್ಸ್ ಬಳಿಯ ಶೂಲೆ ಸರ್ಕಲ್ ರಸ್ತೆ ಮಧ್ಯೆದಲ್ಲಿ ದೊಡ್ಡ ಕುಳಿ ಬಿದ್ದಿತ್ತು. ಬಹುಭಾಗ ಕುಸಿದ ಬಿದ್ದ ಪರಿಣಾಮ ದೊಡ್ಡ ತೂತು ಉಂಟಾಗಿದೆ. ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಚಲಿಸುತ್ತಿದ್ದಾಗ ರಸ್ತೆ ಮಧ್ಯೆದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಆಯತಪ್ಪಿ ಸವಾರ ನೆಲಕ್ಕುರುಳಿದ್ದನು.

ಅದಕ್ಕೂ ಎರಡು ದಿನಗಳ ಹಿಂದೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಒಂದರ ಕಬ್ಬಿಣದ ರಾಡ್‌ ಕುಸಿದು ತಾಯಿ ಹಾಗೂ ಮಗು ಮೃತಪಟ್ಟಿರುವ ದುರ್ಘಟನೆ ಜರುಗಿತ್ತು.

ಒಟ್ಟಾರೆಯಾಗಿ ಪ್ರತಿದಿನವೂ ಕಳಪೆ ಕಾಮಗಾರಿಗಳ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗುತ್ತಲೇ ಇವೆ. ಹಲವಾರು ಜೀವಹಾನಿಗಳು ಸಂಭವಿಸಿವೆ. ಆದರೆ ಆ ಅವ್ಯವಸ್ಥೆಗಳನ್ನು ನಿಲ್ಲಿಸಲು ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಗಮನ ಹರಿಸಿದಂತೆ ಕಾಣುತ್ತಿಲ್ಲ. ಈ ನಡುವೆ ಗುತ್ತಿಗೆದಾರರು ಸರ್ಕಾರದ ಮಂತ್ರಿಗಳು, ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂದು ಹಲವಾರು ಬಾರಿ ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಸರ್ಕಾರ ಹಲವು ರಂಗದಲ್ಲಿ ಜನರಿಂದ ವಿರೋಧ ಎದುರಿಸುತ್ತಿದೆ.

ಇದನ್ನೂ ಓದಿ: ಬೆಂಗಳೂರು ರಸ್ತೆಯಲ್ಲಿ ದೊಡ್ಡ ತೂತು: ಬೈಕ್ ಸವಾರನಿಗೆ ಅಪಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...