Homeಮುಖಪುಟ‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಮತ್ತೊಮ್ಮೆ ಹಿನ್ನಡೆ!

‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಮತ್ತೊಮ್ಮೆ ಹಿನ್ನಡೆ!

- Advertisement -
- Advertisement -

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, “ಚರ್ಮದ ನೇರ ಸಂಪರ್ಕವಿಲ್ಲದೆ ಸ್ತನವನ್ನು ಹಿಡಿಯುವುದು ಲೈಂಗಿಕ ದೌರ್ಜನ್ಯ ಅಲ್ಲ” ಎಂದು ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆ ನ್ಯಾಯಮೂರ್ತಿ ಪುಷ್ಪಾ ವಿ ಗಣದೇವಾಲಾ ಅವರು ಮತ್ತೊಮ್ಮೆ ಹಿನ್ನಡೆ ಅನುಭವಿಸಿದ್ದಾರೆ. ಸುಪ್ರೀಂಕೋರ್ಟ್‌‌‌ ಕೊಲಿಜಿಯಂ ಅವರನ್ನು ಶಾಶ್ವತ ನ್ಯಾಯಾಧೀಶರನ್ನಾಗಿ ಮಾಡಲಾಗುವುದಿಲ್ಲ ಎಂದು ಹೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೈಕೋರ್ಟ್‌ನ ಹುದ್ದೆಯನ್ನು ಇದು ಎರಡನೇ ಬಾರಿಗೆ ತಿರಸ್ಕರಿಸಿದೆ.

ಸುಪ್ರೀಂಕೋರ್ಟ್‌ ಕೊಲೀಜಿಯಂ ಅವರನ್ನು ತಿರಸ್ಕರಿಸಿರುವುದರಿಂದ ಪ್ರಸ್ತುತ ಬಾಂಬೆ ಹೈಕೋರ್ಟ್‌ನ ತಾತ್ಕಾಲಿಕ ನ್ಯಾಯಾಧೀಶರಾಗಿರುವ ಗಣದೇವಾಲಾ ಅವರು ಫೆಬ್ರವರಿಯಲ್ಲಿ ತಮ್ಮ ಅವಧಿ ಮುಗಿದ ನಂತರ ತಮ್ಮ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಮರಳಲಿದ್ದಾರೆ.

ಇದನ್ನೂ ಓದಿ:‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದ ಸುಪ್ರೀಂ

ಜನವರಿ 19 ರ ತೀರ್ಪಿನಲ್ಲಿ, ಜಸ್ಟಿಸ್ ಗಣದೇವಾಲಾ ಅವರು, “ಚರ್ಮದಿಂದ ಚರ್ಮಕ್ಕೆ ನೇರವಾಗಿ ಸಂಪರ್ಕ ಇಲ್ಲದೆ ಅಪ್ರಾಪ್ತ ವಯಸ್ಕರ ಸ್ತನವನ್ನು ಹಿಡಿಯುವುದು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ” ಎಂದು ತೀರ್ಪು ನೀಡಿದ್ದರು. ಈ ತೀರ್ಪಿನ ವಿರುದ್ದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾದ ನಂತರ ಸುಪ್ರೀಂ ಕೋರ್ಟ್ ನವೆಂಬರ್ 18 ರಂದು ತೀರ್ಪನ್ನು ರದ್ದುಗೊಳಿಸಿತ್ತು.

ನಂತರ, ಮತ್ತೊಂದು ಪ್ರಕರಣದಲ್ಲಿ ಕೂಡಾ ನ್ಯಾಯಮೂರ್ತಿ ಗಣದೇವಾಲಾ ಅವರು ವಿವಾದಾತ್ಮಕವಾಗಿ ತೀರ್ಪು ನೀಡಿದ್ದರು. “‘ಮಹಿಳಾ ಸಂತ್ರಸ್ತೆಯ ಕೈಗಳನ್ನು ಹಿಡಿದಿಟ್ಟುಕೊಳ್ಳುವುದು’ ಅಥವಾ ‘ಪ್ಯಾಂಟಿನ ಜಿಪ್ ಅನ್ನು ತೆರೆಯುವುದು’ ಲೈಂಗಿಕ ದೌರ್ಜನ್ಯದ ವ್ಯಾಖ್ಯಾನದ ಅಡಿಯಲ್ಲಿ ಬರುವುದಿಲ್ಲ” ಎಂದು POCSO(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಅಡಿಯಲ್ಲಿ ಶಿಕ್ಷೆಗೆ ಒಳಗಾಗಿದ್ದ ವ್ಯಕ್ತಿಯ ಶಿಕ್ಷೆಯನ್ನು ರದ್ದುಗೊಳಿಸಿದ್ದರು. ಆ ವ್ಯಕ್ತಿಯು ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು.

ಈ ತೀರ್ಪಿನ ನಂತರ, ನ್ಯಾಯಮೂರ್ತಿ ಗಣೆಡಿವಾಲಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಶಿಫಾರಸು ಮಾಡುವ ನಿರ್ಧಾರವನ್ನು ಕೊಲಿಜಿಯಂ ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...