Homeಮುಖಪುಟಹರಿಯಾಣ ಬಿಜೆಪಿಗೆ ಮತ್ತೊಂದು ಹಿನ್ನಡೆ; 'ಕಮಲ' ಬಿಟ್ಟು 'ಕೈ' ಹಿಡಿದ ಕುರುಕ್ಷೇತ್ರ ಮಾಜಿ ಸಂಸದೆ

ಹರಿಯಾಣ ಬಿಜೆಪಿಗೆ ಮತ್ತೊಂದು ಹಿನ್ನಡೆ; ‘ಕಮಲ’ ಬಿಟ್ಟು ‘ಕೈ’ ಹಿಡಿದ ಕುರುಕ್ಷೇತ್ರ ಮಾಜಿ ಸಂಸದೆ

- Advertisement -
- Advertisement -

ಹರಿಯಾಣದಲ್ಲಿ ಮೂವರು ಸ್ವತಂತ್ರ ಶಾಸಕರು ಆಡಳಿತಾರೂಢ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆದು ಕಾಂಗ್ರೆಸ್‌ಗೆ ಸೇರಿದ ಕೆಲವೇ ದಿನಗಳಲ್ಲಿ, ಕುರುಕ್ಷೇತ್ರದಿಂದ ಎರಡು ಅವಧಿಗೆ ಸಂಸದೆಯಾಗಿದ್ದ ಕೈಲಾಶೋ ಸೈನಿ ಅವರು ಕೇಸರಿ ಪಕ್ಷವನ್ನು ತೊರೆದು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಕೈ ಹಿಡಿದಿದ್ದಾರೆ.

ಕೈಲಾಶೋ ಅವರನ್ನು ಕುರುಕ್ಷೇತ್ರ ಜಿಲ್ಲೆಯ ಪ್ರಮುಖ ಒಬಿಸಿ ನಾಯಕಿ ಎಂದು ಪರಿಗಣಿಸಲಾಗಿದೆ. ಮೇ 25 ರ ಲೋಕಸಭೆ ಚುನಾವಣೆಯಲ್ಲಿ ಕುರುಕ್ಷೇತ್ರದಲ್ಲಿ ಇಂಡಿಯಾ ಬ್ಲಾಕ್ ಬೆಂಬಲಿತ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಶೀಲ್ ಗುಪ್ತಾ ಪರವಾಗಿ ಪ್ರಚಾರ ಮಾಡುವುದಾಗಿ ಅವರು ಘೋಷಿಸಿದರು.

ಅವರು 1998 ಮತ್ತು 1999 ರಲ್ಲಿ ಕುರುಕ್ಷೇತ್ರ ಲೋಕಸಭಾ ಸ್ಥಾನದಿಂದ ಕ್ರಮವಾಗಿ ಹರಿಯಾಣ ಲೋಕದಳ (ರಾಷ್ಟ್ರೀಯ) ಮತ್ತು ಭಾರತೀಯ ರಾಷ್ಟ್ರೀಯ ಲೋಕದಳದ ಟಿಕೆಟ್‌ಗಳಲ್ಲಿ ಆಯ್ಕೆಯಾದರು. ಐಎನ್‌ಡಿಎಲ್ ಅನ್ನು ಮೊದಲು ಹರಿಯಾಣ ಲೋಕದಳ (ರಾಷ್ಟ್ರೀಯ) ಎಂದು ಕರೆಯಲಾಗುತ್ತಿತ್ತು.

ಕಾಂಗ್ರೆಸ್‌ಗೆ ಸೇರ್ಪಡೆಯಾದ ನಂತರ ಕೈಲಾಶೋ ಮಾತನಾಡಿ, “ರಾಜ್ಯದಲ್ಲಿ 10 ವರ್ಷಗಳ ಆಡಳಿತದಲ್ಲಿ ಸಮಾಜದ ಪ್ರತಿಯೊಂದು ವರ್ಗವನ್ನು ಗೌರವಿಸಿದ ಭೂಪಿಂದರ್ ಸಿಂಗ್ ಹೂಡಾ ಅವರ ನೇತೃತ್ವದಲ್ಲಿ ನಾನು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ. ನಾನು ಬಹಳ ಸಮಯದಿಂದ ಯೋಚಿಸಿದ್ದೆ, ಕಾಂಗ್ರೆಸ್‌ನಂತಹ ಪ್ರಜಾಸತ್ತಾತ್ಮಕ ಪಕ್ಷ ಜಗತ್ತಿನಲ್ಲಿ ಬೇರೆಲ್ಲೂ ಇಲ್ಲ” ಎಂದರು.

ಪಕ್ಷ ತೊರೆಯಲು ಕಾರಣ ಹೇಳಿದ ಮಾಜಿ ಸಂಸದೆ, “ಬಿಜೆಪಿಯಲ್ಲಿ ಸಾರ್ವಜನಿಕರ ಬಗ್ಗೆ ಕಾಳಜಿ ಇಲ್ಲ; ಸಂವಿಧಾನ ಬದಲಿಸುವ ಷಡ್ಯಂತ್ರ ನಡೆಯುತ್ತಿದೆ. ರೈತರನ್ನು ದೊಣ್ಣೆಗಳಿಂದ ಥಳಿಸಲಾಗಿದೆ” ಎಂದರು.

ಕೈಲಾಶೋ ಅವರನ್ನು ಸ್ವಾಗತಿಸಿದ ಹೂಡಾ, “ಹರ್ಯಾಣದಲ್ಲಿ ಸುಮಾರು 40 ಮಾಜಿ ಶಾಸಕರು ಮತ್ತು ಸಂಸದರು ಈಗಾಗಲೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ, ಇತ್ತೀಚೆಗೆ ಪಕ್ಷಕ್ಕೆ ನೀಡಿದ ಮೂವರು ಸ್ವತಂತ್ರ ಶಾಸಕರ ಬೆಂಬಲವನ್ನು ಹೊರತುಪಡಿಸಿ. ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಬಹು,ತ ಕಳೆದುಕೊಂಡಿದೆ; ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದ್ದೇವೆ” ಎಂದರು.

ಕೈಲಾಶೋ ಅವರು ಸುಮಾರು ಮೂರು ದಶಕಗಳಿಂದ ಕುರುಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅವರು 1996 ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಆಕ್ಷನ್ ಪಾರ್ಟಿಯ ಟಿಕೆಟ್‌ನಲ್ಲಿ ಕುರುಕ್ಷೇತ್ರದಲ್ಲಿ ಸ್ಪರ್ಧಿಸಿದರು. ಆದರೆ, ಹರಿಯಾಣ ವಿಕಾಸ್ ಪಕ್ಷದ ಅಭ್ಯರ್ಥಿ ಓ ಪಿ ಜಿಂದಾಲ್ ಅವರು ಚುನಾವಣಾ ಯುದ್ಧದಲ್ಲಿ ಗೆದ್ದರು. 1998 ರಲ್ಲಿ, ಅವರು ಹರಿಯಾಣ ಲೋಕದಳ (ರಾಷ್ಟ್ರೀಯ) ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು ಕಾಂಗ್ರೆಸ್‌ನ ಕುಲದೀಪ್ ಶರ್ಮಾ ಅವರನ್ನು ಸೋಲಿಸಿದರು. ಐಎನ್‌ಎಲ್‌ಡಿ ಅಭ್ಯರ್ಥಿಯಾಗಿ ಕೈಲಾಶೋ ಕ್ಷೇತ್ರದಿಂದ 1999 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಓ ಪಿ ಜಿಂದಾಲ್ ಅವರನ್ನು ಸೋಲಿಸಿದರು. ಜಿಂದಾಲ್ ಪುತ್ರ ನವೀನ್ ಜಿಂದಾಲ್ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

2009ರಲ್ಲಿ ಹೂಡಾ ಮುಖ್ಯಮಂತ್ರಿಯಾಗಿದ್ದಾಗ ಕೈಲಾಶೋ ಕಾಂಗ್ರೆಸ್ ಸೇರಿದ್ದರು. ಆದಾಗ್ಯೂ, ಅವರು ಎರಡು ವಿಧಾನಸಭಾ ಚುನಾವಣೆಗಳಲ್ಲಿ (2009 ಮತ್ತು 2014) ಲಾಡ್ವಾ ಕ್ಷೇತ್ರದಿಂದ ಸೋತರು. 2019 ರ ವಿಧಾನಸಭಾ ಚುನಾವಣೆಗೆ ಮುನ್ನ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.

ಇದನ್ನೂ ಓದಿ; ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...